ಡೆಂಗ್ಯೂ, ಮಲೇರಿಯಾ ಬಗ್ಗೆ ಎಚ್ಚರಿಕೆ ಅಗತ್ಯ: ಜಿಲ್ಲಾಧಿಕಾರಿ
Team Udayavani, Apr 14, 2020, 5:57 AM IST
ಮಂಗಳೂರು: ಕಳೆದ ವರ್ಷ ಮಂಗಳೂರಿನಲ್ಲಿ ಡೆಂಗ್ಯೂ, ಮಲೇರಿಯಾ ಪ್ರಕರಣ ಅಧಿಕ ವರದಿಯಾಗಿದ್ದವು. ಹೀಗಾಗಿ, ಸದ್ಯ ಕೋವಿಡ್ 19 ಆತಂಕವಿದ್ದರೂ, ಅದನ್ನು ಎದುರಿಸುವ ಜತೆಗೆ ಮಲೇರಿಯಾ ಡೆಂಗ್ಯೂ ಬಗ್ಗೆಯೂ ಅತ್ಯಂತ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಹೇಳಿದರು.
ಮಲೇರಿಯಾ, ಡೆಂಗ್ಯೂ ಜ್ವರದ ಬಗ್ಗೆ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಮೇಯರ್ ದಿವಾಕರ ಪಾಂಡೇಶ್ವರ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಯಿತು. ಶಾಸಕರಾದ ಡಿ.ವೇದವ್ಯಾಸ ಕಾಮತ್ ಹಾಗೂ ಡಾ| ವೈ.ಭರತ್ ಶೆಟ್ಟಿ ಉಪಸ್ಥಿತರಿದ್ದರು.
ಕಳೆದ ವರ್ಷ ನಗರದಲ್ಲಿ ಡೆಂಗ್ಯೂ ಪ್ರಕರಣ ಅಧಿಕವಾಗಿ ಹಲವು ಪ್ರಾಣಹಾನಿ ಸಂಭವಿಸಿತ್ತು. ಜತೆಗೆ ಮಲೇರಿಯಾದಿಂದಲೂ ಸಾಕಷ್ಟು ಸಮಸ್ಯೆ ಆಗಿತ್ತು. ಈ ಬಾರಿ ಇಂತಹ ಸಮಸ್ಯೆ ಎದುರಾಗಬಾರದು. ಇದಕ್ಕಾಗಿ ಅಧಿಕಾರಿಗಳ ತಂಡ ವಿಶೇಷ ಕಾರ್ಯಯೋಜನೆ ರೂಪಿಸಬೇಕು. ಇದರಲ್ಲಿ ಯಾವುದೇ ಲೋಪಗಳಾಗಬಾರದು. ಕೋವಿಡ್ 19 ಎದುರಿಸುವ ಜತೆಗೆ ಡೆಂಗ್ಯೂ, ಮಲೇರಿಯಾ ಎದುರಿಸುವಲ್ಲಿಯೂ ಆದ್ಯತೆ ನೀಡಬೇಕು ಎಂದರು. ಉಪಮೇಯರ್ ವೇದಾವತಿ, ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.