ಕೃಷಿ ಪರಿಕರ ಮಾರಾಟಕ್ಕಿಲ್ಲ ಆತಂಕ

ಜಿಲ್ಲಾಡಳಿತದ ಸಂಪೂರ್ಣ ಬೆಂಬಲಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ ದಾಸ್ತಾನಿಗೆ ಸೂಚನೆ

Team Udayavani, Apr 13, 2020, 11:21 AM IST

13-April-04

ದಾವಣಗೆರೆ: ಕೃಷಿ ಪರಿಕರ ಮಾರಾಟಗಾರರ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಮಾತನಾಡಿದರು

ದಾವಣಗೆರೆ: ಕೃಷಿ ಪರಿಕರ ಮಾರಾಟಗಾರರಿಗೆ ಯಾವುದೇ ಆತಂಕ ಬೇಡ. ಜಿಲ್ಲಾಡಳಿತದ ಸಂಪೂರ್ಣ ಬೆಂಬಲ ಸದಾ ಇರಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ ರೈತರಿಗೆ ಭರವಸೆ ನೀಡಿದ್ದಾರೆ.

ಭಾನುವಾರ ಜಿಲ್ಲಾಡಳಿತ ಭವನದ ತುಂಗ ಭದ್ರ ಸಭಾಂಗಣದಲ್ಲಿ ಏರ್ಪಡಿಸಿದ್ದ ಕೃಷಿ ಪರಿಕರ ಮಾರಾಟಗಾರರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸದ್ಯದಲ್ಲೇ ಮುಂಗಾರು ಹಂಗಾಮು ಆರಂಭವಾಗಲಿದೆ. ರೈತರಿಗೆ ಬೇಕಾದ ಬಿತ್ತನೆ ಬೀಜ, ರಾಸಾಯನಿಕ ಗೊಬ್ಬ, ಕೀಟನಾಶಕ, ಯಂತ್ರೋಪಕರಣ ಸೇರಿದಂತೆ ಎಲ್ಲವನ್ನೂ ಮೇ 15ರೊಳಗಾಗಿ ದಾಸ್ತಾನು ಮಾಡಿಕೊಳ್ಳುವಂತೆ ತಿಳಿಸಿದರು.

ಕೃಷಿ ಚಟುವಟಿಕೆಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯ ನಿರ್ವಹಿಸುವ ಸ್ಥಳದಲ್ಲಿ ಆದಷ್ಟು ಕಡಿಮೆ ಸಿಬ್ಬಂದಿಯಿಂದ ಕಾರ್ಯ ನಿರ್ವಹಿಸಬೇಕು. ಸಿಬ್ಬಂದಿಗಳಿಗೆ ಸ್ಯಾನಿಟೈಸರ್‌, ಮಾಸ್ಕ್ ಮುಂತಾದ ಸುರಕ್ಷಾ ಪರಿಕರ ನೀಡಬೇಕು. ಕೃಷಿ ಇಲಾಖೆಯಿಂದ ಅಗತ್ಯವಿರುವ ಪಾಸ್‌ ನೀಡಲಾಗುವುದು. ಹಮಾಲಿಗಳಿಗೆ ತಮ್ಮ ಅಂಗಡಿ ವತಿಯಿಂದಲೇ ಐಡಿ ಕಾರ್ಡ್‌ ಅಥವಾ ಅನುಮತಿ ಪತ್ರ ನೀಡಿ. ಈ ಕ್ಷಣದಿಂದ ಯಾವುದೇ ನಿರ್ಬಂಧ ಇರುವುದಿಲ್ಲ. ಕೃಷಿಕರು ಮತ್ತು ಕೃಷಿ ಸಂಬಂ ಧಿತರನ್ನು ಲಾಕ್‌ಡೌನ್‌ ಕ್ರಮದಿಂದ ಸಡಿಲಗೊಳಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಮಾತನಾಡಿ, ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಗುರುತಿನ ಚೀಟಿ ನೀಡಿರಿ. ಚೆಕ್‌ಪೋಸ್ಟ್‌ಗಳಲ್ಲಿ ತಡೆಯದಂತೆ ಪೊಲೀಸರಿಗೆ ಸೂಚನೆ ನೀಡಲಾಗುವುದು. ಆದರೆ, ಗುರುತಿನ ಚೀಟಿಗಳು ಯಾವುದೇ ಕಾರಣಕ್ಕೂ ದುರುಪಯೋಗವಾಗಬಾರದು. ಕೃಷಿಗೆ ಪೂರಕವಾದ ಟ್ರ್ಯಾಕ್ಟರ್‌ ರಿಪೇರಿ, ಬಿಡಿ ಭಾಗಗಳ ಮಾರಾಟಕ್ಕೆ ಅನುಮತಿ ಇದ್ದು, ಹಾಗೂ ಕೆಲವೊಂದು ಕೊಯ್ಲು ಯಂತ್ರಗಳನ್ನು ಆಂಧ್ರ ಪ್ರದೇಶದಿಂದ ತರಿಸಿಕೊಳ್ಳಬೇಕಾಗುತ್ತದೆ. ಅದಕ್ಕಾಗಿ ಅಲ್ಲಿನ ಜಿಲ್ಲಾ ಧಿಕಾರಿಗಳೊಂದಿಗೆ ಮಾತನಾಡಲಾಗುವುದು ಎಂದು ತಿಳಿಸಿದರು.

ಕೃಷಿ ಪರಿಕರ ವರ್ತಕರ ಸಂಘದ ಅಧ್ಯಕ್ಷ ನಾಗರಾಜು ಮಾತನಾಡಿ, 500 ಸರಬರಾಜುದಾರರಿದ್ದು, ಅವರ ಬಳಿ ಸಹಾಯಕರಾಗಿ ಒಂದಿಬ್ಬರು ಕೆಲಸ ಮಾಡಬೇಕಾಗುತ್ತದೆ. ಅವರಿಗೆ ಪಾಸ್‌ ವ್ಯವಸ್ಥೆ ಮಾಡಬೇಕು. ಟ್ರಾÂಕ್ಟರ್‌ ಗ್ಯಾರೇಜ್‌ಗಳನ್ನು ನಿರ್ದಿಷ್ಟ ಅವ ಧಿಯಲ್ಲಿ ಅಥವಾ ದಿನ ಪೂರ್ತಿ ತೆರೆಯುವಂತೆ ನೋಡಿಕೊಳ್ಳಬೇಕು. ಹಮಾಲಿಗಳಿಗೆ ಗುರುತಿನ ಚೀಟಿ ವಿತರಿಸಬೇಕು. ಬಿತ್ತನೆ ಬೀಜ ಹೊರರಾಜ್ಯದಿಂದ ಬರಬೇಕಾಗಿದ್ದು, ಇದಕ್ಕೆ ಅವಕಾಶ ಮಾಡಿಕೊಡಬೇಕು. ಹಮಾಲರಿಗೆ 1 ಸಾವಿರದಷ್ಟು ಆಹಾರದ ಕಿಟ್‌ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಕೃಷಿಗೆ ಸಂಬಂಧಿಸಿದ ಯಾವುದೇ ರೀತಿಯ ತೊಂದರೆಗಳಿದ್ದಲ್ಲಿ, ಚೆಕ್‌ಪೋಸ್ಟ್‌ಗಳಲ್ಲಿ ಕೃಷಿಗೆ ಸಂಬಂಧಿ ಸಿದ ಗಾಡಿಗಳನ್ನು ತಡೆದರೆ ಸಹಾಯವಾಣಿ 1077ಗೆ ಕರೆ ಮಾಡಿ ತಿಳಿಸಿದಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿಪಂ ಸಿಇಒ ಪದ್ಮಾ ಬಸವಂತಪ್ಪ, ಎಡಿಸಿ ಪೂಜಾರ ವೀರಮಲ್ಲಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಬಿ. ಮುದಗಲ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಲಕ್ಷ್ಮಿಕಾಂತ್‌ ಬೊಮ್ಮನ್ನಾರ್‌ ಇತರರು ಇದ್ದರು.

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

2-davangere

Davangere: ಮಹಿಳೆಯ ಮೇಲೆ ಕರಡಿ ದಾಳಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.