ಜನಸಂಚಾರಕ್ಕೆ ಸಂಪೂರ್ಣ ಬ್ರೇಕ್‌

ಪೊಲೀಸ್‌ ಇಲಾಖೆಯಿಂದ ಇನ್ನಷ್ಟು ಬಿಗಿ ಕ್ರಮಅಂಗಡಿ ಬಂದ್‌-ಬಿಕೋ ಎನ್ನುತ್ತಿವೆ ರಸ್ತೆಗಳು

Team Udayavani, Apr 12, 2020, 12:37 PM IST

12-April-13

ಚಿಕ್ಕಮಗಳೂರು: ನಗರದ ಹಿರೇಮಗಳೂರು ಚೆಕ್‌ಪೋಸ್ಟ್‌ನಲ್ಲಿ ಸಿಕ್ಕಿಬಿದ್ದ ಕಾರ್ಮಿಕರು

ಚಿಕ್ಕಮಗಳೂರು: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ಇನ್ನಷ್ಟು ಬಿಗಿ ಕ್ರಮ ಕೈಗೊಂಡ ಪರಿಣಾಮ ಶನಿವಾರ ನಗರದಲ್ಲಿ ಜನಸಂಚಾರಕ್ಕೆ ಸಂಪೂರ್ಣ ಬ್ರೇಕ್‌ ಬಿದ್ದಿದ್ದು ಇಡೀ ನಗರವೇ ಬಿಕೋ ಎನ್ನುತ್ತಿದೆ.

ಕಳೆದೆರೆಡು ದಿನಗಳ ಹಿಂದೇ ಲಾಕ್‌ಡೌನ್‌ ನಡುವೆ ಜನಸಂಚಾರ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿತ್ತು. ಅಗತ್ಯ ವಸ್ತುಗಳ ಖರೀದಿ ಹೆಸರಿನಲ್ಲಿ ವಾಹನ ಸಂಚಾರವು ಏರಿಕೆಯಾಗಿತ್ತು. ವಾಹನ ಸಂಚಾರಕ್ಕೆ ಕಡಿವಾಣ ಹಾಕಲು ಪೊಲೀಸ್‌ ಇಲಾಖೆ ಇನಷ್ಟು ಬಿಗಿ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಶನಿವಾರ ಜನಸಂಚಾರಕ್ಕೆ ಸಂಪೂರ್ಣ ಕಡಿವಾಣ ಬಿದ್ದಿದೆ.

ಪೊಲೀಸ್‌ ಇಲಾಖೆಯ ಕಟ್ಟುನಿಟ್ಟಿನ ಕ್ರಮ ಹಾಗೂ ಸರ್ಕಾರಿ ರಜೆ ಇದ್ದ ಕಾರಣ ಜನರು ಮನೆಯಲ್ಲೇ ಇದ್ದು ಕಾಲ ಕಳೆದರು. ಬೈಕ್‌ ಮತ್ತು ಕಾರು ಸಂಚಾರ ವಿರಳವಾಗಿದ್ದು, ಅವುಗಳನ್ನು ಪೊಲೀಸರು ತಡೆದು ತಪಾಸಣೆಗೆ ಒಳಪಡಿಸುತ್ತಿದ್ದ ದೃಶ್ಯಗಳು ಕಂಡು ಬಂದವು. ಲಾಕ್‌ಡೌನ್‌ನಿಂದ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದ್ದು ಕೂಲಿ ಕಾರ್ಮಿಕರ ಗೋಳು ಇನ್ನಷ್ಟು ಬಿಗುಡಾಯಿಸಿದೇ. ಕೆಲವು ಎಸ್ಟೇಟ್‌ ಮಾಲೀಕರು ಕೂಲಿ ಕಾರ್ಮಿಕರೊಂದಿಗೆ ಕಳ್ಳಾಟವಾಡುತ್ತಿದ್ದು, ದುಡಿಸಿಕೊಂಡು ಅವರಿಗೆ ಅನ್ನ ನೀರು ನೀಡದೆ ಎಸ್ಟೇಟ್‌ ಗಳಿಂದ ಕಳಿಸುತ್ತಿರುವ ಘಟನೆಗಳು ನಡೆಯುತ್ತಿವೆ.

ಬೇಲೂರು ತಾಲೂಕಿನ ಬಿಕ್ಕೋಡು ಬಳಿಯ ಸೋಮನಹಳ್ಳಿ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಹಗರಿಬೊಮ್ಮನಹಳ್ಳಿಯ 22 ವಲಸೆ ಕಾರ್ಮಿಕರನ್ನು ವಶಕ್ಕೆ ಪಡೆದು ಅವರಿಗೆ ಸರ್ಕಾರಿ ಹಾಸ್ಟೇಲ್‌ನಲ್ಲಿ ನಿರ್ಮಿಸಲಾಗಿರುವ ನಿರಾಶ್ರಿತರ ಕೇಂದ್ರದಲ್ಲಿ ಬಿಡಲಾಗಿದೆ. 22 ವಲಸೆ ಕಾರ್ಮಿಕರು ಬಿಕ್ಕೋಡು ಬಳಿಯ ಸೋಮನಹಳ್ಳಿ ಎಸ್ಟೇಟ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.

ಲಾಕ್‌ಡೌನ್‌ ಆದ ಬಳಿಕ ಕೂಲಿ ಕಾರ್ಮಿರು ಹತ್ತು ದಿನಗಳಿಂದ ಅನ್ನ ನೀರು ಇಲ್ಲದೇ ಪರದಾಡಿದರು. ಕೆಲಸ ಮಾಡಿಸಿಕೊಂಡ ಎಸ್ಟೇಟ್‌ ಮಾಲಿಕ ಇವರನ್ನು ಹತ್ತು ದಿನಗಳ ಬಳಿಕ ಹೊರಹಾಕಿದ್ದಾನೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಮೂರು ದಿನದ ಹಸುಗೂಸು, ಬಾಣಂತಿ, ಆರು ಪುಟ್ಟ ಮಕ್ಕಳು ಸೇರಿದಂತೆ 22 ಜನರು ಗೂಡ್ಸ್‌ನಲ್ಲಿ ಪೊಲೀಸರ ಕೈಗೆ ಸಿಕ್ಕಿಬಿಳಬಾರದು ಎಂದು ಚೀಲದಲ್ಲಿ ಅವಿತುಕೊಂಡು ಚಿಕ್ಕಮಗಳೂರು ಕಡೆ ಕೂಲಿ ಅರಸಿಕೊಂಡು ಬಂದಿದ್ದರು.

ಶುಕ್ರವಾರ ರಾತ್ರಿ ನಗರದ ಹೊರವಲಯದ ಹಿರೇಮಗಳೂರು ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ವೇಳೆ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಕೂಲಿ ಕಾರ್ಮಿಕರನ್ನು ನಿರಾಶ್ರಿತರ ಕೇಂದ್ರಕ್ಕೆ ದಾಖಲಿಸಿದ್ದಾರೆ. ಎಸ್ಟೇಟ್‌ ಮಾಲೀಕರ ವರ್ತನೆಗೆ ಕಾರ್ಮಿಕರು ಸಂಕಷ್ಟ ಅನುಭವಿಸುವಂತಾಗಿದೆ. ಲಾಕ್‌ಡೌನ್‌ ಬಳಿಕ ಅನಗತ್ಯ ಸಂಚಾರಕ್ಕೆ ಪೊಲೀಸ್‌ ಇಲಾಖೆ ಕಡಿವಾಣ ಹಾಕಿದ್ದು, ತುರ್ತು ಸೇವೆಗೆ ಜಿಲ್ಲಾಡಳಿತ ನೀಡಿದ ಪಾಸ್‌ ಹೊಂದಿದವರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವರು ನಕಲಿ ಕರ್ಫ್ಯೂಪಾಸ್‌, ವಾಹನ ಪಾಸ್‌ ಗಳನ್ನು ಐನೂರು ಸಾವಿರಕ್ಕೆ ಮಾರಾಟ ದಂಧೆ ನಡೆಸುತ್ತಿದ್ದಾರೆ. ಶನಿವಾರ ನಕಲಿ ಕರ್ಫ್ಯೂ ಪಾಸ್‌ ಮಾರಾಟ ಮಾಡುತ್ತಿದ್ದ ಅಪ್ರಾಪ್ತ ಯುವಕ ಮತ್ತು ಗ್ರಾಹಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.