ಕೇರಳದಿಂದ ಜನ ಸಾಗಾಟ: ವಾಹನ ವಶ
Team Udayavani, Apr 12, 2020, 12:24 PM IST
ವಿಟ್ಲ: ಪೆರುವಾಯಿ ಗ್ರಾಮದ ಕಡಂಬಿಲದಲ್ಲಿ ಅಕ್ರಮವಾಗಿ ಕೇರಳದಿಂದ ಕರ್ನಾಟಕಕ್ಕೆ ಜನರನ್ನು ಸಾಗಿಸುತ್ತಿದ್ದ ವಾಹನಗಳನ್ನು ಹಾಗೂ ರಸ್ತೆಯಲ್ಲಿ ಅಪಾಯಕಾರಿಯಾಗಿ ಓಡಾಡುತ್ತಿದ್ದ ದ್ವಿಚಕ್ರವಾಹನಗಳನ್ನು ವಿಟ್ಲ ಪೊಲೀಸರು ಶನಿವಾರ ವಶಕ್ಕೆ ಪಡೆದು ಕೋವಿಡ್ 19 ರೋಗ ಹರಡಲು ಪ್ರಯತ್ನಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೇರಳ ಮೂಲದ ಜೀತೋ ಟೂರಿಸ್ಟ್ ವಾಹನ, ಟೂರಿಸ್ಟ್ ಆಟೋ ರಿಕ್ಷಾ, ಎರಡು ಕೇರಳದ ಹಾಗೂ ಒಂದು ಕರ್ನಾಟಕದ ಮೋಟಾರ್ ಬೈಕನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆರಿಪದವು ಮೂಲಕ ಪೆರುವಾಯಿ ಹಾಗೂ ಶಿರಂಕಲ್ಲು ಸಂಪರ್ಕಿಸುವ ರಸ್ತೆಗೆ ಗಡಿಯಲ್ಲಿ ಮಣ್ಣು ಹಾಕಿ ಸಂಪರ್ಕ ಕಡಿತ ಮಾಡಿದ್ದರೂ ಅಕ್ರಮವಾಗಿ ಓಡಾಡುತ್ತಿರುವುದನ್ನು ಗಮನಿಸಿ ಕ್ರಮ ಕೈಗೊಳ್ಳಲಾಗಿದೆ.ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ವಾಹನಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಡ್ರೋನ್ ಕೆಮರಾಗಳನ್ನು ಬಳಸಿ, ಲಾಕ್ ಡೌನ್ ಆದೇಶ ಉಲ್ಲಂ ಸಿ ಸಂಚರಿಸುತ್ತಿದ್ದ 6 ವಾಹನಗಳ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.