ಗುಜರಾತ್ ಶಾಸಕರೊಬ್ಬರಿಗೆ ಸೋಂಕು ದೃಢ: ಸಿಎಂ ವಿಜಯ್ ರೂಪಾನಿ ಅವರೊಂದಿಗಿನ ಸಭೆಯಲ್ಲಿ ಭಾಗಿ
Team Udayavani, Apr 15, 2020, 9:51 AM IST
ಅಹಮದಬಾದ್: ಗುಜರಾತ್ ನ ಕಾಂಗ್ರೆಸ್ ಶಾಸಕರೊಬ್ಬರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರು ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಇತರ ಇಬ್ಬರು ಮಂತ್ರಿಗಳೊಂದಿಗಿನ ಸಭೆಯೊಂದರಲ್ಲಿ ಭಾಗವಹಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
ಕಾಂಗ್ರೆಸ್ ಶಾಸಕ ಇಮ್ರಾನ್ ಖೇದವಾಲ ಅವರಿಗೆ ಮಂಗಳವಾರ ಸಂಜೆ ಸೋಂಕು ತಗುಲಿರುವುದು ಖಚಿತವಾಗಿತ್ತು. ಮಂಗಳವಾರ ಗಾಂಧಿನಗರದ ಸಿಎಂ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಸುದ್ದಿಗೋಷ್ಠಿ ಕರೆದಿದ್ದರು. ಈ ಸುದ್ದಿಗೋಷ್ಠಿಯಲ್ಲಿ ಇಮ್ರಾನ್ ಸೇರಿ ಇತರ ಕಾಂಗ್ರೆಸ್ ಶಾಸಕರು ಭಾಗಿಯಾಗಿದ್ದರು. ಗಮನಾರ್ಹ ಸಂಗತಿಯೆಂದರೇ ಮುಖ್ಯಮಂತ್ರಿಯವರೊಂದಿಗಿನ ಸಭೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಗಿತ್ತು. ಪ್ರತಿಯೊಬ್ಬರು ಕನಿಷ್ಠ ಒಂದು ಮೀಟರ್ ಅಂತರದಲ್ಲಿ ಕುಳಿತುಕೊಂಡಿದ್ದರು. ಮುಖ್ಯಮಂತ್ರಿಯಲ್ಲದೆ, ಸಭೆಯಲ್ಲಿ ಆರೋಗ್ಯ ಮತ್ತು ಗೃಹ ಸಚಿವರು ಭಾಗವಹಿಸಿದ್ದರು
ಈ ಶಾಸಕ ಪತ್ರಿಕಾಗೋಷ್ಠಿಯೊಂದರಲ್ಲೂ ಭಾಗವಹಿಸಿದ್ದು ಇದರಲ್ಲಿ ರಾಜ್ಯದ ಇತರ ಶಾಸಕರು ಮತ್ತು ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು. ಹಲವು ದಿನಗಳಿಂದ ಆರೋಗ್ಯದಲ್ಲಿ ಏರುಪೇರು ಇದ್ದುದರಿಂದ ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದರು. ಆದರೇ ರಿಪೋರ್ಟ್ ಬರುವ ಮೊದಲು ಹಲವು ಸಭೆಗಳಲ್ಲಿ ಭಾಗವಹಿಸಿದ್ದಾರೆಂದು ವರದಿ ತಿಳಿಸಿದೆ.
ಪ್ರಸ್ತುತ ಅವರನ್ನು ಗಾಂಧಿನಗರದ ಎಸ್‌ವಿಪಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕರೊಂದಿಗೆ ಎಷ್ಟು ಜನ ಸಂಪರ್ಕಿತರಾಗಿದ್ದಾರೆ ಎಂಬ ಸಮರ್ಪಕ ಮಾಹಿತಿ ಲಭ್ಯವಾಗಿಲ್ಲ. ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಗುಜರಾತ್‌ನಲ್ಲಿ ಇದುವರೆಗೆ 617 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, 26 ಮಂದಿ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.