ರೈತರ ಬೆಳೆ ಮಾರಾಟಕ್ಕೆ ಎಪಿಎಂಸಿ ಅವಕಾಶ

ಧ್ವನಿವರ್ಧಕದಲ್ಲಿ ಎಪಿಎಂಸಿಗೆ ಬರುವ ರೈತರಿಗೆ ಕೊರೊನಾ ಜಾಗೃತಿ ಮೂಡಿಸಿ: ಡಿಸಿ

Team Udayavani, Apr 10, 2020, 11:58 AM IST

10-April-08

ವಿಜಯಪುರ: ಲಾಕ್‌ಡೌನ್‌ ಇದ್ದರೂ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದಲ್ಲದೇ, ಪಡಿತರ ಅಕ್ಕಿ ಹಾಗೂ ಗೋಧಿ ಹಂಚಿಕೆ ಆರಂಭಿಸಿದ್ದು, ಸಾಮಾಜಿಕ ಅಂತರ ಕಾಯುವುದು ಕಡ್ಡಾಯ. ಇದಲ್ಲದೇ ರೈತರ ಬೆಳೆ ಮಾರಾಟಕ್ಕೆ ಎಪಿಎಂಸಿ ಮಾರುಕಟ್ಟೆಯಲ್ಲಿ ಅವಕಾಶ ನೀಡಿದ್ದು, ಧ್ವನಿವರ್ಧಕದ ಮೂಲಕ ಕೊರೊನಾ ರೋಗದ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಸೂಚಿಸಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪಡಿತರ, ತರಕಾರಿ ಮತ್ತು ಹಣ್ಣು, ಮೀನು ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದರೂ ಸಾಮಾಜಿಕ ಅಂತರ ಕಾಯುವುದು ಕಡ್ಡಾಯ. ಎಪಿಎಂಸಿ ಮಾರುಕಟ್ಟೆಯಲ್ಲಿ ಧ್ವನಿವರ್ಧಕದ ಮೂಲಕ ಕೊರೊನಾ ರೋಗ ನಿಯಂತ್ರಣಕ್ಕಾಗಿ ಮಾಸ್ಕ್ಧ ರಿಸಿವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ರೈತರು, ವ್ಯಾಪಾರಿಗಳಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಿದರು.

ದ್ರಾಕ್ಷಿ ಆನ್‌ಲೈನ್‌ ಟ್ರೇಡಿಂಗ್‌ಗೆ ತಕ್ಷಣ ಕ್ರಮಕೈಗೊಳ್ಳಬೇಕು. ದ್ರಾಕ್ಷಿ ಬೆಳೆಗಾರರಿಗೆ ಸುಲಭವಾಗಿ ಡಿಪ್ಪಿಂಗ್‌ ಆಯಿಲ್‌ ಸಿಗುವಂತೆ ವಿವಿಧ ರಾಜ್ಯಗಳೊಂದಿಗೆ ಸಂಪರ್ಕ ಮಾಡಿ, ಸಮಸ್ಯೆ ಪರಿಹಾರ ಕಂಡುಕೊಳ್ಳಬೇಕು. ಜಿಲ್ಲೆಯಾದ್ಯಂತ ಮೀನು ಮಾರಾಟಕ್ಕೂ ಅವಕಾಶ ಕಲ್ಪಿಸಿದ್ದು, ಪಾರ್ಸಲ್‌ ಪಡೆಯಲು ಮಾತ್ರ ಅವಕಾಶವಿದ್ದು, ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ಯಲಗೂರ ಗೋಶಾಲೆಯಲ್ಲಿರುವ 300 ಜಾನುವಾರುಗಳಿಗೆ ಉಂಟಾಗಿರುವ ಮೇವು-ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿಗೆ 10 ಖರೀದಿ ಕೇಂದ್ರ ಆರಂಭಿಸಲಾಗಿದ್ದು, ಇನನು 37 ಕೇಂದ್ರ ಶೀಘ್ರವೇ ಆರಂಭಿಸಬೇಕು. ಈಗಾಗಲೇ ತೊಗರಿ ಖರೀದಿ ಕೇಂದ್ರದಲ್ಲಿ 79 ಸಾವಿರ ರೈತರಿಂದ ಖರೀದಿಸಿದ್ದು, ಬಾಕಿ ಉಳಿದ ರೈತರ ತೊಗರಿ ಖರಿದೀಗೂ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಾದ್ಯಂತ ಕಳ್ಳಬಟ್ಟಿ ತಯಾರಿಕೆ ನಿಯಂತ್ರಣಕ್ಕೆ 283 ಕಡೆಗಳಲ್ಲಿ ದಾಳಿ ಮಾಡಲಾಗಿ, 18 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದರು. ಜಿಪಂ ಸಿಇಒ ಗೋವಿಂದರೆಡ್ಡಿ, ಎಸ್ಪಿ ಅನುಪಮ್‌ ಅಗರವಾಲ್‌, ಎಡಿಸಿ ಡಾ| ಔದ್ರಾಮ್‌, ಡಿಎಚ್‌ಒ ಡಾ| ಮಹೇಂದ್ರ ಕಾಪ್ಸೆ, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ  ಡಾ| ಮುಕುಂದ ಗಲಗಲಿ, ಜಿಲ್ಲಾಸ್ಪತ್ರೆ ಸರ್ಜನ್‌ ಡಾ| ಶರಣಪ್ಪ ಕಟ್ಟಿ, ಸರ್ವೇಕ್ಷಣಾಧಿಕಾರಿ ಡಾ| ಎಂ.ಬಿ.ಬಿರಾದಾರ, ಆಹಾರ ಇಲಾಖೆಯ ಸುರೇಖಾ, ಡಾ| ಧಾರವಾಡಕರ, ಡಾ| ಲಕ್ಕಣ್ಣವರ್‌, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಪ್ರಾಣೇಶ ಜಾಹಗೀರದಾರ ಇದ್ದರು.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.