ಕೆ.ಕೋಡಿ ಹಳ್ಳಿ ಬಳಿ 5 ಕಾಡಾನೆ ಪ್ರತ್ಯಕ್ಷ!

Team Udayavani, Apr 11, 2020, 4:43 PM IST

ಕೆ.ಕೋಡಿ ಹಳ್ಳಿ ಬಳಿ 5 ಕಾಡಾನೆ ಪ್ರತ್ಯಕ್ಷ!

ಮಂಡ್ಯ/ಮದ್ದೂರು: ತಾಲೂಕಿನ ಕೆ. ಕೋಡಿಹಳ್ಳಿ ಬಳಿ ಶುಕ್ರವಾರ ಮುಂಜಾನೆ 5 ಕಾಡಾನೆ ಪ್ರತ್ಯಕ್ಷವಾಗಿವೆ. ಇದು ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲೂಕಿನ ಕೊಂಬಿನಕಲ್ಲು ಅರಣ್ಯ ಪ್ರದೇಶದ ಆನೆ ಕಾರಿಡಾರ್‌ನಿಂದ ಗುರುವಾರ ಮಧ್ಯರಾತ್ರಿ ವಲಸೆ ಬಂದಿರುವ ಮೂರು ಸಲಗ, ಒಂದು ಮರಿ ಸಲಗ, ಒಂದು ಹೆಣ್ಣಾನೆ ಸೇರಿದಂತೆ 5 ಆನೆಗಳ ಹಿಂಡು ಮದ್ದೂರು-ಕೋಡಿಹಳ್ಳಿ ನಡುವಿನ ಶಿಂಷಾ ನದಿಯಲ್ಲಿ ಬೀಡು ಬಿಟ್ಟಿವೆ.

ಆನೆಗಳು ಸಾಗಿಬಂದ ಮಾರ್ಗ ಮಧ್ಯೆ ಸುಮಾರು 5ರಿಂದ 10 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಹಾಗೂ ಬಾಳೆ ಫಸಲನ್ನು ನಾಶಪಡಿಸಿವೆ. ಕೊಂಬಿನಕಲ್ಲು ಅರಣ್ಯ ಪ್ರದೇಶ ದಿಂದ ಹೊರಟ ಆನೆಗಳ ಹಿಂಡು ಚನ್ನಪಟ್ಟಣ ತಾಲೂಕಿನ ನರಸಿಂಹಸ್ವಾಮಿ ಬೆಟ್ಟದ ಮೀಸಲು ಅರಣ್ಯ ಪ್ರದೇಶ, ಕುಕ್ಕೂರು ಮಾರ್ಗದಿಂದ ಮದ್ದೂರು ತಾಲೂಕಿನ ಬ್ಯಾಡರಹಳ್ಳಿ ಪ್ರವೇಶಿಸಿದ ಆನೆಗಳು, ತೈಲೂರು ಕೆರೆ ಮಾರ್ಗದಿಂದ ಹಾದುಬಂದು ಕೆ. ಕೋಡಿಹಳ್ಳಿ ಸಮೀಪದ ಶಿಂಷಾನದಿಯಲ್ಲಿ ಬೀಡು ಬಿಟ್ಟಿವೆ.

ಮುಂಜಾನೆ ಆನೆಗಳು ಬೀಡು ಬಿಟ್ಟಿದ್ದ ಬಗ್ಗೆ ಗ್ರಾಮಸ್ಥರು ಹೊಲ ಗದ್ದೆ ಪ್ರದೇಶಗಳಲ್ಲಿ ಹಾದು ಹೋಗುತ್ತಿದ್ದನ್ನು ಕಂಡ ಗ್ರಾಮಸ್ಥರು, ರಂಪಾಟ-ಕೂಗಾಟ ಮಾಡಿದ್ದಾರೆ. ಇದರಿಂದ ಬೆದರಿದ ಆನೆಗಳು ಶಿಂಷಾ ನದಿ ನೀರಿನಲ್ಲಿ ಸೇರಿಕೊಂಡಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಮದ್ದೂರು ವಲಯ ಅರಣ್ಯಾಧಿಕಾರಿ ಶಶಿಧರ್‌, ಉಪ ವಲಯ ಅರಣ್ಯಾಧಿಕಾರಿಗಳಾದ ರವಿ, ರತ್ನಾಕರ್‌, ಪಿಎಸ್‌ಐ ಮಂಜೇಗೌಡ ಹಾಗೂ ಅರಣ್ಯ ಮತ್ತು ಪೊಲೀಸ್‌ ಇಲಾಖೆ ಸಿಬ್ಬಂದಿಗಳು ನದಿ ದಡದಲ್ಲಿ ಬೀಡು ಬಿಟ್ಟಿದ್ದು, ಆನೆಗಳ ಚಲನವಲನವನ್ನು ಗಮನಿಸುತ್ತಿದ್ದಾರೆ. ಸಂಜೆ 6 ಗಂಟೆ ನಂತರ ತಮಟೆ ಶಬ್ಧ ಮತ್ತು ಪಟಾಕಿ ಸಿಡಿಸಿ ಆನೆಗಳ ಹಿಂಡನ್ನು ನದಿಯಿಂದ ಹೊರ ಬರುವಂತೆ ಮಾಡಲಾಗುವುದು. ಬಳಿಕ ಅವುಗಳು ಸಾಗಿಬಂದ ಮಾರ್ಗದಲ್ಲಿಯೇ ಕೊಂಬಿನಕಲ್ಲು ಅರಣ್ಯ ಪ್ರದೇಶದ ಆನೆಕಾರಿಡಾರ್‌ ಪ್ರದೇಶಕ್ಕೆ ಕಳುಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಶಶಿಧರ್‌ ತಿಳಿಸಿದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.