500 ರೂ. ದಂಡ ಪಾವತಿಸಿದ ರಿಷಿ ಧವನ್
Team Udayavani, Apr 11, 2020, 5:41 AM IST
ಹೊಸದಿಲ್ಲಿ: ಕೋವಿಡ್ ವೈರಸ್ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ಭಾರತ ಸಹಿತ ಬಹುತೇಕ ಎಲ್ಲ ರಾಷ್ಟ್ರಗಳು ಲಾಕ್‌ಡೌನ್ ಮೊರೆ ಹೋಗಿವೆ. ಎ. 14ರ ವರೆಗೆ ಲಾಕ್‌ಡೌನ್ ಜಾರಿಯಲ್ಲಿದ್ದರೂ ಟೀಮ್ ಇಂಡಿಯಾದ ಆಟಗಾರ ರಿಷಿ ಧವನ್ ಬೇಜವಾಬ್ದಾರಿತನ ಮೆರೆದು ಲಾಕ್‌ಡೌನ್ ನಿಯಮ ಉಲ್ಲಂಘನೆ ಮಾಡಿ 500 ರೂ. ದಂಡ ತೆತ್ತಿರುವ ಬಗ್ಗೆ ವರದಿಯಾಗಿದೆ.
ರಣಜಿ ಕ್ರಿಕೆಟ್‌ನಲ್ಲಿ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಪರ ಆಡುವ ರಿಷಿ ಧವನ್ ಲಾಕ್‌ಡೌನ್ ನಡುವೆ ಪ್ರತ್ಯೇಕ ಪಾಸ್ ಇಲ್ಲದೆ ಬ್ಯಾಂಕಿಗೆ ತೆರಳುತ್ತಿರುವಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದು 500 ರೂ. ದಂಡ ತೆತ್ತಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮಿಂಚುತ್ತಿರುವ 30 ವರ್ಷದ ಧವನ್, ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಮುಂಬೈ ಇಂಡಿಯನ್ಸ್ ಪರ ಆಡಿ ಗಮನ ಸೆಳೆದಿದ್ದರು. 2016ರಲ್ಲಿ ಭಾರತ “ಎ’ ತಂಡದ ಪರ ನೀಡಿದ್ದ ಭರ್ಜರಿ ಪ್ರದರ್ಶನದಿಂದ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ರಿಷಿ, ಒಟ್ಟು 3 ಏಕದಿನ ಮತ್ತು ಒಂದು ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಆಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.