ಉಡುಪಿ: 2ನೆಯ ವ್ಯಕ್ತಿ ಆಸ್ಪತ್ರೆಯಿಂದ ಬಿಡುಗಡೆ; ಹೊಸ ಪ್ರಕರಣಗಳಿಲ್ಲ

Team Udayavani, Apr 15, 2020, 11:37 AM IST

ಉಡುಪಿ: 2ನೆಯ ವ್ಯಕ್ತಿ ಆಸ್ಪತ್ರೆಯಿಂದ ಬಿಡುಗಡೆ; ಹೊಸ ಪ್ರಕರಣಗಳಿಲ್ಲ

ಉಡುಪಿ: ಉಡುಪಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲೆಯ ಎರಡನೆಯ ಕೋವಿಡ್-19 ಸೋಂಕಿತ 35ರ ಹರೆಯದ ವ್ಯಕ್ತಿ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.  ಇವರ ಗಂಟಲು ದ್ರವದ ಎರಡೂ ಮಾದರಿಗಳು ನೆಗೆಟಿವ್‌ ಬಂದ ಕಾರಣ ಉಡುಪಿಯ ಡಾ| ಟಿಎಂಎ ಪೈ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಉಡುಪಿ ಸಮೀಪದ ಮಣಿಪುರ ನಿವಾಸಿಯಾದ ಇವರು ಮಾ. 17ರಂದು ದುಬಾೖಯಿಂದ ಮರಳಿದ್ದರು. ಮಾ. 27ರಂದು ಕಾರ್ಕಳ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಮಾ. 29ರಂದು ಇವರಿಗೆ ಕೊರೊನಾ ವೈರಸ್‌ ಇರುವುದು ಪತ್ತೆಯಾಗಿತ್ತು. ಬಳಿಕ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ, ಎ. 1ರಂದು ಉಡುಪಿ ಡಾ| ಟಿಎಂಎ ಪೈ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ದುಬಾೖಯಿಂದ ಬಂದ ಬಳಿಕ 10 ದಿನಗಳ ಕಾಲ ವಿವಿಧ ಕಡೆ ಸಂಚರಿಸಿದ ಪರಿಣಾಮ ಸುಮಾರು 200 ಜನರ ಸಂಪರ್ಕಕ್ಕೆ ಒಳಗಾಗಿದ್ದರು. ಇವ ರೆಲ್ಲರಿಗೂ ಆಸ್ಪತ್ರೆ ಕ್ವಾರಂಟೈನ್‌ ಮೂಲಕ ನಿಗಾ ವಹಿಸಿದ್ದು, ಎಲ್ಲರ ಗಂಟಲು ದ್ರವದ ಮಾದರಿ ನೆಗೆಟಿವ್‌ ಬಂದಿದೆ. ಇವರಿಗೆ ಮನೆಯಲ್ಲಿ ನಿಗಾ ವಹಿಸಲು ಸೂಚಿಸಲಾಗಿದೆ.

ಮೂರನೆಯ ವ್ಯಕ್ತಿಯ ಮಾದರಿ ವರದಿ ಮತ್ತೆ ಪಾಸಿಟಿವ್‌ ಆಗಿದೆ. ಹೀಗಾಗಿ ಇನ್ನು 12 ದಿನಗಳ ಬಳಿಕ ಗಂಟಲು ದ್ರವದ ಮಾದರಿಯನ್ನು ಕಳುಹಿಸಬೇಕಾಗಿದೆ. ಆದರೆ, ಇವರ ಆರೋಗ್ಯ ಸುಧಾರಣೆಯಲ್ಲಿದೆ. ಭಟ್ಕಳದ ಗರ್ಭಿಣಿಯ ಆರೋಗ್ಯವೂ ಸ್ಥಿರವಾಗಿದೆ ಎಂದು ಡಾ| ಸೂಡ ತಿಳಿಸಿದ್ದಾರೆ.
14 ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಹೊಸ ಪ್ರಕರಣಗಳು ದಾಖಲಾಗಿಲ್ಲ.

17 ಮಂದಿ ಐಸೊಲೇಶನ್‌
ಮಂಗಳವಾರ 8 ಮಂದಿ ಪುರುಷರಿಗೆ ಮತ್ತು ಇಬ್ಬರು ಮಹಿಳೆಯರಿಗೆ ತೀವ್ರ ಉಸಿರಾಟದ ಸಮಸ್ಯೆ ಆಗಿದ್ದು, 6 ಮಂದಿ ಪುರುಷರು ಮತ್ತು ಓರ್ವ ಮಹಿಳೆಗೆ ಕೊರೊನಾ ಶಂಕೆ ವ್ಯಕ್ತವಾಗಿದ್ದು, ಒಟ್ಟು 17 ಮಂದಿಯನ್ನು ಐಸೊಲೇಶನ್‌ ವಾರ್ಡ್‌ಗೆ ದಾಖಲು ಮಾಡಲಾಗಿದೆ. ಪ್ರಸಕ್ತ 38 ಮಂದಿ ಐಸೊಲೇಶನ್‌ ವಾರ್ಡ್‌ನಲ್ಲಿದ್ದಾರೆ. ಮಂಗಳವಾರ 8 ಸಹಿತ ಈವರೆಗೆ 194 ಮಂದಿ ಐಸೊಲೇಶನ್‌ ವಾರ್ಡ್‌ನಿಂದ ಬಿಡುಗಡೆಯಾಗಿದ್ದಾರೆ.

ಮಂಗಳವಾರ ಒಟ್ಟು 108 ಜನರ ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇವರಲ್ಲಿ ಒಬ್ಬರು ತೀವ್ರ ಉಸಿರಾಟದ ಸಮಸ್ಯೆ ಉಳ್ಳವರು, ಒಬ್ಬರು ಕೊರೊನಾ ಶಂಕಿತರು, 105 ಮಂದಿ ಸೋಂಕಿತರ ಸಂಪರ್ಕದವರು, ಒಬ್ಬರು ಫ‌ೂÉ ಜ್ವರ ಇರುವವರು. ಮಂಗಳವಾರ 39 ಜನರ ವರದಿಗಳು ಬಂದಿದ್ದು, ಎಲ್ಲವೂ ನೆಗೆಟಿವ್‌ ಆಗಿವೆ. 125 ವರದಿಗಳು ಬರಬೇಕಾಗಿವೆ.

ಮಂಗಳವಾರ 11 ಜನರು ಹೆಸರು ನೋಂದಾಯಿಸಿದ್ದಾರೆ. 105 ಮಂದಿ 28 ದಿನಗಳ, 23 ಮಂದಿ 14 ದಿನಗಳ ನಿಗಾ ಮುಗಿಸಿದ್ದಾರೆ. ಪ್ರಸ್ತುತ 101 ಜನರು ಹೋಮ್‌ ಕ್ವಾರಂಟೈನ್‌ನಲ್ಲಿದ್ದಾರೆ. ಮಂಗಳವಾರ 9 ಮಂದಿ ಆಸ್ಪತ್ರೆ ಕ್ವಾರಂಟೈನ್‌ಗೆ ದಾಖಲಾಗಿದ್ದು, 19 ಮಂದಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 27 ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ.

ತಹಶೀಲ್ದಾರ್‌ ಕಚೇರಿಯಲ್ಲಿ ಅರ್ಜಿ
ಹೊರ ಜಿಲ್ಲೆ ಮತ್ತು ರಾಜ್ಯಗಳಿಗೆ ಹೋಗಲು ಅನುಮತಿ ಪಡೆಯುವ ಸಲುವಾಗಿ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ಬರುವ ಬದಲು ತಹಶೀಲ್ದಾರ್‌ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ತುರ್ತು ಚಿಕಿತ್ಸೆ, ಅಗತ್ಯ ಸೇವೆ ಇತ್ಯಾದಿಗಳಿಗೆ ಅಗತ್ಯ ದಾಖಲೆಗಳೊಂದಿಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.