ಕುಂದು ಕೊರತೆ ಆಲಿಕೆಗೆ ಶಿಕ್ಷಕರ ನೇಮಕ
ಪ್ರತಿ ತಾಲೂಕಿನಲ್ಲೂ 200-250 ಮಂದಿ ಶಿಕ್ಷಕರ ನೇಮಕಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸಲು ಸಿದ್ಧ
Team Udayavani, Apr 12, 2020, 11:40 AM IST
ಚಿತ್ರದುರ್ಗ: ಲಾಕ್ಡೌನ್ ಸಂದರ್ಭದಲ್ಲಿ ಸಾರ್ವಜನಿಕರ ಕುಂದು ಕೊರತೆ ಆಲಿಸಿ, ಸೂಕ್ತ ಕ್ರಮ ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಲ್ಲಾ ಕಂದಾಯ ಗ್ರಾಮಗಳು ಹಾಗೂ ನಗರ ಪ್ರದೇಶದ ವಾರ್ಡ್ ಗಳಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನಿಯೋಜಿಸಲಾಗಿದೆ.
ಪ್ರತಿ ಊರಿನ ಪ್ರಮುಖ ಸ್ಥಳದಲ್ಲಿ ಶಿಕ್ಷಕರು ಕುಳಿತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದು, ಏ.4ರಿಂದ ಈ ಕೆಲಸ ಆರಂಭವಾಗಿದೆ. ದೂರುದಾರರ
ಹೆಸರು, ಊರು, ಸಾರ್ವಜನಿಕರು ನೀಡುವ ಮಾಹಿತಿ ಸಂಬಂಧಪಟ್ಟ ಇಲಾಖೆಯಿಂದ ಕಲೆ ಹಾಕಲಾಗುತ್ತದೆ. ಅದರಲ್ಲಿನ ದೂರುಗಳಿಗೆ ಅನುಗುಣವಾಗಿ ಮೇಲಾಧಿಕಾರಿಗಳಿಗೆ ಅಹವಾಲು ರವಾನಿಸಲಾಗುತ್ತದೆ. ಆಹಾರ ಪದಾರ್ಥ ವಿತರಣೆ, ಕುಡಿಯುವ ನೀರು ಸರಬರಾಜು ಹಾಗೂ ವೈದ್ಯಕೀಯ ಸೇವೆಗಳಿಗೆ ಸಂಬಂ ಧಿಸಿದ ದೂರು ಸ್ವೀಕರಿಸಲಾಗುತ್ತಿದೆ.
ಜಿಲ್ಲೆಯ 6 ತಾಲೂಕಿನಲ್ಲೂ ಶಿಕ್ಷಕರನ್ನು ನಿಯೋಜಿಸಿದ್ದು, ಒಂದೊಂದು ತಾಲೂಕಿನಲ್ಲಿ ಸುಮಾರು 200-250 ಜನ ಶಿಕ್ಷಕರು ಒಂದು ವಾರದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಪಡಿತರ ವ್ಯವಸ್ಥೆ, ಔಷಧಿ, ತರಕಾರಿ, ದಿನಸಿ ಪದಾರ್ಥಗಳು, ಕೋವಿಡ್-19 ಸೋಂಕು ಲಕ್ಷಣಗಳು ಕಂಡು ಬಂದಲ್ಲಿ ಅಂತಹವರಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ, ವೈದ್ಯಕೀಯ ಸೇವೆಗಳು, ರೈತರ ಸಮಸ್ಯೆ, ಡಯಾಬಿಟೀಸ್, ಅಸ್ತಮಾ, ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಸರ್ಕಾರದಿಂದ ನೀಡಲಾಗುವ ಉಚಿತ ಔಷಧಿಗಳ ವಿತರಣೆ, ಆಹಾರ ಪದಾರ್ಥಗಳ ವಿತರಣೆಗೆ ಸಂಬಂಧಿ ಸಿದಂತೆ ಹತ್ತು ಹಲವಾರು ಕುಂದು ಕೊರತೆ ಸ್ವೀಕರಿಸಿ, ಅವರ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ಶಿಕ್ಷಕರು ನಿರತರಾಗಿದ್ದಾರೆ.
ಕೋವಿಡ್-19 ಹರಡುವಿಕೆ, ರೋಗ ಲಕ್ಷಣಗಳು, ಸೋಂಕು ಹರಡುವಿಕೆ ತಡಗಟ್ಟಲು ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸಲಾಗುತ್ತಿದೆ. ಸಾರ್ವಜನಿಕರು ಯಾವುದೇ ಸಭೆ, ಸಮಾರಂಭ ಸೇರದಂತೆ ಎಚ್ಚರ ವಹಿಸಲಾಗಿದೆ. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ, ಆಗಾಗ್ಗೆ ಸಾಬೂನಿನಿಂದ ಅಥವಾ ಅಲ್ಕೋಹಾಲ್ ಯುಕ್ತ ಹ್ಯಾಂಡ್ ಸ್ಯಾನಿಟೈಸರ್ನಿಂದ ಕೈತೊಳೆದುಕೊಳ್ಳುವಂತೆ, ಸಾರ್ವಜನಿಕರು ಸ್ವಚ್ಛತೆ ಕಾಪಾಡಿಕೊಳ್ಳುವುದರ ಕುರಿತು ಮನವಿ ಮಾಡುತ್ತಿದ್ದಾರೆ. ಜಿಲ್ಲೆಯ ಎಲ್ಲಾ ಕಂದಾಯ ಗ್ರಾಮಗಳು ಹಾಗೂ ನಗರ ಪ್ರದೇಶದ ವಾರ್ಡ್ಗಳಲ್ಲಿ ನಿಯೋಜಿಸಿರುವ ಶಿಕ್ಷಕರು ಹಾಗೂ ಬಿಎಲ್ಒಗಳು ತಮ್ಮ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿ, ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಂಡ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ವರದಿ ಸಲ್ಲಿಸಲಿದ್ದಾರೆ.
ಕೋವಿಡ್-19 ಹರಡುವಿಕೆ ತಡೆಗಟ್ಟಲು ಲಾಕ್ಡೌನ್ ಜಾರಿಯಲಿದೆ. ಈ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳಿಗೆ ಶಿಕ್ಷಕರು 21 ದಿನದ ಬಿಸಿಯೂಟದ ಆಹಾರ ಸಾಮಾಗ್ರಿಗಳನ್ನು ತಲುಪಿಸುತ್ತಿದ್ದಾರೆ. ಇದರ ಜತೆಗೆ ಗ್ರಾಮೀಣ ಪ್ರದೇಶದಲ್ಲಿ ಆಡಳಿತ ವ್ಯವಸ್ಥೆಯ ಕೊಂಡಿಯಾಗಿ ಕೆಲಸ ಮಾಡುತ್ತಿದ್ದಾರೆ.
ಕೆ.ರವಿಶಂಕರ ರೆಡ್ಡಿ,
ಡಿಡಿಪಿಐ ಚಿತ್ರದುರ್ಗ
ಶಿಕ್ಷಕರು, ಆಶಾ ಕಾರ್ಯಕರ್ತೆಯರ ಜತೆಗೆ ಮನೆ ಮನೆಗೆ ಭೇಟಿ ನೀಡಿ ಕೋವಿಡ್ -19 ಹರಡುವಿಕೆ ತಡಗಟ್ಟುವ ಕುರಿತು ಮಾಹಿತಿ ನೀಡುತ್ತಿದ್ದಾರೆ.
ಸಾರ್ವಜನಿಕರಿಗೆ ತಮ್ಮ ಬಗ್ಗೆ ಇರುವ ಗೌರವವನ್ನು ಜಾಗೃತಿ ಮೂಡಿಸಲು ಬಳಸುತ್ತಿರುವುದು ಶ್ಲಾಘನೀಯ.
ಎಲ್.ಜಯಪ್ಪ,
ಬಿಇಒ ಹೊಸದುರ್ಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.