ರೇಷ್ಮೆ ನೂಲು ಖರೀದಿಸಲು ಕ್ರಮ
Team Udayavani, Apr 11, 2020, 2:46 PM IST
ಶಿಡ್ಲಘಟ್ಟ: ತಾಲೂಕಿನಲ್ಲಿ ಉತ್ಪಾದಿಸುವ ರೇಷ್ಮೆ ನೂಲು ಖರೀದಿಸಲು ಅಥವಾ ಪ್ಲೆಡ್ಜ್ ಮಾಡಿಕೊಳ್ಳಲು ಸಿಎಂ ಯಡಿಯೂರಪ್ಪ ಹಾಗೂ ರೇಷ್ಮೆ ಸಚಿವರೊಂದಿಗೆ ಸಮಾಲೋಚನೆ ನಡೆಸುವುದಾಗಿ ರಾಜ್ಯ ವೈದ್ಯಕೀಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು.
ನಗರದ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಸೋಂಕು ನಿವಾರಕ ಸುರಂಗ ಮಾರ್ಗ ಉದ್ಘಾಟಿಸಿ ಮಾತನಾಡಿದ ಅವರು, ಮಾರುಕಟ್ಟೆಯಲ್ಲಿ ಅಂತರ ಕಾಯ್ದು ಕೊಂಡು ವ್ಯಾಪಾರ-ವಹಿವಾಟು ನಡೆಸಬೇಕು. ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸುವ ನೂಲನ್ನು ರಾಜ್ಯ ರೇಷ್ಮೆ ಮಾರಾಟ ಮಂಡಳಿ(ಕೆಎಸ್‌ಎಂಬಿ)ಮೂಲಕ ಖರೀದಿಸಲು ಅಥವಾ ಪ್ಲೆಡ್ಜ್ ಮಾಡಿಕೊಳ್ಳಲು ಸಿಎಂ ಹಾಗೂ ರೇಷ್ಮೆ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ವ್ಯವಸ್ಥೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ರಾಮನಗರ ಮತ್ತು ಶಿಡ್ಲಘಟ್ಟ ಅತಿ ದೊಡ್ಡ ರೇಷ್ಮೆಗೂಡು ಮಾರುಕಟೆಯಾಗಿದ್ದು, ಪ್ರತಿದಿನ ಸಾವಿರಾರು ಜನ ಬಂದು ಹೋಗುವ ಸ್ಥಳಗಳಾಗಿವೆ. ಸದ್ಯಕ್ಕೆ ದೇಶದಲ್ಲಿ ಕೋವಿಡ್ 19 ದಿಂದ ನಾಗರಿಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ವಲಸೆ ಬಂದಿರುವ ಕಾರ್ಮಿಕರಿಗೆ ಆಹಾರ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಪಂ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ(ಚಿನ್ನಿ), ಮಾಜಿ ಶಾಸಕ ಎಂ.ರಾಜಣ್ಣ, ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಸಿಇಒ ಫೌಝೀಯಾ ತರುನ್ನುಮ್, ಎಸ್ಪಿ ಮಿಥುನ್ ಕುಮಾರ್, ರೇಷ್ಮೆ ಇಲಾ ಖೆಯ ಜಂಟಿ ನಿದೇಶಕ ಕುಮಾರ್, ತಹಶೀಲ್ದಾರ್ ಕೆ. ಅರುಂಧತಿ, ತಾಪಂ ಇಒ ಶಿವಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರಗೌಡ, ನಗರ ಮಂಡಲ ಅಧ್ಯಕ್ಷ ರಾಘವೇಂದ್ರ, ಮಾರುಕಟ್ಟೆಯ ಉಪ ನಿರ್ದೇಶಕ ಸುಭಾಷ್, ತಾಲೂಕು ರೀಲರ್ ಸಂಘದ ಅಧ್ಯಕ್ಷ ಅನ್ಸರ್ ಖಾನ್, ಬಾಂಬೆ ನವಾಝ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.