ಪ್ರವಾಸದ ಇತಿಹಾಸ ಇಲ್ಲದ ವ್ಯಕ್ತಿಗೆ ಸೋಂಕು ದೃಢ: ಚಿಕ್ಕಬಳ್ಳಾಪುರ ಜನತೆಯಲ್ಲಿ ಆತಂಕ
Team Udayavani, Apr 14, 2020, 1:28 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇದುವರೆಗೂ ದೆಹಲಿ, ಮೆಕ್ಕಾ ಮತ್ತಿತರ ಹೊರ ದೇಶಗಳಿಂದ ಬಂದವರಲ್ಲಿ ಮಾತ್ರ ಕೋವಿಡ್-19 ಸೋಂಕು ಪತ್ತೆಯಾಗಿದ್ದು ಒಂದಡೆಯಾದರೆ ಮಂಗಳವಾರ ಯಾವುದೇ ಪ್ರವಾಸದ ಇತಿಹಾಸ ಇಲ್ಲದ ವ್ಯಕ್ತಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿರುವುದು ಜಿಲ್ಲೆಯಲ್ಲಿ ತೀವ್ರ ಆತಂಕವನ್ನು ಉಂಟು ಮಾಡಿದೆ.
ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಬಳ್ಳಾಪುರ 17ನೇ ವಾರ್ಡ 65 ವರ್ಷದ ವ್ಯಕ್ತಿಯಲ್ಲಿ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ.
ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿ ಸಾಕಷ್ಟು ಮಂದಿದ್ದು ಆರೋಗ್ಯ ಇಲಾಖೆ ಅವರ ಪತ್ತೆ ಕಾರ್ಯಕ್ಕೆ ಮುಂದಾಗಿದೆ.
ಇದುವರೆಗೂ ಕೇವಲ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ಮಾತ್ರ 12 ಮಂದಿ ಕೋವಿಡ್-19 ಸೋಂಕಿತರು ಪತ್ತೆಯಾಗಿದ್ದರು. ಇದೀಗ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರಕ್ಕೂ ಕೋವಿಡ್-19 ಸೋಂಕು ವಿಸ್ತರಣೆ ಆಗಿರುವುದು ಜನರಲ್ಲಿ ಆತಂಕ ತಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.