ಡಾ|ಬಿ.ಆರ್.ಅಂಬೇಡ್ಕರ್ ಜಯಂತಿ ಜಿಲ್ಲಾದ್ಯಂತ ಸರಳ ಆಚರಣೆ
Team Udayavani, Apr 15, 2020, 6:12 PM IST
ಧಾರವಾಡ: ಸಂವಿಧಾನ ಶಿಲ್ಪಿ ಡಾ|ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಧಾರವಾಡ: ಕೋವೀಡ್-19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಡಾ|ಬಿ. ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಪ್ರಸಾದ ಅಬ್ಬಯ್ಯ, ಸಿ.ಎಂ.ನಿಂಬಣ್ಣವರ, ಅರವಿಂದ ಬೆಲ್ಲದ, ಪ್ರದೀಪ ಶೆಟ್ಟರ, ಎಸ್‌ಪಿ ವರ್ತಿಕಾ ಕಟಿಯಾರ್, ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ, ಅಪರ ಜಿಲ್ಲಾ ಧಿಕಾರಿ ಶಿವಾನಂದ ಕರಾಳೆ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಎನ್.ಆರ್ .ಪುರುಷೋತ್ತಮ ಇದ್ದರು.
ಪುತ್ಥಳಿಗೆ ಮಾಲಾರ್ಪಣೆ: ಜುಬ್ಲಿ ವೃತ್ತದ ಡಾ|ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಮಾಲಾರ್ಪಣೆ ಮಾಡಿದರು. ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಇದ್ದರು. ಡಾ|ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಡಿಸಿ ದೀಪಾ ಚೋಳನ್ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮಾಲಾರ್ಪಣೆ ಮಾಡಿದರು.
ನಗರದ ಜ್ಯುಬ್ಲಿ ವೃತ್ತದಲ್ಲಿರುವ ಡಾ|ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ನಂತರ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಜಿಪಂ ಸಿಇಒ ಡಾ| ಬಿ.ಸಿ ಸತೀಶ್, ಎಸ್‌ಪಿ ವರ್ತಿಕಾ ಕಟಿಯಾರ, ಎಸಿ ಮಹ್ಮದ್ ಜುಬೇರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪುರುಷೋತ್ತಮ, ತಹಸೀಲ್ದಾರ್ ಸಂತೋಷ ಬಿರಾದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
Gokarna ಬೀಚಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಸಾವು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.