ವಲಸೆ ಕಾರ್ಮಿಕರ ಸ್ಥಿತಿಗತಿ: ಹೈಕೋರ್ಟ್ ಆಘಾತ
Team Udayavani, Apr 11, 2020, 5:20 AM IST
ಬೆಂಗಳೂರು: ನಿರಾಶ್ರಿತರಾಗಿರುವ ವಲಸೆ ಕಾರ್ಮಿಕರ ವಿಚಾರದಲ್ಲಿ ಕಾಳಜಿ ವಹಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಿದಿದ್ದರೆ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹೈಕೋರ್ಟ್ಗೆ ಸಲ್ಲಿಸಿರುವ ತನ್ನ ವರದಿಯಲ್ಲಿ ತಿಳಿಸಿದೆ. ವಲಸೆ ಕಾರ್ಮಿಕರ ಸ್ಥಿತಿಗತಿ ಬಗೆಗೆ ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿದೆ.
ವಲಸೆ ಕಾರ್ಮಿಕರಿಗೆ ಸರಕಾರ ತೆರೆದಿರುವ ಶೆಲ್ಟರ್ಗಳಿಗೆ ಭೇಟಿ ಕೊಟ್ಟು ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಹೈ ಕೋರ್ಟ್ ನಿರ್ದೇಶ ನೀಡಿತ್ತು.
ಇದನ್ನು ಗಮನಿಸಿದ ಹೈಕೋರ್ಟ್ ವಿಭಾಗೀಯ ನ್ಯಾಯ ಪೀಠ, ಬೆಂಗಳೂರಿನ 2 ಸಾವಿರ ವಲಸೆ ಕಾರ್ಮಿಕರ ಸ್ಥಿತಿಗತಿ ಬಗ್ಗೆ ಆಘಾತ ವ್ಯಕ್ತಪಡಿಸಿತು. ಬೆಂಗಳೂರಿನ ವಲಸೆ ಕಾರ್ಮಿಕರ ಸಹಿತ ಪ್ರಾಧಿಕಾರ ನೀಡಿರುವ ಸಲಹೆಗಳತ್ತ ಗಮನ ಹರಿಸಿ ಕ್ರಮ ಕೈಗೊಂಡು ಕೋರ್ಟ್ ಗೆ ಮಾಹಿತಿ ಸಲ್ಲಿಸುವಂತೆ ಸರಕಾರ ಮತ್ತು ಬಿಬಿಎಂಪಿಗೆ ತಾಕೀತು ಮಾಡಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.