ಸುಳ್ಳು ಸುದ್ದಿ ಪ್ರಸಾರ ಮಾಡಿದರೆ ಕಠಿಣ ಕ್ರಮ
Team Udayavani, Apr 15, 2020, 12:06 PM IST
ಬೆಂಗಳೂರು: ಕೋವಿಡ್ 19 ವಿಚಾರಕ್ಕೆ ಸಂಬಂಧಿಸಿದಂತೆ ಸುಳ್ಳುಸುದ್ದಿ ಪ್ರಸಾರ ಮಾಡುವುದು ಹಾಗೂ ನಗರದ ಜನರಲ್ಲಿ ಆತಂಕ ಸೃಷ್ಟಿಮಾಡುವ ಸುದ್ದಿ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ಕುಮಾರ್ ಎಚ್ಚರಿಸಿದ್ದಾರೆ.
ನಗರದಲ್ಲಿ ಕೋವಿಡ್ 19 ಸೋಂಕು ದೃಢಪಟ್ಟ 40 ವಾರ್ಡ್ಗಳನ್ನು ಸೀಲ್ಡೌನ್ ಮಾಡಲಾಗುವುದು ಎಂದು ಮಂಗಳವಾರ ಕೆಲವು ಸುದ್ದಿ ಮಾಧ್ಯಮಗಳು ಪ್ರಕಟಿಸಿದ್ದವು. ಇದರಿಂದ ಸಾಕಷ್ಟು ಗೊಂದಲ ಹಾಗೂ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಸಂಬಂಧ ಸ್ಪಷ್ಟಣೆ ನೀಡಿರುವ ಆಯುಕ್ತರು, ಪಾದರಾಯನಪುರ ಹಾಗೂ ಬಾಪೂಜಿನಗರ ವಾರ್ಡ್ಗಳನ್ನು ಮಾತ್ರ ಸೀಲ್ಡೌನ್ ಮಾಡಲಾಗಿದೆ.ಹೀಗಾಗಿ, ಜನ ಆತಂಕ ಪಡಬೇಕಾಗಿಲ್ಲ. ಅಲ್ಲದೆ, ನಿತ್ಯ ನಗರದಲ್ಲಿ ಕೊರೊನಾ ಸೋಂಕಿನ ಕುರಿತು ತೆಗೆದುಕೊಳ್ಳುವ ತೀರ್ಮಾನಗಳ ಸಂಪೂರ್ಣ ಮಾಹಿತಿ ನೀಡುತ್ತಿದ್ದೇವೆ ಎಂದು ಹೇಳಿದರು. ಕೋವಿಡ್ 19 ಸೋಂಕಿನ ಬಗ್ಗೆ ಜನ ಈಗಾಗಲೇ ಆತಂಕಕ್ಕೆ ಒಳಗಾಗಿದ್ದಾರೆ. ಇಂದಿನಿಂದ (ಬುಧವಾರದಿಂದ) ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಸುಳ್ಳು ಮತ್ತು ತುಪ್ಪು ಸುದ್ದಿ ಪ್ರಕಟಿಸುವ ಮತ್ತು ಪ್ರಸಾರ ಮಾಡುವ ಮಾಧ್ಯಮಗಳ ವಿರುದ್ಧ ಕಠಿಣಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.