ರೈತರ ಹಿತ ಕಾಯೋದು ಸರ್ಕಾರದ ಆದ್ಯತೆ
Team Udayavani, Apr 11, 2020, 3:10 PM IST
ಹಾಸನ: ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿನಡೆದ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೋವಿಡ್ 19 ನಿಯಂತ್ರಣದ ಜೊತೆಗೆ ರೈತರ ಹಿತ ಕಾಯುವುದು ಸರ್ಕಾರದ ಆದ್ಯತೆ ಆಗಿದ್ದು ಬೇಡಿಕೆ ಆಧಾರದ ಮೇಲೆ ವಿತರಣೆ ಮಾಡಬೇಕೆಂದರು.
ಕೃಷಿ ಉತ್ಪನ್ನ ಸಮರ್ಪಕ ಖರೀದಿ, ವಿಲೇವಾರಿಯಾಗಬೇಕು. ಸರಕು-ತರಕಾರಿ ಸಾಗಣೆಗೆ ಯಾವುದೇ ನಿರ್ಬಂಧ ಇಲ್ಲ. ಈ ಬಗ್ಗೆ ಪೊಲೀಸ್ ಇಲಾಖೆ ನಿಗಾವಹಿಸಬೇಕು. ಅಂತರ ರಾಜ್ಯಗಳಿಂದ ಸಮಸ್ಯೆಯಾದಲ್ಲಿ ರಾಜ್ಯಮಟ್ಟದ ಟಾಸ್ಕ್ ಫೋರ್ಸ್ ಗಮನಕ್ಕೆ ತಂದು ಬಗೆಹರಿಸಬೇಕೆಂದರು.
ಶಾಸಕ ಎಚ್.ಡಿ.ರೇವಣ್ಣ ಮಾತನಾಡಿ, ಸದ್ಯದ ಪರಿಸ್ಥಿತಿಯಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಜಿಲ್ಲೆಯಲ್ಲಿ ಕೊರತೆ ಇರುವ ಬೇಳೆ, ಎಣ್ಣೆ ಹಾಗೂ ಮತ್ತಿತರ ಸಾಮಗ್ರಿಗಳು ಹೆಚ್ಚು ಇರುವ ಕಡೆಗಳಿಂದ ಕಳುಹಿಸಬೇಕು ಎಂದು ಒತ್ತಾಯಿಸಿದರು.
ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಎ.ಟಿ. ರಾಮಸ್ವಾಮಿ, ಸಿ.ಎನ್.ಬಾಲಕೃಷ್ಣ, ಪ್ರೀತಂ ಜೆ.ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಎ.ಗೊಪಾಲಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಬಾಳೆ, ಕುಂಬಳಕಾಯಿ ಸೇರಿ ಹಲವು ಬೆಳೆಗಾರರ ಸಂಕಷ್ಟ ವಿವರಿಸಿದರು.
ಬೇರೆ ರಾಜ್ಯಗಳಲ್ಲಿ ಹಣ್ಣು, ತರಕಾರಿ ಸಾಗಾಟಕ್ಕೆ ತೊಂದರೆಯಾಗುತ್ತಿದೆ ಅದನ್ನು ಸರಿಪಡಿಸ ಬೇಕಾಗಿದೆ. ಹಾಪ್‌ಕಾಮ್ಸ್ ಮೂಲಕ ರೈತರು ಬೆಳೆದ ಹೆಚ್ಚುವರಿ ಉತ್ಪನ್ನ ಖರೀದಿಸುವ ವ್ಯವಸ್ಥೆ ಮಾಡಿ ಎಂದು ತಿಳಿಸಿದರು.
ಶಾಸಕರ ಬೇಡಿಕೆಗಳಿಗೆ ಪ್ರತಿಕ್ರಿಯಿಸಿದ ಸಚಿವ ಬಿ.ಸಿ. ಪಾಟೀಲ್ ರೈತರಿಗೆ ಅನುಕೂಲವಾಗುವಂತೆ ರಾಜ್ಯಮಟ್ಟದಲ್ಲಿ ಏಕರೂಪದ ದರ ನಿಗದಿಪಡಿಸಲಾಗುವುದೆಂದರು. ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ, ಜಪಂ ಸಿಇಒ ಪರಮೇಶ್, ಹಾಸನ ಎಪಿಎಂಸಿ ಅಧ್ಯಕ್ಷ ಕಣದಳ್ಳಿ ಮಂಜೇಗೌಡ, ಅಪರ ಜಿಲ್ಲಾಧಿಕಾರಿ ಕವಿತಾ, ಉಪ ವಿಭಾಗಾಧಿಕಾರಿಗಳಾದ ಡಾ.ನವೀನ್ ಭಟ್, ಗಿರೀಶ್‌ನಂದನ್, ಜಂಟಿ ಕೃಷಿ ನಿರ್ದೇಶಕ ಮಧುಸೂದನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.