ಅಧಿಕ ಹಣ ಪಡೆವ ಅಂಗಡಿಕಾರರ ವಿರುದ್ಧ ಕ್ರಮ
Team Udayavani, Apr 11, 2020, 1:14 PM IST
ಔರಾದ: ತಾಪಂ ಕಚೇರಿ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸಚಿವ ಪ್ರಭು ಚವ್ಹಾಣ ಮಾತನಾಡಿದರು
ಔರಾದ: ಪಡಿತರ ಫಲಾನುಭವಿಗಳಿಂದ ನ್ಯಾಯ ಬೆಲೆ ಅಂಗಡಿ ಮಾಲೀಕರು ಅಧಿಕವಾಗಿ ಹಣ ಪಡೆದು ಪಡಿತರ ವಿತರಿಸುತ್ತಿದ್ದಾರೆ. ಈ ಕುರಿತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಪಂ ಕಚೇರಿ ಸಭಾಂಗಣದಲ್ಲಿ ನಡೆದ ಕೊರೊನಾ ಜನ ಜಾಗೃತಿ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಲಾಕ್ಡೌನ್ ಹಿನ್ನೆಲೆಯಲ್ಲಿ ಎರಡು ತಿಂಗಳ ಪಡಿತರ ವಿತರಿಸುವಂತೆ ಸರ್ಕಾರ ಆದೇಶಿಸಿದೆ. ಆದರೆ ನ್ಯಾಯ ಬೆಲೆ ಅಂಗಡಿ ಮಾಲೀಕರು ಫಲಾನುಭವಿಗಳಿಂದ ಅಧಿಕ ಹಣ ಪಡೆದು ವಿತರಿಸುತ್ತಿದ್ದಾರೆ ಎನ್ನುವ ದೂರುಗಳು ಕೇಳಿ ಬರುತ್ತಿದ್ದು, ಈ ಕೂಡಲೇ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು.
ತಾಲೂಕು ಮಟ್ಟದ ಪ್ರತಿಯೊಂದು ಇಲಾಖೆ ಅಧಿ ಕಾರಿಗಳು ಕೊರೊನಾ ವಿರುದ್ಧ ಸಮರ ಸಾರುತ್ತಿದ್ದು, ಅವರಿಗೆ ಬೇಕಾದ ಅಗತ್ಯ ಸೌಕರ್ಯ ಕಲ್ಪಿಸಿಕೊಡಲು ಸರ್ಕಾರ ಸಿದ್ಧ. ಕಿರಾಣಿ-ಔಷಧ ಅಂಗಡಿ, ತರಕಾರಿ ಮಾರುಕಟ್ಟೆಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹಾಗೂ ಸರ್ಕಾರದ ಪ್ರತಿಯೊಂದು ಮಾಹಿತಿಯನ್ನು ಜನರಿಗೆ ಡಂಗುರದ ಮೂಲಕ ತಿಳಿಸಿ ಎಂದರು.
ತಾಲೂಕಿನ ಪ್ರತಿಯೊಂದು ಗ್ರಾಮದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಬರದಂತೆ ಅಧಿಕಾರಿಗಳು ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು. ಸಂಸದ ಭಗವಂತ ಖೂಬಾ, ತಹಶೀಲ್ದಾರ್ ಎಂ. ಚಂದ್ರಶೇಖರ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿ ಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.