ಬಾಂಬ್‌ ಪ್ರಕರಣ: ಆದಿತ್ಯ ರಾವ್‌ ವಿರುದ್ಧ ಆರೋಪ ಪಟ್ಟಿ ವಿಳಂಬ

Team Udayavani, Apr 14, 2020, 11:30 AM IST

ಬಾಂಬ್‌ ಪ್ರಕರಣ: ಆದಿತ್ಯ ರಾವ್‌ ವಿರುದ್ಧ ಆರೋಪ ಪಟ್ಟಿ ವಿಳಂಬ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇರಿಸಿದ್ದ ಪ್ರಕರಣದ ಆರೋಪಿ ಆದಿತ್ಯ ರಾವ್‌ನ ತನಿಖೆಗೆ ಸಂಬಂಧಿಸಿ ಬ್ರೈನ್‌ ಮ್ಯಾಪಿಂಗ್‌ ಮಾತ್ರ ಬಾಕಿ ಇದ್ದು, ಉಳಿದಂತೆ ಇತರ ಎಲ್ಲ ತನಿಖಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ.
ಈ ಮಧ್ಯೆ ಪ್ರಕರಣದ ಆರೋಪ ಪಟ್ಟಿ (ಚಾರ್ಜ್‌ ಶೀಟ್‌) ತಯಾರಾಗಿದ್ದು, ಅದಕ್ಕೆ ಜಿಲ್ಲಾಧಿಕಾರಿಗಳ ಅನುಮತಿ ಲಭಿಸಿದೆ. ರಾಜ್ಯ ಸರಕಾರದ ಅನುಮತಿ ಮಾತ್ರ ಬಾಕಿ ಉಳಿದಿದೆ.

ಬೆಂಗಳೂರಿಗೆ ಕರೆದೊಯ್ಯಬೇಕು
ಬ್ರೈನ್‌ ಮ್ಯಾಪಿಂಗ್‌ ಮಾಡಿಸಲು ಆರೋಪಿ ಆದಿತ್ಯ ರಾವ್‌ನನ್ನು ಬೆಂಗಳೂರಿಗೆ ಕರೆದೊಯ್ಯಬೇಕಾಗಿದೆ. ಆರೋಪ ಪಟ್ಟಿಗೆ ಸರಕಾರದ ಅನುಮತಿ ಪಡೆದುಕೊಳ್ಳಲು ಬೆಂಗಳೂರಿಗೆ ಹೋಗಬೇಕಿದೆ. ಆದರೆ, ಪ್ರಸ್ತುತ ಕೊರೊನಾ ವೈರಸ್‌ ಹರಡುವುದನ್ನು ತಡೆಯಲು ಲಾಕ್‌ಡೌನ್‌ ಘೋಷಿಸಿರುವುದರಿಂದ ಈ ಎರಡು ಕೆಲಸಗಳು ವಿಳಂಬವಾಗಿವೆ. ಈ ಹಿನ್ನೆಲೆಯಲ್ಲಿ ಆರೋಪ ಪಟ್ಟಿ ಸಲ್ಲಿಕೆಗೆ ನಿಗದಿ ಪಡಿಸಿರುವ ಅವಧಿಯನ್ನು ವಿಸ್ತರಿಸುವಂತೆ ಮನವಿ ಸಲ್ಲಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
ಲಾಕ್‌ಡೌನ್‌ ತೆರವುಗೊಂಡ ಬಳಿಕ ಆರೋಪಿಯ ಬ್ರೈನ್‌ ಮ್ಯಾಪಿಂಗ್‌ ಹಾಗೂ ಆರೋಪ ಪಟ್ಟಿಗೆ ಸರಕಾರದ ಅನುಮತಿ ಪಡೆದು ಅದನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಮೂಲಗಳು ವಿವರಿಸಿವೆ.

ಆರೋಪಿ ಆದಿತ್ಯ ರಾವ್‌ 2020ರ ಜ. 20ರಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ ಬಿಲ್ಡಿಂಗ್‌ನ ಟಿಕೆಟ್‌ ಕೌಂಟರ್‌ ಬಳಿ ಇರುವ ಪ್ರಯಾಣಿಕರ ಆಸನಗಳ ಸಮೀಪ ಬಾಂಬ್‌ ಇರುವ ಬ್ಯಾಗ್‌ ಇರಿಸಿ, ಬಳಿಕ ಪಾರ್ಕಿಂಗ್‌ ಪ್ರದೇಶದಲ್ಲಿದ್ದ ಆಟೋ ರಿಕ್ಷಾ ಏರಿ ಪರಾರಿಯಾಗಿದ್ದ. ಮಂಗಳೂರು ಪೊಲೀಸರು ಆತನನ್ನು ತನಿಖೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಮತ್ತೆ ತಮ್ಮ ಕಸ್ಟಡಿಗೆ ಪಡೆದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಗುರುತು ಪತ್ತೆ ಪರೇಡ್‌ ಪೂರ್ತಿಗೊಳಿಸಿದ್ದರು.

ಟಾಪ್ ನ್ಯೂಸ್

1-cid

ಸಿಐಡಿ‌; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cid

ಸಿಐಡಿ‌; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.