ನಕಲಿ ಪಾಸ್ ಮಾಡಿದವರ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ
Team Udayavani, Apr 9, 2020, 7:51 PM IST
ಬೆಂಗಳೂರು: ಕೋವಿಡ್ 19 ಸೋಂಕು ತಡೆಗೆ ಜಾರಿಯಾಗಿರುವ ಲಾಕ್‌ಡೌನ್ ಅವಧಿಯಲ್ಲಿ ಪೊಲೀಸರು ನೀಡಿರುವ ಪಾಸ್‌ಗಳನ್ನು ನಕಲಿ ಜೆರಾಕ್ಸ್ ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮೂರನೇ ಹಂತದಲ್ಲಿ ಕೋವಿಡ್ 19 ಸೋಂಕು ವಿಸ್ತರಿಸದಂತೆ ಸಮುದಾಯಕ್ಕೆ ಹರಡದಂತೆ ನೋಡಿಕೊಳ್ಳಲು ಕಠಿನ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಅಗತ್ಯ ಸೇವೆಗೆ ವ್ಯತ್ಯಯವಾಗದಂತೆ ತಡೆಯಲು ಸಾರ್ವಜನಿಕರಿಗೆ ಪಾಸ್ ವಿತರಿಸಲಾಗುತ್ತಿದೆ. ಆದರೆ ಪೊಲೀಸರು ನೀಡುತ್ತಿರುವ ಪಾಸ್‌ಗಳನ್ನು ನಕಲಿ ಮಾಡಿ ದುರ್ಬಳಕೆ ಮಾಡಲಾಗುತ್ತಿದೆ. ಪಾಸ್ ಜೆರಾಕ್ಸ್ ಮಾಡಿಸಿದವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಮತ್ತು ಅಲ್ಲದೇ ಈ ರೀತಿ ಮಾಡುತ್ತಿರುವುದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಹಚ್ಚಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಕೇವಲ ಬಿಜೆಪಿಯವರಿಗೆ ಮಾತ್ರ ಪಾಸ್ ನೀಡಲಾಗುತ್ತಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅಗತ್ಯ ಸೇವೆಗಳ ಪೂರೈಕೆಗಾಗಿ ಕಾಂಗ್ರೆಸ್‌ನವರಿಗೂ ಪಾಸ್ ನೀಡಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
MUST WATCH
ಹೊಸ ಸೇರ್ಪಡೆ
Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.