ಭಾರತದ ಬಾವಲಿಗಳ 2 ತಳಿಗಳಲ್ಲಿ ಕೋವಿಡ್ 19 ವೈರಸ್ ಪತ್ತೆ
Team Udayavani, Apr 15, 2020, 5:15 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಇದೇ ಮೊದಲ ಬಾರಿಗೆ ಭಾರತದ ಬಾವಲಿಗಳ ಎರಡು ತಳಿಗಳಲ್ಲಿ ಕೋವಿಡ್ ವೈರಸ್ ಇರುವುದು ದೃಢಪಟ್ಟಿದೆ. ಇಂಡಿಯನ್ ಫ್ಲೈಯಿಂಗ್ ಫಾಕ್ಸ್ ಮತ್ತು ರೋಸೆಟ್ಟಸ್ ಎಂಬ ತಳಿಗಳ ಬಾವಲಿಗಳಲ್ಲಿ ಕೋವಿಡ್ 19 ವೈರಸ್ ಇರುವ ಆಘಾತಕಾರಿ ಮಾಹಿತಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ನಡೆಸಿದ ಅಧ್ಯಯನದಿಂದ ತಿಳಿದುಬಂದಿದೆ.
ಕರ್ನಾಟಕ, ಕೇರಳ, ತಮಿಳುನಾಡು, ಹಿಮಾಚಲ ಪ್ರದೇಶ ಮತ್ತು ಪುದುಚೇರಿಯಿಂದ ಈ ತಳಿಗಳ 25 ಬಾವಲಿಗಳ ಗಂಟಲು ದ್ರಾವಣವನ್ನು ಸಂಗ್ರಹಿಸಿ, ಅವುಗಳನ್ನು ರಿವರ್ಸ್ – ಟ್ರಾನ್ಸ್ಕ್ರಿಪ್ಶನ್ ಪಾಲಿಮರೇಸ್ ಚೈನ್ ರಿಯಾಕ್ಷನ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಬಾವಲಿ ಕೋವಿಡ್ 19 ವೈರಸ್ ನ (ಬಿಟಿ- ಕೋವ್) ಅಸ್ತಿತ್ವವು ಬೆಳಕಿಗೆ ಬಂದಿದೆ. ಆದರೆ, ಬಾವಲಿಗಳಲ್ಲಿರುವ ಈ ಕೋವಿಡ್ 19 ವೈರಸ್ ಮಾನವನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪುಣೆಯ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿಯ (ಎನ್ ಐವಿ) ವಿಜ್ಞಾನಿಗಳ ತಂಡವೂ ಈ ಅಧ್ಯಯನದಲ್ಲಿ ಭಾಗಿಯಾಗಿತ್ತು. ಇನ್ನೂ ಎರಡು ತಳಿಗಳ ಬಾವಲಿಗಳನ್ನೂ ಪರೀಕ್ಷಿಸಲಾಗುತ್ತಿದ್ದು, ಅವುಗಳ ವರದಿ ಇನ್ನಷ್ಟೇ ಬರಬೇಕಿದೆ ಎಂದು ಮೂಲಗಳು ಹೇಳಿವೆ.
2018ರಲ್ಲಿ ಕೇರಳದಲ್ಲಿ ನಿಫಾ ವೈರಸ್ ಸುದ್ದಿ ಮಾಡಿದಾಗಲೇ, ಬೇರೆ ಬೇರೆ ರಾಜ್ಯಗಳಿಂದ ಬಾವಲಿಗಳ ಮಾದರಿಗಳನ್ನು ಸಂಗ್ರಹಿಸಿ ಅಧ್ಯಯನ ಆರಂಭಿಸಲಾಗಿತ್ತು. ಇದೀಗ ಕೋವಿಡ್ 19 ವೈರಸ್ ಕೂಡ ಜಗತ್ತಿನಾದ್ಯಂತ ಭಾರೀ ಸಾವು ನೋವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ, ಈ ಅಧ್ಯಯನವು ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.