ಕಂಟೇನ್ಮೆಂಟ್‌ನಲ್ಲಿ ಶೋಧ ಚುರುಕು

10ಕ್ಕೂ ಹೆಚ್ಚು ತಂಡದಿಂದ ಸೋಂಕಿತರ ಹುಡುಕಾಟಪರ ಊರಿನರಿಗೆ ಸೀಲ್‌

Team Udayavani, Apr 10, 2020, 2:01 PM IST

10-April-17

ಗದಗ: ರಂಗನವಾಡದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಸಮೀಕ್ಷೆ ನಡೆಸಿದರು.

ಗದಗ: ರಂಗನವಾಡದ ವೃದ್ಧೆಯೊಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇವರಿಗೆ ಯಾರಿಂದ ಸೋಂಕು ತಗುಲಿದೆ ಎಂಬ ಕುರಿತು ಇದುವರೆಗೂ ನಿಖರ ಮಾಹಿತಿಯಿಲ್ಲ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಕಂಟೇನ್ಮೆಂಟ್‌ ಪ್ರದೇಶಗಳಲ್ಲಿ ಸಮೀಕ್ಷಾ ಕಾರ್ಯವನ್ನು ಚುರುಕುಗೊಳಿಸಿದೆ.

ರಂಗನವಾಡ ಹಾಗೂ ಎಸ್‌.ಎಂ. ಕೃಷ್ಣ ನಗರದಲ್ಲಿ 10ಕ್ಕೂ ಹೆಚ್ಚು ತಂಡಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಸೋಂಕಿತರಿಗಾಗಿ ಜಾಲಾಡುತ್ತಿದ್ದಾರೆ. ಅಲ್ಲದೇ ಮೃತರ ಮನೆಯವರು ಹಾಗೂ ಸಂಬಂಧಿ ಕರು ಸೇರಿದಂತೆ ಪ್ರಾಥಮಿಕ ಸಂಪರ್ಕದಲ್ಲಿದ್ದ 35 ಜನರನ್ನು ಕೊರೊನಾ ಪರೀಕ್ಷೆ ಒಳಪಡಿಸಿದರೂ, ವೃದ್ಧೆಗೆ ಹರಡಿದ್ದ ಸೋಂಕಿನ ಮೂಲ ಪತ್ತೆಯಾಗಿಲ್ಲ. ಇದು ಜಿಲ್ಲೆಯ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದರೆ, ಜಿಲ್ಲಾಡಳಿತವನ್ನು ಚಿಂತೆಗೀಡುಮಾಡಿದೆ. ಈ ನಡುವೆ ಗುರುವಾರ ಬೆಳಗಿನಜಾವ ಸೋಂಕಿತ ವೃದ್ಧೆ ಮೃತಪಟ್ಟಿದ್ದರಿಂದ ರಂಗನವಾಡ ಭಾಗದ ದಾಸರ ಓಣಿ, ಖೀಲ್ಲಾ ಓಣಿ, ಹಳೇ ಕಚೇರಿ ಹಿಂಭಾಗದಲ್ಲಿ, ರೆಹಮತ ನಗರ, ಎಸ್‌. ಎಂ. ಕೃಷ್ಣ ನಗರದಲ್ಲಿ ಸಮೀಕ್ಷೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ.

ಓರ್ವ ಆಶಾ ಕಾರ್ಯಕರ್ತೆ, ಕಿರಿಯ ಆರೋಗ್ಯ ಸಹಾಯಕಿಯನ್ನು ಒಳಗೊಂಡಂತೆ ತಲಾ ಒಂದು ತಂಡವನ್ನು ರಚಿಸಲಾಗಿದೆ. ರಂಗನವಾಡ ಹಾಗೂ ಎಸ್‌.ಎಂ. ಕೃಷ್ಣ ನಗರದಲ್ಲಿ ತಲಾ 7- 8 ತಂಡಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಸಮೀಕ್ಷೆ ನಡೆಸುತ್ತಿದ್ದಾರೆ. ಮನೆ ಮನೆಗೆ ಭೇಟಿ ನೀಡಿದ್ದಾರೆ. ಮನೆಯಲ್ಲಿರುವ ಸದಸ್ಯರ ಸಂಖ್ಯೆ, ಅವರ ಆರೋಗ್ಯ ಸ್ಥಿತಿಗತಿ, ಫೆಬ್ರವರಿ ಅಂತ್ಯದ ಬಳಿಕ ಮನೆಗೆ ಬಂದಿದ್ದ ಅತಿಥಿಗಳು, ನೆಂಟರಿಷ್ಟರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

ಅವರಲ್ಲಿ ಊರಿಂದ ಬಂದವರಿಗೆ ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್‌ ಅವಧಿಯ ಸೀಲ್‌ ಹಾಕಲಾಗುತ್ತಿದೆ. ಈ ವೇಳೆ ಯಾವುದೇ ರೀತಿಯ ರೋಗ ಲಕ್ಷಣಗಳು ಕಂಡು ಬಂದರೆ, ಸಮೀಕ್ಷಾ ಕಾರ್ಯದಲ್ಲಿ ತೊಡಗಿರುವ ಕಿರಿಯ ಆರೋಗ್ಯ ಸಹಾಯಕಿಯರು ಪ್ರಾಥಮಿಕ ಹಂತದಲ್ಲಿ ತಪಾಸಣೆ ನಡೆಸಿ, ಔಷಧೋಪಚಾರ ನೀಡುತ್ತಿದ್ದಾರೆ.

ಒಂದೆರಡು ದಿನಗಳಲ್ಲಿ ಜ್ವರ, ಕಫ ಹಾಗೂ ಕೆಮ್ಮು, ಶೀತ ಕಡಿಮೆಯಾಗದಿದ್ದರೆ, ವೈದ್ಯಕೀಯ ತಪಾಸಣೆಗೆ ಶಿಫಾರಸ್ಸು ಮಾಡಲಾಗುವುದು. ಆದರೆ ಸದ್ಯಕ್ಕೆ ಅಂತಹ ಯಾವುದೇ ಪ್ರಕರಣಗಳು ಕಂದು ಬಂದಿಲ್ಲ ಎಂದು ಸಮೀಕ್ಷಾಧಿ ಕಾರಿಗಳು ತಿಳಿಸಿದರು.

ಸಮೀಕ್ಷೆಯಿಂದ 11 ಜನ ಪತ್ತೆ
ಕೋವಿಡ್ ಸೋಂಕಿನಿಂದ ಮೃತ ಪಟ್ಟಿರುವ ವೃದ್ಧೆಯೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ಕು ಕುಟುಂಬಗಳ 11 ಜನರನ್ನು ಸಮೀಕ್ಷೆ ವೇಲೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ರಂಗನವಾಡದ ಕಂಟೇನ್ಮೆಂಟ್‌ ಪ್ರದೇಶ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸುತ್ತಿರುವ ಸಿಬ್ಬಂದಿ ವೃದ್ಧೆಯೊಂದಿಗೆ ಸಂಪರ್ಕದಲ್ಲಿದ್ದ 11 ಜನರನ್ನು ಗುರುತಿಸಿದ್ದಾರೆ. ಬಳಿಕ ಹಿರಿಯ ಅಧಿಕಾರಿಗಳ ನೆರವು ಪಡೆದು, ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಕೊರೊನಾ ತಪಾಸಣೆಗಾಗಿ ಅವರಿಂದ ಗಂಟಲು
ದ್ರವ ಹಾಗೂ ರಕ್ತದ ಮಾದರಿಯನ್ನು ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ರಂಗನವಾಡದ ವೃದ್ಧೆಗೆ ಕೋವಿಡ್  ಸೋಂಕು ಹೇಗೆ?ಯಾರಿಂದ ತಗುಲಿದೆ ಎಂಬುದನ್ನು ಪತ್ತೆ ಮಾಡಲು ಹಲವು ತಂಡಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ
ಕಾರ್ಯನಿರ್ವಹಿಸುತ್ತಿದ್ದಾರೆ. ರಂಗನವಾಡದಲ್ಲಿ ನಡೆದ ಸಮೀಕ್ಷೆಯಿಂದ ವೃದ್ಧೆಯೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 11 ಜನರನ್ನು ಗುರುತಿಸಿ, ಜಿಲ್ಲಾ ಆಸ್ಪತ್ರೆಗೆ
ರವಾನಿಸಲಾಗಿದೆ.
ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.