ನಿಖಿಲ್ ಸರಳ ವಿವಾಹ
Team Udayavani, Apr 14, 2020, 11:51 AM IST
ಕೋವಿಡ್-19 ಮಹಾಮಾರಿಯಿಂದಾಗಿ ಸದ್ಯ ದೇಶದೆಲ್ಲೆಡೆ ಲಾಕ್ ಡೌನ್ ಜಾರಿಯಲ್ಲಿದೆ. ಇದರ ನಡುವೆಯೇ ನಿಗದಿಯಂತೆ ನಿಖಿಲ್ ಕುಮಾರಸ್ವಾಮಿ ಮದುವೆಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಕುಟುಂಬ ಮುಂದಾಗಿದೆ.
ನಿಖೀಲ್ ಕುಮಾರಸ್ವಾಮಿ ಹಾಗೂ ರೇವತಿ ಮದುವೆ ಮುಹೂರ್ತ ಏಪ್ರಿಲ್ 17 ರಂದು ಫಿಕ್ಸ್ ಆಗಿತ್ತು. ರಾಮನಗರ ಹಾಗೂ ಚನ್ನಪಟ್ಟಣ ಮಧ್ಯೆ ಜಾನಪದ ಲೋಕದ ಬಳಿ ಅದ್ಧೂರಿಯಾಗಿ ಮದುವೆ ಮಾಡಲು ಕುಟುಂಬ ನಿರ್ಧರಿಸಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ಡೌನ್ ಆಗಿದ್ದರಿಂದ, ಪುತ್ರನ ವಿವಾಹವನ್ನು ನಿಗದಿತ ಮುಹೂ ರ್ತದಲ್ಲಿ ಮಾಡಬೇಕಾ ಅಥವಾ ಮುಂದೂಡಬೇಕಾ? ಎಂಬ ಗೊಂದಲ ಕುಮಾರಸ್ವಾಮಿ ಅವರಲ್ಲೂ ಇತ್ತು. ಆದರೆ
ಈಗ ಈ ಬಗ್ಗೆ ದೇವೇಗೌಡರ ಕುಟುಂಬ ಅಂತಿಮ ನಿರ್ಧಾರ ತೆಗೆದುಕೊಂಡಿದೆ.
ತಂದೆ ದೇವೇಗೌಡರ ಜೊತೆಗೆ ಭಾನುವಾರ ಸಂಜೆ ಕುಮಾರಸ್ವಾಮಿ ವಿವಾಹದ ಬಗ್ಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಂಡಿದ್ದಾರೆ. ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಯಾರನ್ನು ಮುಹೂರ್ತ ಕಾರ್ಯಕ್ಕೆ ಆಹ್ವಾನಿಸುವುದು ಬೇಡ. ಇಂತಹ ಸಂದರ್ಭದಲ್ಲಿ ಯಾವುದೇ ಸಭೆ, ಸಮಾರಂಭಗಳು ನಡೆಯಬಾರದು. ಕೋವಿಡ್-19 ಹರಡುವಿಕೆ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಬಹಳ ಮುಖ್ಯವಾಗಿದೆ. ಸದ್ಯಕ್ಕೆ ನಾವು ರಾಮನಗರ ಹಾಗೂ
ಚನ್ನಪಟ್ಟಣದ ಮಧ್ಯೆ ನಿಗದಿಯಂತೆ ವಿವಾಹ ನೆರವೇರಿಸಲು ಸಾಧ್ಯವಿಲ್ಲ. ಹೀಗಾಗಿ ಮನೆಯ ಮಟ್ಟಿಗೆ ಮದುವೆ ಕಾರ್ಯ ನೆರವೇರಿಸುವ ನಿರ್ಧಾರಕ್ಕೆ ಕುಮಾರಸ್ವಾಮಿ ಬಂದಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.