ಸೋಂಕು ನಿವಾರಕ ಮಾರ್ಗಕ್ಕೆ ಚಾಲನೆ
ಇಂಜಿನಿಯರಿಂದ ಅತ್ಯಂತ ಕಡಿಮೆ ವೆಚ್ಚದಲ್ಲಿ ನಿರ್ಮಾಣಎರಡು ಭಾಗದಲ್ಲಿ ಕಾರ್ಯನಿರ್ವಹಣೆ
Team Udayavani, Apr 10, 2020, 11:19 AM IST
ಚಿತ್ರದುರ್ಗ: ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ರಚಿಸಿರುವ ಸೋಂಕು ನಿವಾರಕ ಮಾರ್ಗದಲ್ಲಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹಾಗೂ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಸಂಚರಿಸಿದರು.
ಚಿತ್ರದುರ್ಗ: ನಗರದಲ್ಲಿ ಹೆಚ್ಚು ಜನ ಸೇರುವ ಜಾಗಗಳನ್ನು ಗುರುತಿಸಿ ಸೋಂಕು ನಿವಾರಕ ಮಾರ್ಗಗಳನ್ನು ನಿರ್ಮಿಸುತ್ತಿದ್ದು, ಈಗ ಎರಡು ಮಾರ್ಗಗಳು ಕಾರ್ಯನಿರ್ವಹಿಸುತ್ತಿವೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
ಜಿಲ್ಲಾಡಳಿತ ಮತ್ತು ನಗರಸಭೆ ವತಿಯಿಂದ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಸಿದ್ಧಪಡಿಸಿರುವ ಸೋಂಕು ನಿವಾರಕ ಮಾರ್ಗಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು. ಕೋವಿಡ್-19 ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ತಮಿಳುನಾಡು ಹಾಗೂ ಮೈಸೂರುಗಳಲ್ಲಿ ಮಾಡಿರುವ ಪ್ರಯೋಗವನ್ನು ಚಿತ್ರದುರ್ಗ ಜಿಲ್ಲೆಯಲ್ಲೂ ಮಾಡಿದ್ದು, ನಗರಸಭೆಯ ಇಂಜಿನಿಯರಗಳೇ ಸೇರಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಈ ಮಾರ್ಗ ನಿರ್ಮಿಸಿದ್ದಾರೆ ಎಂದರು.
ಈಗಾಗಲೇ ನಗರದ ಮುರುಘರಾಜೇಂದ್ರ ಮೈದಾನದಲ್ಲಿ ಸ್ಟೆ çನ್‌ಲೆಸ್ ಸ್ಟೀಲ್ ಬಳಸಿ 87 ಸಾವಿರ ವೆಚ್ಚದಲ್ಲಿ ಸೋಂಕು ನಿವಾರಕ ಮಾರ್ಗ ರಚಿಸಲಾಗಿತ್ತು. ಈಗ ಪ್ಲಾಸ್ಟಿಕ್ ಪೈಪ್‌ಗ್ಳನ್ನು ಬಳಸಿಕೊಂಡು 5 ಸಾವಿರ ವೆಚ್ಚದಲ್ಲೇ ಮತ್ತೂಂದು ಮಾರ್ಗವನ್ನು ಇಂಜಿನಿಯರುಗಳು ಸಿದ್ಧಪಡಿಸಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಆಸ್ಪತ್ರೆಯಲ್ಲೂ ಎರಡು ಸೋಂಕು ನಿವಾರಕ ಮಾರ್ಗ ಮಾಡಿಕೊಡಲು ಬೇಡಿಕೆ ಇದೆ. ಈ ಬಗ್ಗೆ ನಗರಸಭೆಯೊಂದಿಗೆ ಚರ್ಚಿಸಿದ್ದೇನೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಆದರೂ ಸಾರ್ವಜನಿಕರು ಸೋಂಕು ಹರಡದಂತೆ ತಡೆಯಲು ಕಡ್ಡಾಯವಾಗಿ ಮನೆಯಲ್ಲೇ ಇರಬೇಕು. ಹೊರಗೆ ಬಂದರೂ ಸಾಮಾಜಿಕ ಅಂತರದ ಕಡೆ ಗಮನ ಇರಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಮಾತನಾಡಿ, ಕೋವಿಡ್-19 ಸಂಬಂಧಪಟ್ಟಂತೆ ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ ಸೋಂಕು ನಿವಾರಕ ಮಾರ್ಗ ಮಾಡಲಾಗಿದೆ. ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡುತ್ತಿದ್ದಾರೆ. ಅಗತ್ಯ ವಸ್ತುಗಳ ಖರೀದಿಗಾಗಿ ಕೆಲವರು ಮಾತ್ರ ಹೊರಗಡೆ ಬರುತ್ತಿದ್ದಾರೆ. ಸಾರ್ವಜನಿಕರು ಆದಷ್ಟು ಮನೆಯಲ್ಲಿ ಇರುವುದು ಉತ್ತಮ ಎಂದು ಹೇಳಿದರು. ಗ್ರಾಮೀಣ ಮತ್ತು ನಗರದ ಪ್ರದೇಶದ ವಾರ್ಡ್ ವ್ಯಾಪ್ತಿಗಳಲ್ಲಿ ಶಿಕ್ಷಕರನ್ನು ನಿಯೋಜನೆ ಮಾಡಿ, ಅಲ್ಲಿನ ಪ್ರದೇಶಗಳ ಕುಂದು ಕೊರತೆಗಳ ಮಾಹಿತಿ ಸಂಗ್ರಹಿಸಿ, ಸಮಸ್ಯೆಗಳ ನಿವಾರಣೆಗೆ ಕ್ರಮಕೈಗೊಳ್ಳಲಾಗುವುದು ಎಂದರು.
ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಮಾತನಾಡಿ, ಮಾರುಕಟ್ಟೆಗಳಲ್ಲಿ ಹೆಚ್ಚು ಜನಸಂದಣಿ ಇರುವುದರಿಂದ ಸೋಂಕು ನಿವಾರಕ ಮಾರ್ಗ ಅಳವಡಿಸಲಾಗಿದೆ. ಸಾರ್ವಜನಿಕರು ಇದೇ ಮಾರ್ಗದ ಮೂಲಕ ಸಂಚರಿಸಬೇಕು. ಈ ಮಾರ್ಗದಲ್ಲಿ ಸೋಡಿಯಂ ಹೈಪೊಕ್ಲೋರೈಡ್ ಹಾಗೂ ನೀರಿನಿಂದ ಸೋಂಕು ನಿವಾರಕ ದ್ರಾವಣವನ್ನು ಸಿದ್ಧಪಡಿಸಲಾಗಿದೆ. ಸೋಂಕು ನಿವಾರಕ ಮಾರ್ಗ ಬೆಳಗ್ಗೆ 4ರಿಂದ 9 ರವರೆಗೆ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಾಜಶೇಖರ್ ಹಾಗೂ ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.