11 ಮದ್ಯದಂಗಡಿ ಪರವಾನಗಿ ರದ್ದು
Team Udayavani, Apr 12, 2020, 5:06 PM IST
ಸಾಂದರ್ಭಿಕ ಚಿತ್ರ
ಮೈಸೂರು: ಲಾಕ್‌ಡೌನ್ ಇದ್ದರೂ ಮೈಸೂರು ವಿಭಾಗ ವ್ಯಾಪ್ತಿಯಲ್ಲಿ ಅಬಕಾರಿ ನಿಯಮ ಉಲ್ಲಂಘಿಸಿದ 11 ಮದ್ಯದಂಗಡಿ ಪರವಾನಗಿ ಅಮಾನತುಗೊಳಿಸಲಾಗಿದೆ ಎಂದು ಅಬಕಾರಿ ಜಂಟಿ ಆಯುಕ್ತ ಬಿ.ಮಾದೇಶ್ ತಿಳಿಸಿದ್ದಾರೆ. ಪರವಾನಗಿದಾರರು ಮದ್ಯ ಮಾರಾಟ ನಡೆಸುವಂತಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ. ಮಾ.23ರಿಂದ ಏ.10 ರವರೆಗೆ ಮೈಸೂರು ವಿಭಾಗ ವ್ಯಾಪ್ತಿಗೆ ಒಳಪಡುವ 5 ಜಿಲ್ಲೆಗಳಾದ ಮೈಸೂರು, ಮಂಡ್ಯ, ಚಾಮರಾಜ ನಗರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ 33 ವಲಯ ಕಚೇರಿ, 69 ಉಪವಿಭಾಗ ಕಚೇರಿ ಹಾಗೂ 5 ಜಿಲ್ಲಾ ಕಚೇರಿಗಳಲ್ಲಿ ಇಲಾಖೆ ಸಿಬ್ಬಂದಿ ದಿನದ 24 ಗಂಟೆ ಕಾರ್ಯನಿರ್ವಹಿಸುತ್ತಿದ್ದು, ಈ ವಿಭಾಗ ವ್ಯಾಪ್ತಿಗಳಲ್ಲಿ ಇಲ್ಲಿಯವರೆಗೆ ಒಟ್ಟು 1,577 ದಾಳಿ ನಡೆಸಿ 53 ಘೋರ, 06 ಕಲಂ 15ಎ ಪ್ರಕರಣ, 25
ಸಾಮಾನ್ಯ ಪ್ರಕರಣ ದಾಖ ಲಿಸಿ, 23 ಆರೋಪಿಗಳನ್ನು ಬಂಧಿಸಿದ್ದು, 371 ಲೀ. ಮದ್ಯ, 36 ಲೀ. ಬಿಯರ್, 40 ಲೀ. ಸೇಂದಿ, 52 ಲೀ. ಕಳ್ಳಭಟ್ಟಿ, 10 ಲೀ. ವೈನ್, 515 ಲೀ. ಕೊಳೆ , 11 ವಾಹನ ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಮಧ್ಯ ಮಾರಾಟದ ಬಗ್ಗೆ ದೂರುಗಳಿದ್ದಲ್ಲಿ ಜಿಲ್ಲೆಗಳ ಕಂಟ್ರೋಲ್ ರೂಂ ಸಂಪರ್ಕಿಸಿ ದೂರು ನೀಡಬಹುದಾಗಿದೆ.
ಈ ವಿಭಾಗದ ವ್ಯಾಪ್ತಿಯಲ್ಲಿ ಬರುವ ಡಿಸ್ಟಿಲರಿ ಹಾಗೂ ರಾಜ್ಯದ ಇತರೆ ಜಿಲ್ಲೆಗಳ ಡಿಸ್ಟಲರಿಗಳಿಂದ ಆಲ್ಕೋಹಾಲ್ ಬೇಸ್ಡ್ ಸ್ಯಾನಿಟೈಸರ್ ಸರಬರಾಜು ಮಾಡುತ್ತಿದ್ದು, ಮೈಸೂರು ವಿಭಾಗಕ್ಕೆ ಒಳಪಡುವ 5 ಜಿಲ್ಲೆಗಳಿಂದ ಒಟ್ಟಾರೆ 3,975 ಲೀ. ಸ್ಯಾನಿಟೈಸರ್ ಗಳನ್ನು ವಿಭಾಗದ ಜಿಲ್ಲಾಧಿಕಾರಿ ಕಚೇರಿಗೆ ಹಸ್ತಾಂತರಿಸಲಾಗಿದೆ ಎಂದು ಅಬಕಾರಿ ಜಂಟಿ ಆಯುಕ್ತ ಬಿ.ಮಾದೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Bengaluru: ಚಕ್ರ ವಾಹನಗಳು, ಮನೆ ಕಳ್ಳತನ: ಮೂವರು ಆರೋಪಿಗಳ ಬಂಧನ
Bellary; ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆರ್.ಅಶೋಕ್
Belagavi: ವಕ್ಫ್ ಹೋರಾಟ ಮಾಡುವುದು ತಪ್ಪಾ..: ವಿಜಯೇಂದ್ರ ದೂರಿನ ಬಗ್ಗೆ ಯತ್ನಾಳ್ ಮಾತು
Koppala: ತೊಗರಿ ಬೆಳೆ ಕಟಾವಿಗೆ ಬಂತು ಯಂತ್ರ; 14 ಕ್ವಿಂಟಲ್ ಸಾಮರ್ಥ್ಯದ ಕಂಟೇನರ್
ED Summons: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.