ಜೈವಿಕ ಭಯೋತ್ಪಾದನೆಗೆ ಕೋವಿಡ್ ಕುಮ್ಮಕ್ಕು: ವಿಶ್ವಸಂಸ್ಥೆ ಕಳವಳ
Team Udayavani, Apr 11, 2020, 6:11 AM IST
ವಿಶ್ವಸಂಸ್ಥೆ: ಕೋವಿಡ್ ವೈರಸ್‌ನಿಂದಾಗಿ ಜಗತ್ತಿಗೆ ಜೈವಿಕ ಭಯೋತ್ಪಾದನೆಯ ಮೂಲಕ ದಾಳಿ ನಡೆದರೆ ಯಾವ ರೀತಿಯ ಅನಾಹುತ ಸಂಭವಿಸಬಹುದು ಎಂಬ ಕಲ್ಪನೆ ಜಗತ್ತಿಗೆ ಸಿಕ್ಕಿದಂತಾಗಿದೆ ಎಂದು ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೋ ಗುಟೆರೆಸ್ ಕಳವಳ ವ್ಯಕ್ತಪಡಿಸಿದ್ದಾರೆ.
ಸದ್ಯದ ಸಮಸ್ಯೆ ಸಂದರ್ಭದಲ್ಲಿಯೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಇದೇ ಮೊದಲ ಬಾರಿಗೆ ಗುರುವಾರ ಸಭೆ ನಡೆಸಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಸ್ತಾವಿಕವಾಗಿ ಮಾತನಾಡಿದ ವೇಳೆ ಗುಟೆರೆಸ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಅಂಶ ಬೀಭತ್ಸ ಕೃತ್ಯಗಳನ್ನು ನಡೆಸಲು ಒಂದು ಅವಕಾಶ ಮಾಡಿಕೊಟ್ಟಂತಾಗಿದೆ ಎಂದಿದ್ದಾರೆ.
ಸೋಂಕಿನ ದುಷ್ಪರಿಣಾಮವನ್ನು ಎದುರಿಸಲು ವಿಫಲರಾಗಿದ್ದು ಇಂಥ ಜೈವಿಕ ಭಯೋತ್ಪಾದನಾ ಕೃತ್ಯಗಳನ್ನು ನಡೆಸುವವರಿಗೆ ಆಹ್ವಾನವಿತ್ತಂತೆ ಆಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಹಾಲಿ ಸ್ಥಿತಿಯನ್ನು ಕೆಲ ಪ್ರತ್ಯೇಕತಾವಾದಿಗಳು ದುರುಪಯೋಗಪಡಿಸಿಕೊಂಡು ಹಿಂಸಾತ್ಮಕ ಕೃತ್ಯಗಳಿಗೆ ಪ್ರಚೋದನೆ ನೀಡುವ ಸಾಧ್ಯತೆಗಳಿವೆ. ಅದರ ಬಗ್ಗೆ ಸದಸ್ಯ ರಾಷ್ಟ್ರಗಳು ಎಚ್ಚರದಿಂದ ಇರಬೇಕು ಎಂದು ಸಲಹೆ ಮಾಡಿದ್ದಾರೆ.
ಕೋವಿಡ್ ವಿರುದ್ಧದ ಹೋರಾಟ ತಲೆಮಾರಿನ ಹೋರಾಟವಾಗಲಿದೆ. ಸೋಂಕು ಪ್ರಭಾವ ತಗ್ಗಿದ ಅನಂತರ ಉಂಟಾಗಲಿರುವ ಪ್ರಭಾವಗಳು ಘೋರ’ ಎಂದಿದ್ದಾರೆ. ಆದರೆ ಸದ್ಯದ ಸ್ಥಿತಿ ಬಗ್ಗೆ ಯಾವುದೇ ರೀತಿಯ ನಿರ್ಣಯಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿಲ್ಲ ಎಂದು ಮೂಲಗಳು ಖಚಿತಪಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.