ಓಡಿ ಓಡಿ.. ದಕ್ಷಿಣ ಕನ್ನಡ ಪೊಲೀಸರ ಡ್ರೋನ್ ನಲ್ಲಿ ಸೆರೆಯಾಯ್ತು ಲಾಕ್ ಡೌನ್ ಓಟದ ದೃಶ್ಯ
Team Udayavani, Apr 11, 2020, 6:29 PM IST
ಮಂಗಳೂರು: ಕೋವಿಡ್-19 ಸೋಂಕು ಹರಡದಂತೆ ಲಾಕ್ ಡೌನ್ ಹೇರಲಾಗಿದ್ದು, ಲಾಕ್ಡೌನ್ ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹದ್ದಿನ ಕಣ್ಣು ಹಾಯಿಸಿದ್ದಾರೆ.
ವಿಟ್ಲ, ಬಂಟ್ವಾಳ, ಪುತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರೋನ್ ಕ್ಯಾಮರಾ ಮೂಲಕ ಹದ್ದಿನ ಕಣ್ಣಿಟ್ಟಿದ್ದು, ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಇಲ್ಲಿನ ಗಲ್ಲಿಗಲ್ಲಿಗಳಲ್ಲೂ ಡ್ರೋನ್ ಕ್ಯಾಮೆರಾದ ಮೂಲಕ ಕಣ್ಗಾವಲು ಇರಿಸಲಾಗಿದೆ. ಮೈದಾನ, ಗದ್ಡೆ ಸೇರಿ ಹಲವೆಡೆ ಕ್ರಿಕೆಟ್ ಆಡುವವರ, ಗುಂಪು ಸೇರುವವರ ಪತ್ತೆಗೆ ಬಳಕೆ ಮಾಡಲಾಗುತ್ತಿದೆ. ‘
ಪೊಲೀಸರ ಡ್ರೋನ್ ಕ್ಯಾಮಾರಾ ಕಂಡು ಬೈಕ್ ಸವಾರರು ಅರ್ಧ ದಾರಿಯಿಂದಲೇ ವಾಪಸಾಗುವ ದೃಶ್ಯವೂ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗುಂಪು ಸೇರಿ ಮಾತನಾಡುವ, ಕ್ರಿಕೆಟ್ ಆಡುವ ಯುವಕರೂ ದಿಕ್ಕಾಪಾಲಾಗಿ ಓಡಿದ್ದಾರೆ. ಈ ಮೂಲಕ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡುವ ಜನರನ್ನು ನಿಯಂತ್ರಿಸಲು ಡ್ರೋನ್ ಕ್ಯಾಮೆರಾದ ಬಳಕೆ ಮಾಡಿ ದಕ್ಷಿಣಕನ್ನಡ ಜಿಲ್ಲಾ ಪೋಲಿಸರು ಹೊಸದೊಂದು ಪ್ರಯತ್ನವನ್ನು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.