ಸೀಲ್ಡೌನ್ ವಾರ್ಡ್ನಲ್ಲಿ ಸ್ವಚ್ಛತೆ ಪ್ರಾರಂಭಿಸಿದ ಪಾಲಿಕೆ
Team Udayavani, Apr 14, 2020, 5:37 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಕೋವಿಡ್ 19 ಸೋಂಕು ಪ್ರಕರಣಗಳು ಹೆಚ್ಚು ದಾಖಲಾಗಿರುವ ಹಾಗೂ ಸೀಲ್ಡೌನ್ ಆಗಿರುವ ಪಾದರಾಯನಪುರ ಮತ್ತು ಬಾಪೂಜಿ ನಗರ ವಾರ್ಡ್ನಲ್ಲಿ ಬಿಬಿಎಂಪಿ ಸ್ವಚ್ಛತಾ ಕಾರ್ಯಚರಣೆ ಶುರುಮಾಡಿದೆ. ಈ ಭಾಗದ ಎಲ್ಲೆಡೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲಾಗುತ್ತಿದೆ.
ಜತೆಗೆ ಬಡವರಿಗೆ ದಿನಸಿ ಕಿಟ್ ವಿತರಣೆ ಹಾಗೂ ಆರೋಗ್ಯ ತಪಾಸಣೆ ಮುಂದುವರಿಸಲಾಗಿದ್ದು, ವಾರ್ಡ್ಗಳ ಪ್ರತಿ ಮನೆಗೆ ವೈದ್ಯಾಧಿಕಾರಿಗಳು ಭೇಟಿ ನೀಡಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಅಲ್ಲದೆ, ಮನೆ ಬಾಗಿಲಿಗೆ ಹಣ್ಣು-ತರಕಾರಿ ಸಹಿತ ಅಗತ್ಯ ವಸ್ತುಗಳನ್ನು ತಲುಪಿಸುವ ಕೆಲಸವನ್ನು ಬಿಬಿಎಂಪಿ ಮಾಡುತ್ತಿದೆ. ಆದರೆ ಸೀಲ್ಡೌನ್ ಮಾಡಿ ಕಠಿನ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದರೂ ಇಲ್ಲಿನ ಕೆಲವರು ವಿನಾಕಾರಣ ರಸ್ತೆಗೆ ಇಳಿಯುತ್ತಿದ್ದಾರೆ. ಪೊಲೀಸ್ ಸಿಬಂದಿ ಮತ್ತು ಬಿಬಿಎಂಪಿ ಅಧಿಕಾರಿಗಳು ಮನೆಯಿಂದ ಹೊರ ಬಾರದಂತೆ ಜನರಲ್ಲಿ ಮನವಿ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.