ದೆಹಲಿಗೆ ಹೋದ ವ್ಯಕ್ತಿಗೆ ನೆಗೆಟಿವ್, ಆತನ ಸಂಪರ್ಕಕ್ಕೆ ಬಂದ ವ್ಯಕ್ತಿಗೆ ಸೋಂಕು ಪಾಸಿಟಿವ್ !
ಕಲಬುರಗಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ
Team Udayavani, Apr 10, 2020, 2:02 PM IST
ಕಲಬುರಗಿ: ಕೋವಿಡ್-19 ಸೋಂಕಿನಿಂದ ಇಬ್ಬರು ಸಾವನ್ನಪ್ಪಿರುವ ಕಲಬುರಗಿಯಲ್ಲಿ ಮತ್ತೊಂದು ಹೊಸ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಪೀಡಿತರ ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದೆ.
ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ತಬ್ಲಿಘಿ ಎ- ಜಮಾತ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡ ವ್ಯಕ್ತಿಯ ಸಂಪರ್ಕದಲ್ಲಿದ್ದ 55 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಅಚ್ಚರಿ ಎಂದರೆ ದೆಹಲಿಗೆ ಹೋಗಿದ್ದ ವ್ಯಕ್ತಿಗೆ ಕೋವಿಡ್-19 ನೆಗೆಟಿವ್ ಇದೆ.
ದೆಹಲಿಯ ಮಸೀದಿಗೆ ಹೋದವರ ಸಂಪರ್ಕಕ್ಕೆ ಬಂದಿದ್ದ ಈ ವ್ಯಕ್ತಿ ತನಗೆ ಜ್ವರ, ಕೆಮ್ಮು ಬಂದ ಹಿನ್ನೆಲೆಯಲ್ಲಿ ಸ್ವತಃ ತಾನೇ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಿದ್ದ ಎಂದು ವರದಿಯಾಗಿದೆ.
ಶಹಾಬಾದ್ ಮಾದರಿ: ಜಿಲ್ಲೆಯಿಂದ ಇದುವರೆಗೂ ದೆಹಲಿಯ ಮಸೀದಿಗೆ 26 ಜನರು ಹೋಗಿದ್ದವರನ್ನು ಪತ್ತೆ ಹಚ್ಚಲಾಗಿದೆ. ಯಾರಿಗೂ ಸೋಂಕಿಲ್ಲ ಎಂದು ದೃಢಪಟ್ಟಿದೆ.
ಈ ಪೈಕಿ ಶಹಾಬಾದ್ ಪಟ್ಟಣದ ವ್ಯಕ್ತಿ ಸಹ ಸೇರಿದ್ದು, ಆತನಿಗೂ ಕೋವಿಡ್-19 ನೆಗೆಟಿವ್ ಇದೆ ಎಂದು ವರದಿ ಬಂದಿದೆ. ಆದರೆ, ಆತನ ಸಂಪರ್ಕದಲ್ಲಿದ್ದ ಪತ್ನಿ ಮತ್ತು ಸೊಸೆಗೆ ಸೋಂಕು ಖಚಿತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈಗ ಇದೇ ಮಾದರಿಯಲ್ಲಿ ದೆಹಲಿಗೆ ಹೋದ ವ್ಯಕ್ತಿ ಬದಲಿಗೆ ಆತನ ಸಂಪರ್ಕಕ್ಕೆ ಬಂದ ವ್ಯಕ್ತಿಗೆ ಮಹಾಮಾರಿ ರೋಗ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ಇನ್ನು, ಸೋಂಕಿತ ವ್ಯಕ್ತಿ ಕಲಬುರಗಿ ನಗರದ ನಿವಾಸಿ ಎಂದು ಹೇಳಲಾಗುತ್ತಿದ್ದು, ಸದ್ಯ ಇಎಸ್ಐ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಇಂದು ಇನ್ನೂ ಏಳು ಜನ ಶಂಕಿತರ ರಕ್ತ ಮತ್ತು ಗಂಟಲು ದ್ರಾವಣ ಮಾದರಿಯನ್ನು ಸಂಗ್ರಹಿಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.