ಸೋಂಕು ಪತ್ತೆ ಪ್ರದೇಶ ನಿರ್ಲಕ್ಷ್ಯ
Team Udayavani, Apr 12, 2020, 4:52 PM IST
ಮಂಡ್ಯ: ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿರುವ ಕೋವಿಡ್-19 ಸೋಂಕಿತ ವ್ಯಕ್ತಿಯ ನಿವಾಸವಿರುವ ಬೀದಿಗೆ ಹಾಲು ಸೇರಿದಂತೆ ಅಗತ್ಯವಸ್ತುಗಳ ಪೂರೈಕೆ ಮಾಡದೇ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದರು.
ಕೋವಿಡ್-19 ಸೋಂಕು ದೃಢಪಟ್ಟ ನಂತರದಲ್ಲಿ ಸೋಂಕಿತ ವ್ಯಕ್ತಿಯ ನಿವಾಸವಿರುವ ಬೀದಿಯನ್ನು ಅಸ್ಪೃಶ್ಯರ ರೀತಿ ಕಾಣಲಾಗುತ್ತಿದೆ. ಬಡಾವಣೆಯ ನಗರಸಭಾ ಸದಸ್ಯೆ ರಜಿನಿ ಆ ಬೀದಿಯ ಜನರಿಗೆ ಹಾಲು, ತರಕಾರಿ, ದಿನಸಿ ಪದಾರ್ಥ ದೊರಕುವಂತೆ ವ್ಯವಸ್ಥೆ ಮಾಡದೇ ಔಷಧ ಸಿಂಪಡಣೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.
ಆ ಬೀದಿಯಲ್ಲಿ ವಯಸ್ಸಾದವರು, ಮಕ್ಕಳಿದ್ದಾರೆ. ಶುಕ್ರವಾರ ಮತ್ತು ಶನಿವಾರ ಆ ಬೀದಿಯನ್ನು ಹೊರತುಪಡಿಸಿ ಉಳಿದ ಬೀದಿಗಳಿಗೆ ಹಾಲು, ತರಕಾರಿ ಹಂಚಿಕೆ ಮಾಡಿ ತಾರತಮ್ಯ ಮಾಡುತ್ತಿದ್ದಾರೆ. ಪ್ರಚಾರಕ್ಕಾಗಿ ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಕೊರೊನಾ ಸಂಕಷ್ಟ ಸಮಯದಲ್ಲೂ ಜನರ ನೋವಿಗೆ ಸ್ಪಂದಿಸದೇ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ ಎಂದು ನಗರಸಭಾ ಸದಸ್ಯೆ ವಿರುದ್ಧ ಕಿಡಿಕಾರಿದರು.
ಜಿಲ್ಲಾಧಿಕಾರಿ ಸ್ಪಂದನೆ: ಕೋವಿಡ್-19 ಸೋಂಕಿತ ವ್ಯಕ್ತಿ ಬೀದಿಗೆ ಅಗತ್ಯ ವಸ್ತುಗಳು ಪೂರೈಕೆಯಾಗದಿರುವ ವಿಷಯ ತಿಳಿದ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಕೂಡಲೇ ಸ್ಪಂದಿಸಿದರು. ನಗರಸಭೆ ಆಯುಕ್ತ ಲೋಕೇಶ್ ಅವರ ಮೂಲಕ ಬಡಾವಣೆಯ ಜನರಿಗೆ ಹಾಲು, ತರಕಾರಿ ದೊರಕುವಂತೆ ವ್ಯವಸ್ಥೆ ಮಾಡಿದರು. ರಸ್ತೆಯುದ್ದಕ್ಕೂ ಔಷಧ ಸಿಂಪಡಣೆ ಮಾಡುವುದಕ್ಕೂ ಕ್ರಮ ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.