ಸಿಎಂಗೆ ಉಪ್ಪಿ ನೀಡಿದ ಸಲಹೆಗಳು


Team Udayavani, Apr 11, 2020, 11:07 AM IST

ಸಿಎಂಗೆ ಉಪ್ಪಿ ನೀಡಿದ ಸಲಹೆಗಳು

ಸರ್ಕಾರ ಲಾಕ್‌ ಡೌನ್‌ ಹಾಕಿದ್ದರೂ ಸಹ ಜನ ಹಾಲು, ದಿನಸಿ ಸೇರಿ ಅಗತ್ಯ ವಸ್ತುಗಳ ಖರೀದೆಗೆ ಹೊರಬರುವುದು ನಿಂತಿಲ್ಲ. ಇದರಿಂದ ಜನ ತರಕಾರಿ ಮಾರುಕಟ್ಟೆ, ಅಂಗಡಿಗಳ ಮುಂದೆ ಗುಂಪು ಸೇರುತ್ತಾರೆ. ಈ ಗುಂಪು ಸೇರುವುದನ್ನು ತಡೆಯಲು ಸೂಕ್ತ ಮಾರ್ಗ ಅನುಸರಿಸಬೇಕು ಎಂದ ಉಪೇಂದ್ರ ಎರಡು ಸಲಹೆಗಳನ್ನು ಕೊಟ್ಟಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿದ್ದು ಅದನ್ನು ಸಿಎಂ ಅವರಿಗೆ ಟ್ಯಾಗ್‌ ಮಾಡಿರುವ ಉಪೇಂದ್ರ, ‘ಮಾನ್ಯ ಮುಖ್ಯಮಂತ್ರಿಯವರಲ್ಲಿ ವಿನಂತಿ… ಎರಡರಲ್ಲಿ ಯಾವುದಾದರೂ ಒಂದನ್ನು ಮಾಡಿ’ ಎಂದು ಎರಡು ಸಲಹೆಗಳನ್ನು ನೀಡಿದ್ದಾರೆ.

ಉಪೇಂದ್ರ ನೀಡಿರುವ ಆ ಎರಡು ಸಲಹೆಗಳು ಹೀಗಿದೆ- :

  1. ಶೇಕಡ ನೂರಕ್ಕೆ ನೂರು ಲಾಕ್‌ಡೌನ್‌: ಸಂಪೂರ್ಣ ಸರ್ಕಾರಿ ವ್ಯವಸ್ಥೆಯನ್ನು ಪೂರ್ಣ ಪ್ರಮಾಣದ ಯೋಜನೆ ಬಳಸಿಕೊಂಡು ಅಗತ್ಯ ವಸ್ತುಗಳನ್ನು ಮನೆಮನೆಗೆ ತಲುಪಿಸಿ ಹಾಲು, ತರಕಾರಿ, ಧಾನ್ಯಗಳನ್ನು ಒಂದು ಜಾಗದಲ್ಲಿ ಕೊಳ್ಳಲು ಬಿಟ್ಟರೆ ಜನ ಸೇರುತ್ತಾರೆ. ಬೇಕರಿ, ದಿನಸಿ ಮತ್ತು ಅಗತ್ಯ ವಸ್ತುಗಳಿಗಾಗಿ ಸಂತೆ, ಅಂಗಡಿ ತೆರೆದರೆ ಅಲ್ಲೂ ಜನ ಸೇರುತ್ತಾರೆ.
  2. ಜನರಿಗೆ ಜವಾಬ್ದಾರಿ ಕೊಟ್ಟು ಸಂಪೂರ್ಣವಾಗಿ ಲಾಕ್‌ ಡೌನ್‌ ತೆರೆಯಿರಿ: ಅಂದರೆ ಅವರವರೇ ಜವಾಬ್ದಾರಿ ತೆಗೆದುಕೊಂಡು ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಅವರವರ ವ್ಯವಹಾರಗಳನ್ನು ಮುಂದುವರಿಸುವುದು. ಜನರನ್ನು ಜನರು ಎಷ್ಟೇ ಮೂರ್ಖರು ಅಂದುಕೊಂಡರು (ಹೀಗೆನಾಯಕರೇ ಮಾಡಿಬಿಟ್ಟಿದ್ದಾರೆ) ಅವರವರ ಪ್ರಾಣಕ್ಕೆ ಅವರ ಮಕ್ಕಳ ಪ್ರಾಣಕ್ಕೆ ಬೆಲೆ ಕೊಟ್ಟೇ ಕೊಡುತ್ತಾರೆ ಎಂಬ ನಂಬಿಕೆಯಿಂದ ಹೇಳುತ್ತಿದ್ದೇನೆ. ಲಾಕ್‌ಡೌನ್‌ ಮಾಡಿ ಜನರನ್ನು ಹಾಲು, ರೇಷನ್‌ ಖರೀದಿಸುವುದಕ್ಕೆ ಬಿಟ್ಟು ಜನ ಗುಂಪು ಸೇರಿದಾಗ ಜನರನ್ನು ಬೈಯ್ಯುವುದು ಎಷ್ಟು ಸರಿ? ಇಷ್ಟು ಮಾತ್ರವಲ್ಲದೆ, ಇಷ್ಟೆಲ್ಲಾ ಲಾಕ್‌ ಡೌನ್‌ ಮಾಡಿಯೇ ನಮ್ಮ ದಡ್ಡ ಜನರು ಹೀಗೆ. ಇನ್ನು ಲಾಕ್‌ ಡೌನ್‌ ತೆಗೆದ್ರೆ ರೋಡ್‌ ರೋಡಲ್ಲಿ ಹೆಣ ಬೀಳುತ್ತೆ ಅಂತ ಹೇಳುವವರಿಗೆ (ಹೆದರುವವರಿಗೆ) ಒಂದು ಕಿವಿ ಮಾತು. ಹೀಗೆ ಲಾಕ್‌ಡೌನ್‌ ಮುಂದುವರಿಸಿದ್ರೂ ಅದೇ ಪರಿಸ್ಥಿತಿ ಬರಬಹುದು ಯೋಚನೆ ಮಾಡಿ. ಮಲಗಿದ್ರೆ-ಸಾವು, ಕೂತಿದ್ರೆ – ರೋಗ, ನಡೀತಿದ್ರೆ ಜೀವನ ಎಂದು ಹೇಳಿದ್ದಾರೆ.

 

ಉಪೇಂದ್ರ ಈಗ ರೈತ : ಉಪೇಂದ್ರ ಅವರು ಮೈಸೂರು ರಸ್ತೆ ಸಮೀಪ ಇರುವ ರಾಮೋಹಳ್ಳಿ ಯಲ್ಲಿರುವ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ತಮ್ಮ ಜಮೀನಿನಲ್ಲಿ ಈಗ ಟೊಮೊಟೋ, ಬಾಳೆ ಸೇರಿದಂತೆ ಇತರೆ ಬೆಳೆಗಳನ್ನು ಸಾವಯವ ಕೃಷಿ ಮಾದರಿಯಲ್ಲಿ ನಾಟಿ ಮಾಡಿದ್ದಾರೆ. ಇನ್ನು, ಜಮೀನಿನಲ್ಲಿ ಹಲವು ಕಡೆ ಹಣ್ಣಿನ ಸಸಿಗಳನ್ನೂ ನೆಟ್ಟಿದ್ದಾರೆ. ಕೃಷಿ ಬಗ್ಗೆ ಹೆಚ್ಚು ಆಸಕ್ತಿ ಹೊಂದಿರುವ ಅವರು, ಕೃಷಿಗೆ ನೀರನ್ನು ಹೇಗೆ ಸಮರ್ಪಕವಾಗಿ ಬಳಸಬಹುದು ಎಂಬ ಕುರಿತು ಪ್ರಯೋಗ ಮಾಡಿದ್ದಾರೆ.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.