ಕೇಂದ್ರ ಸ್ಥಾನದಲ್ಲಿರಲು ಅಧಿಕಾರಿಗಳಿಗೆ ಸೂಚನೆ
Team Udayavani, Apr 11, 2020, 2:40 PM IST
ಚಿಕ್ಕಬಳ್ಳಾಪುರ: ತಂಡದ ಒಬ್ಬ ಸದಸ್ಯನಾಗಿ ನಾನು ನಿಮ್ಮೊಂದಿಗೆ ಕೆಲಸ ಮಾಡಲಿದ್ದೇನೆ. ಆದರೆ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ನನ್ನ ವೇಗಕ್ಕೆ ಕೆಲಸ ಮಾಡದ ಅಧಿಕಾರಿಗಳು ಈಗಲೇ ಜಿಲ್ಲೆ ಬಿಟ್ಟು ತೊಲಗಲಿ, ಅಂತಹ ಅಧಿಕಾರಿಗಳು ಜಿಲ್ಲೆಗೆ ಬೇಡ.
ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಕೋವಿಡ್ 19 ಸಂಕಷ್ಟ ದಿಂದ ಜಿಲ್ಲೆ ಮುಕ್ತವಾಗುವವರೆಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನ ಬಿಟ್ಟು ಎಲ್ಲೂ ಹೋಗಬಾರದು. ಇದು ನೂತನ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಚಿಕ್ಕಬಳ್ಳಾ ಪುರ ಕ್ಷೇತ್ರದ ಶಾಸಕರು ಆಗಿರುವ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಜಿಲ್ಲಾ ಮಟ್ಟದ ಅಧಿಕಾರಿಗಳ ಮೊದಲ ಸಭೆಯಲ್ಲಿ ಜಿಲ್ಲೆಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟು ಅಭಿವೃದ್ಧಿ ಪರ ಇಲ್ಲದ ಅಧಿಕಾರಿಗಳು ಹೊರಟು ಬಿಡಿ ಎಂದರು.
ಅಶಿಸ್ತು ಸಹಿಸಲ್ಲ: ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಶುಕ್ರವಾರ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಕೋವಿಡ್-19 ನಿಯಂತ್ರಣ, ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಬಗ್ಗೆ ಇಲಾಖೆಗಳ ಪ್ರಗತಿ ಪರಾಮರ್ಶೆ ನಡೆಸಿದ ಅವರು, ಜಿಲ್ಲೆಯ ಅಭಿವೃದ್ಧಿ ವೇಗ ಹೆಚ್ಚಾಗಬೇಕು. ಇದಕ್ಕೆ ಅಧಿಕಾರಿಗಳು ಹಗಲು, ರಾತ್ರಿ ಕೆಲಸ ಮಾಡಿ ಜಿಲ್ಲೆಯ ಜನರಿಗೆ ಉತ್ತರದಾಯಕವಾಗಿ ಇರ ಬೇಕೆಂದು ಸೂಚಿಸಿದರಲ್ಲದೇ ಅಧಿಕಾರಿಗಳಲ್ಲಿ ಅಶಿಸ್ತು ಅಥವಾ ಅವರ ವಿರುದ್ಧ ದೂರುಗಳು ಕೇಳಿ ಬಂದರೆ ಸಹಿಸುವುದಿಲ್ಲ ಎಂದರು.
ಜಿಲ್ಲೆ ಕೋವಿಡ್-19 ಮುಕ್ತವಾಗಬೇಕು, ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು, ರೈತರಿಗೆ ಬಿತ್ತನೆ ಸಮಯಕ್ಕೆ ಬಿತ್ತನೆ ಬೀಜ, ರಸಗೊಬ್ಬರ ಸಿಗುವಂತಾಗ ಬೇಕು, ಲಾಕ್‌ಡೌನ್ ಪರಿಣಾಮಕಾರಿ ಅನುಷ್ಠಾನಗೊಳಿಸ ಬೇಕು. ಕೃಷಿ ಉತ್ಪನ್ನಗಳ ಸಾಗಾಟ, ಮಾರಾಟಕ್ಕೆ ತೊಂದರೆ ಆಗದಂತೆ ನಿಗಾ ವಹಿಸಬೇಕು, ಮಾರುಕಟೆಟ್ಟೆಗಳಲ್ಲಿ ಸಾಮಾಜಿಕ ಅಂತರ ಇರಬೇಕು, ಕೊಳವೆಬಾವಿ ಕೊರೆಯುವುದಕ್ಕಿಂತ ಖಾಸಗಿ ಕೊಳವೆ ಬಾವಿ ಅಥವಾ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು, ನ್ಯಾಯಬೆಲೆ ಅಂಗಡಿಗಳಲ್ಲಿ ಸಮರ್ಪಕವಾಗಿ ಪಡಿತರ ವಿತರಣೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯ, ಡೀಸಿ ಆರ್.ಲತಾ, ಜಿಪಂ ಸಿಇಒ ಫೌಝೀಯಾ ತರುನ್ನುಮ್, ಎಸ್ಪಿ ಮಿಥುನ್ ಕುಮಾರ್, ಎಡಿಸಿ ಆರತಿ, ಉಪ ವಿಭಾಗಾಧಿಕಾರಿ ರಘುನಂದನ್ ಇದ್ದರು.
ನ್ಯಾಯ ಬೆಲೆ ಅಂಗಡಿಗಳಲ್ಲಿ ಸಮರ್ಪಕವಾಗಿ ಪಡಿತರ ವಿತರಣೆ ಆಗಬೇಕು. ಪೌರ ಕಾರ್ಮಿಕ ರಿಗೆ ಮೂರು ಹೊತ್ತು ಊಟದ ವ್ಯವಸ್ಥೆ ಮಾಡಿ ಅವರಿಗೆ ವೈಯಕ್ತಿಕ ಸುರಕ್ಷತಾ ಕವಚ ನೀಡಬೇಕು. ವಲಸಿಗರಿಗೆ ಊಟ, ವಸತಿ ಸೌಕರ್ಯ ಮಾಡಬೇಕು. – ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.