ಸಿಎಂ ನಿಧಿಗೆ 3 ಕೋಟಿ ರೂ.
Team Udayavani, Apr 10, 2020, 3:03 PM IST
ದೇವನಹಳ್ಳಿ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ವತಿಯಿಂದ ಮುಖ್ಯಮಂತ್ರಿ ಕೋವಿಡ್ 19 ಪರಿಹಾರ ನಿಧಿಗೆ 3 ಕೋಟಿ ರೂ.ಗಳ ಚೆಕ್ ಅನ್ನು ಬೆಂಗಳೂರಿನ ಕಚೇರಿಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರಾಧಿಕಾರದ ಅಧ್ಯಕ್ಷ ರವಿ ಹಾಗೂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ವಿ. ಸಣ್ಣಪ್ಪಯ್ಯ ಹಸ್ತಾಂತರಿಸಿದರು.
ಪ್ರಾಧಿಕಾರದ ಅಧ್ಯಕ್ಷ ರವಿ ಚೆಕ್ ವಿತರಿಸಿ ಮಾತನಾಡಿ, ಕೋವಿಡ್ 19 ಸೋಂಕು ರಾಜ್ಯದಲ್ಲಿ ಪತ್ತೆಯಾದ ನಂತರ ಲಾಕ್ ಡೌನ್ನಿಂದ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ಅಗತ್ಯ ಸೇವೆಗಾಗಿ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆ ಪ್ರಾಧಿಕಾರ ವತಿಯಿಂದ ಸಿಎಂ ನಿಧಿಗೆ 03 ಕೋಟಿ ರೂ. ನೀಡಲಾಗಿದೆ. ಸರ್ಕಾರ ಸಂಕಷ್ಟದಲ್ಲಿದ್ದರೂ ಕೋವಿಡ್ 19 ನಿಗ್ರಹಕ್ಕೆ ಕಠಿಣವಾಗಿ ನಿರ್ಧಾರ ತೆಗೆದುಕೊಳ್ಳುತ್ತಿರುವುದು ಶ್ಲಾಘ ನೀಯ. ಸರ್ಕಾರದ ಆದೇಶ ಕಟ್ಟುನಿ ಟ್ಟಾಗಿ ಪಾಲಿಸಬೇಕು ಎಂದರು. ಸಿಎಂರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಡೀಸಿ ರವೀಂದ್ರ, ಉಪ ನಿರ್ದೇಶಕ ಮಂಜುನಾಥ್ ವ್ಯವಸ್ಥಾಪಕ ನವೀನ್ ಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.