ಆನ್‌ಲೈನ್ ಮೂಲಕ ಪಾಲಿಕೆ ಬಜೆಟ್ ಮಂಡನೆಗೆ ಮನವಿ
Team Udayavani, Apr 11, 2020, 12:00 PM IST
ಬೆಂಗಳೂರು: ಪಾಲಿಕೆಯ 2020-21ನೇ ಸಾಲಿನ ಬಜೆಟ್ ಅನ್ನು ಆನ್‌ಲೈನ್ ಮೂಲಕ ಮಂಡನೆ ಮಾಡುವಂತೆ ಬಿಬಿಎಂಪಿ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಮನವಿ ಮಾಡಿದ್ದಾರೆ.
ನಗರದಲ್ಲಿ ಕೋವಿಡ್ 19 ಸೋಂಕು ಕಡಿವಾಣ ಹಾಕುವ ನಿಟ್ಟಿನಲ್ಲಿ ಲಾಕ್‌ಡೌನ್ ಮುಂದುವರಿಯುವ ಸಾಧ್ಯತೆ ಇದೆ. ಪಾಲಿಕೆಯ 2020-21ನೇ ಸಾಲಿನ ಬಜೆಟ್ ಮಂಡನೆಯಾಗದೆ ಇರುವುದರಿಂದ ಈ ಮಧ್ಯೆ ಪಾಲಿಕೆ ಆರ್ಥಿಕ ಸಂಕಷ್ಟ ಅನುಭವಿಸುತ್ತಿದೆ.ಹೀಗಾಗಿ, ಆನ್‌ಲೈನ್ ಮೂಲಕ ಬಜೆಟ್ ಮಂಡನೆ ಮಾಡುವಂತೆ ಕೋರಿದ್ದಾರೆ.
ಆರ್ಥಿಕ ವರ್ಷ ಕಳೆದು 10ದಿನಗಳಾದರೂ, ಪಾಲಿಕೆ ಬಜೆಟ್ ಮಂಡನೆಯಾಗಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಹಾಕುವುದಕ್ಕೂ ಸಮಸ್ಯೆಯಾಗಲಿದೆ. ಆದರೆ, ನಗರದಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು, ಕೌನ್ಸಿಲ್ ಸಭೆ -ಸ್ಥಾಯಿ ಸಮಿತಿ ಸಭೆ ನಡೆಸಲು ಸಾಧ್ಯವಿಲ್ಲ. ತುರ್ತು ಸಂದರ್ಭದಲ್ಲಿ ಬಜೆಟ್ ಮಂಡನೆ ಸಾಧ್ಯವಿಲ್ಲ. ಹೀಗಾಗಿ, ವಿಡಿಯೋ ಕಾನ್ಫೆರೆನ್ಸ್ ನಿಂದ ನಿಯಮಾನುಸಾರ ಬಜೆಟ್ ಮಂಡನೆ ಮಾಡಬೇಕೆಂದು ಮೇಯರ್‌ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.