ಮಹಾರಾಷ್ಟ್ರದಲ್ಲಿ ತಬ್ಲೀಘಿ ಜಮಾತ್ ಸದಸ್ಯ ಆತ್ಮಹತ್ಯೆ
Team Udayavani, Apr 12, 2020, 2:52 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಅಕೋಲಾ: ಕೋವಿಡ್ ಸೋಂಕು ದೃಢಪಡುತ್ತಿದ್ದಂತೆಯೇ ತಬ್ಲೀಘಿ ಜಮಾತ್ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರದ ಅಕೋಲಾದಲ್ಲಿ ಈ ಘಟನೆ ನಡೆದಿದೆ. ಸೋಂಕು ದೃಢಪಟ್ಟ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು.
ಶುಕ್ರವಾರ ಸೋಂಕು ಖಚಿತವಾಗುತ್ತಿದ್ದಂತೆಯೇ ಸ್ನಾನದ ಮನೆಯಲ್ಲಿದ್ದ ಶೇವಿಂಗ್ ಸೆಟ್ ಬ್ಲೇಡ್ ಅನ್ನು ಬಳಸಿ, ಗಂಟಲನ್ನು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ವೇಳೆ, ಹೊಸದಿಲ್ಲಿಯ 13 ಸ್ಥಳಗಳಲ್ಲಿ ಅವಿತಿದ್ದ ತಬ್ಲೀಘಿಯ 102 ಮಂದಿ ಸದಸ್ಯರ ಪೈಕಿ 52 ಮಂದಿಗೆ ಸೋಂಕು ದೃಢಪಟ್ಟಿದೆ. ಮತ್ತೂಂದೆಡೆ ಉತ್ತರ ಪ್ರದೇಶ ಪೊಲೀಸರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಲೆಮರೆಸಿಕೊಂಡಿರುವ ತಬ್ಲೀಘಿ ಸದಸ್ಯರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.