ಕಡಲೆ ಖರೀದಿ ಪ್ರಕ್ರಿಯೆ ಆರಂಭಿಸಿದ ಜಿಲ್ಲಾಡಳಿತ

ನೋಂದಣಿ ಅವಧಿಯೂ ವಿಸ್ತರಣೆ

Team Udayavani, Apr 10, 2020, 11:44 AM IST

10-April-06

ಧಾರವಾಡ: ಜಿಲ್ಲೆಯಲ್ಲಿ ಆರಂಭಿಸಿರುವ 13 ಕಡಲೆ ಖರೀದಿ ಕೇಂದ್ರಗಳಲ್ಲಿ ಕಡಲೆ ಖರೀದಿ ಪ್ರಕ್ರಿಯೆಗೆ ಗುರುವಾರ ಚಾಲನೆ ದೊರೆತಿದ್ದು, ಇದಲ್ಲದೇ ರೈತರ ನೋಂದಣಿಯ ಅವಧಿಯನ್ನೂ ಜಿಲ್ಲಾಡಳಿತ ವಿಸ್ತರಿಸಿದೆ. ಸರಕಾರದ ಆದೇಶವಿದ್ದರೂ ಕಡಲೆ ಖರೀದಿ ಕೇಂದ್ರಗಳು ಬಂದ್‌ ಆಗಿರುವ ಹಾಗೂ ನೋಂದಣಿ ಅವಧಿ ವಿಸ್ತರಣೆ ಆಗದ ಕುರಿತು ಮತ್ತು ರೈತರಿಗಾಗಿರುವ ಸಮಸ್ಯೆ ಕುರಿತು ಉದಯವಾಣಿ ಮಾ.9ರಂದು “ಕಡಲೆ ಖರೀದಿ ಕೇಂದ್ರಗಳಿಗೆ ಗ್ರಹಣ’ ಶೀರ್ಪಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು.

ವರದಿ ಪ್ರಕಟಗೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಕಡಲೇ ಖರೀದಿ ಕೇಂದ್ರಗಳ ಕಾರ್ಯಾರಂಭ ಮಾಡುವುದರ ಜತೆ ರೈತರ ನೋಂದಣಿ ಅವಧಿಯನ್ನೂ ಏ.12ರ ಬದಲಿಗೆ ಏ.30ರವರೆಗೆ ವಿಸ್ತರಿಸಿದೆ. ಡಿಸಿ ನೇತೃತ್ವದಲ್ಲಿ ಸಭೆ: ಕಡಲೆ ಖರೀದಿ ಕುರಿತು ರೈತ ಮುಖಂಡರ ಹಾಗೂ ಕೃಷಿ ಉತ್ಪನ್ನ ಮಾರಾಟ ಇಲಾಖೆ ಅ ಧಿಕಾರಿಗಳೊಂದಿಗೆ ಸಭೆ ನಡೆಸಿದ ಡಿಸಿ ದೀಪಾ ಚೋಳನ್‌, 2019-20 ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆಯನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಯೋಜನೆಯಡಿ ಜಿಲ್ಲೆಯ 13 ಖರೀದಿ ಕೇಂದ್ರಗಳಲ್ಲಿ ಏ.30 ರವರೆಗೆ ನೋಂದಾಯಿಸಿಕೊಂಡು ಮೇ 12 ರವರೆಗೆ ಖರೀದಿ ಪ್ರಕ್ರಿಯೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಎಫ್‌ಎಕ್ಯೂ ಗುಣಮಟ್ಟದ ಕಡಲೆ ಕಾಳು ಉತ್ಪನ್ನಕ್ಕೆ ಪ್ರತಿ ಕ್ವಿಂಟಲ್‌ಗೆ 4875 ರೂ. ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು,ಹುಬ್ಬಳ್ಳಿ, ಧಾರವಾಡ ಎಪಿಎಂಸಿ ಮುಖ್ಯ ಮಾರುಕಟ್ಟೆ ಪ್ರಾಂಗಣ ಸೇರಿದಂತೆ ಜಿಲ್ಲೆಯ ಹೆಬ್ಬಳ್ಳಿ, ಉಪ್ಪಿನಬೆಟಗೇರಿ, ನೂಲ್ವಿ, ಹೆಬಸೂರು, ಕುಂದಗೊಳ, ಯಲಿವಾಳ, ಯರಗುಪ್ಪಿ, ಅಣ್ಣಿಗೇರಿ, ನವಲಗುಂದ, ಮೊರಬ ಹಾಗೂ ತಿರ್ಲಾಪುರ ಗ್ರಾಮಗಳಲ್ಲಿ ಆರಂಭಿಸಿರುವ (13) ಖರೀದಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು. ಜಿಪಂ ಸಿಇಒ ಡಾ|ಬಿ.ಸಿ.ಸತೀಶ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ವ್ಯವಸ್ಥಾಪಕ ಸಚೀನ್‌ ಪಾಟೀಲ್‌, ಕೃಷಿ ಉತ್ಪನ್ನ ಮಾರಾಟ ಇಲಾಖೆ ಉಪನಿರ್ದೇಶಕ ಪ್ರಭಾಕರ ಅಂಗಡಿ ಇದ್ದರು.

ಕಡಲೆ ಖರೀದಿ ಕೇಂದ್ರಗಳಲ್ಲಿ ಸಿಬ್ಬಂದಿ ಮಾಸ್ಕ್ ಧರಿಸಿ ಕಾರ್ಯ ನಿರ್ವಹಿಸುತ್ತಿದ್ದರೆ ಕಡಲೆ ಚೀಲ ತೂಕ ಮಾಡಿ ಹೊತ್ತು ಹಾಕುವ ಹಮಾಲರು ಮಾಸ್ಕ್, ಸ್ಯಾನಿಟೈಜರ್‌ ಇಲ್ಲದೇ ಹಾಗೆ ಕೆಲಸ ನಿರ್ವಹಿಸುತ್ತಿದ್ದು, ಮಾಸ್ಕ್ ಹಾಗೂ ಸ್ಯಾನಿಟೈಜರ್‌ ನೀಡುವಂತೆ ಆಯಾ ಸಹಕಾರಿ ಸಂಘಗಳಿಗೆ ಸೂಚಿಸಿದ್ದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ.

ಜಿಲ್ಲೆಯಲ್ಲಿ 18088 ನೋಂದಾಯಿತ ಕಡಲೆ ಬೆಳೆಗಾರರಿದ್ದು, 1.6 ಲಕ್ಷ ಕ್ವಿಂಟಲ್‌ ಖರೀದಿ ಗುರಿ ಹೊಂದಲಾಗಿದೆ. ಈಗಾಗಲೇ 8885 ರೈತರಿಂದ 2533 ಕ್ವಿಂಟಲ್‌ ಕಡಲೆ ಖರೀದಿಸಲಾಗಿದೆ. ಉಳಿದ ರೈತರು ಏ.30ರವರೆಗೆ ನೋಂದಣಿ ಮಾಡಿಕೊಳ್ಳಬೇಕು.
ಐ.ಬಿ. ರಾಜಶೇಖರ್‌,
ಜಂಟಿ ಕೃಷಿ ನಿರ್ದೇಶಕ

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.