ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನೆಗೆಟಿವ್‌

ಜಿಲ್ಲಾಡಳಿತ, ಆರೋಗ್ಯ ಇಲಾಖಾಧಿಕಾರಿಗಳ ಶ್ರಮ ; ಜನರ ಸಹಕಾರ ಕೋರಿದ ಜಿಲ್ಲಾಧಿಕಾರಿ

Team Udayavani, Apr 12, 2020, 5:43 PM IST

ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನೆಗೆಟಿವ್‌

ರಾಮನಗರ: ಜಿಲ್ಲೆಯಲ್ಲಿ ಈವರೆಗೂ ಕೋವಿಡ್-19 ಸೋಂಕಿನ ಪಾಸಿಟಿವ್‌ ಪ್ರಕರಣ ಪತ್ತೆಯಾಗಿಲ್ಲ. 2020ರ ಫೆಬ್ರವರಿ ಎರಡನೇ ವಾರದಿಂದಲೇ ಜಿಲ್ಲಾಡಳಿತ ತೆಗೆದುಕೊಂಡ ಕಠಿಣ ಕ್ರಮಗಳು ಸೋಂಕು ಹರಡುವುದನ್ನು ತಪ್ಪಿಸಿದೆ. ಲಾಕ್‌ಡೌನ್‌ಗೂ ಮುನ್ನವೇ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸರು ಜಿಲ್ಲೆಯ ಹೆದ್ದಾರಿ ಬದಿಗಳ ಹೋಟೆಲ್‌, ಟೀ ಅಂಗಡಿ ಮುಚ್ಚಿಸಿದೆ. ಹೆದ್ದಾರಿ ವಾಹನ ಸಂಚಾರದ ಮೇಲೆ ತೀವ್ರ ನಿಗಾ, ಕೋವಿಡ್-19 ಸೋಂಕಿನ ಜನಜಾಗೃತಿ, ಸ್ವತ್ಛತೆ ಜಾಗೃತಿಗಳು ಬಹಳ ನೆರವಾದವು. ಜಿಲ್ಲಾ ವ್ಯಾಪ್ತಿಯ ಬೆಂಗಳೂರು- ಮೈಸೂರು, ಬೆಂಗಳೂರು-ಮಂಗಳೂರು ಹೆದ್ದಾರಿ ಹೋಟೆಲ್‌ಗ‌ಳನ್ನು ಜಿಲ್ಲಾಡಳಿತ
ಮುಚ್ಚಿಸಿ, ಸೋಂಕು ಹರಡುವುದನ್ನು ತಪ್ಪಿಸಿದೆ.

ಜಿಲ್ಲಾಡಳಿತದ ಈ ಕ್ರಮಕ್ಕೆ ಆಗ ಜನತೆ ಬೇಸರಗೊಂಡರಾದರೂ, ಈಗ ಬೆನ್ನು ತಟ್ಟುತ್ತಿದ್ದಾರೆ. ಮಾರ್ಚ್‌ ಆರಂಭದಲ್ಲೇ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಆರೋಗ್ಯ ಇಲಾಖೆ ಐಸೋಲೇಷನ್‌ ವಾರ್ಡು ಸ್ಥಾಪಿಸಿ, ವಿದೇಶಿಯರ ಮೇಲೆ ಅಧಿಕಾರಿಗಳು ನಿಗಾವಹಿಸಿದ್ದರು. ಸಹಾಯವಾಣಿ ಸ್ಥಾಪಿಸಲಾಗಿತ್ತು. ಜಾಗೃತಿ ಎಷ್ಟರ ಮಟ್ಟಿಗಿತ್ತು ಅಂದರೆ ಮಾರ್ಚ್‌ 9ರಂದು ನಡೆದ ಹೋಳಿ ಹಬ್ಬ ತನ್ನ ರಂಗು ಕಳೆದುಕೊಂಡಿತ್ತು. ಶಾಲಾ -ಕಾಲೇಜುಗಳ ರಜೆ ಆರಂಭವಾಯಿತು. ಜನರಲ್ಲಿ ಜಾಗೃತಿ ಮೂಡಿ ಮಾಸ್ಕ್, ಸ್ಯಾನಿಟೈಸರ್‌ಗಳಿಗೆ ಮುಗಿಬಿದ್ದರು. ಚಿತ್ರ ಮಂದಿರಗಳು, ಆಹಾರ ಮಳಿಗೆಗಳನ್ನು ಬಂದ ಮಾಡಿಸಲಾಯಿತು. ವಿದೇಶಗಳಿಂದ ರಾಮನಗರ ಜಿಲ್ಲೆಗೆ ಬಂದ 30 ಮಂದಿಯ ಮೇಲೆ ಆರೋಗ್ಯ ಇಲಾಖೆ ತೀವ್ರ ನಿಗಾ ಇಟ್ಟಿತು.

ಮಾರ್ಚ್‌ 18ರಂದು ಚನ್ನಪಟ್ಟಣ ಮತ್ತು ಮಾಗಡಿಗೆ ವಿದೇಶಗಳಿಂದ ಮರಳಿದ ಇಬ್ಬರ ರಕ್ತ ಮಾದರಿ ಪರೀಕ್ಷೆ ನೆಗೆಟಿವ್‌ ಬಂದಿತ್ತು. ಜಿಲ್ಲೆಯ ಜನರು ಗಂಭೀರವಾಗಿ ಪರಿಗಣಿಸಿ, ಕೆಮ್ಮು, ನೆಗಡಿ ಬಂದವರು ಆಸ್ಪತ್ರೆಗಳತ್ತ ದೌಡಾಯಿಸಿದರು. ಔಷಧ ಸಿಂಪಡಿಸಲಾಯಿತು. ಅಂತರ್‌ಜಿಲ್ಲಾ ವಾಹನ ಓಡಾಟ ಬಂದ್‌ ಆಯಿತು. ರೇಷ್ಮೆ ಗೂಡು ಮಾರುಕಟ್ಟೆ ಮುಚ್ಚಲು ಜಿಲ್ಲಾಡಳಿತ ನಿರ್ದರಿಸಿತು. ಈ ವೇಳೆಗೆ ಜಿಲ್ಲೆಯಲ್ಲಿ 118 ಮಂದಿ ಮೇಲೆ ಆರೋಗ್ಯ ಇಲಾಖೆ ನಿಗಾ  ಆರಂಭಿಸಿತ್ತು. ಲಾಕ್‌ಡೌನ್‌ ಆರಂಭವಾದ ನಂತರ ಬೆಳಗ್ಗೆ ಅಗತ್ಯ ವಸ್ತುಗಳ ಖರೀದಿಗೆ ಜನ ಹೊರಗೆ ಬರುತ್ತಿದ್ದಾರೆ. 100 ಹಾಸಿಗೆಗಳ ಕೋವಿಡ್‌ 19 ಆಸ್ಪತ್ರೆ ಸಿದ್ಧವಾಗಿದೆ.

ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ, ಜಿಪಂ ಸಿಇಒ ಇಕ್ರಂ. ಎಸ್ಪಿ ಅನೂಪ್‌ ಶೆಟ್ಟಿ, ಡಿಎಚ್‌ಒ ಡಾ.ನಿರಂಜನ್‌ ಮತ್ತು ತಂಡ, ನಗರಾಭಿವೃದ್ದಿ ಕೋಶದ ನಿರ್ದೇಶಕ ಮಾಯಣ್ಣ ಗೌಡ, ನಗರಸಭೆಯ ಆಯುಕ್ತೆ ಬಿ.ಶುಭಾ, ರಾಮನಗರ ತಾಪಂ ಅಧ್ಯಕ್ಷ ಗಾಣಕಲ್‌ ನಟರಾಜ್‌, ಇಒ ಶಿವಕುಮಾರ್‌ ಮುಂತಾದವರ ಶ್ರಮ ಕೆಲಸ ಮಾಡುತ್ತಿದೆ. ಜನರ ಸಹಕಾರ ದೊರೆಯದ ಹೊರತು ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲಾಗುವುದಿಲ್ಲ ಎಂಬುದು ಈ ಅಧಿಕಾರಿಗಳ ಹೇಳಿಕ

ಜಿಲ್ಲೆಯಲ್ಲಿ ಸೋಂಕು ಕಂಡಿಲ್ಲ. ಕಂಡರೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. 100 ಹಾಸಿಗೆಗಳ ಕೊರೊನಾ ಆಸ್ಪತ್ರೆ ಸಿದ್ಧವಿದೆ. 16 ಐಸಿಯುಗಳು, 3 ವೆಂಟಿಲೇಟರ್‌ಗಳು ಆರೋಗ್ಯ ಸೇವೆಗೆ ಸಿದ್ಧವಾಗಿವೆ. 9 ಫಿವರ್‌ ಕ್ಲೀನಿಕ್‌ಗಳು ಕಾರ್ಯಾರಂಭಿಸಿವೆ. 
ಎಂ.ಎಸ್‌.ಅರ್ಚನಾ, ಜಿಲ್ಲಾಧಿಕಾರಿ

ಬಿ.ವಿ. ಸೂರ್ಯಪ್ರಕಾಶ್‌

ಟಾಪ್ ನ್ಯೂಸ್

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.