ಕೃಷಿ ಚಟುವಟಿಕೆಗೆ ನಿರ್ಬಂಧವಿಲ್ಲ: ಸಚಿವ

Team Udayavani, Apr 15, 2020, 6:00 PM IST

ಕೃಷಿ ಚಟುವಟಿಕೆಗೆ ನಿರ್ಬಂಧವಿಲ್ಲ: ಸಚಿವ

ದೇವನಹಳ್ಳಿ: ದೇಶಕ್ಕೆ ಅನ್ನ ನೀಡುವ ರೈತರ ಸಮಸ್ಯೆ ಮತ್ತು ನೋವು, ನಲಿವುಗಳಿಗೆ ಸ್ಪಂದಿಸುವುದಕ್ಕೆ ಕೇಂದ್ರ-ರಾಜ್ಯ ಸರ್ಕಾರ ಸದಾ ಸಿದ್ಧವಿದ್ದು ಯಾವುದೇ ಕಾರಣಕ್ಕೂ ರೈತರು ಆತ್ಮ ಸ್ಥೈರ್ಯ ಕಳೆದುಕೊಳ್ಳಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಸಲಹೆ ನೀಡಿದರು.

ತಾಲೂಕಿನ ಜಿಲ್ಲಾಡಳಿತ ಭವನದ ಜಿಪಂ ಕಚೇರಿ ಸಭಾಂಗಣದಲ್ಲಿ ಕೋವಿಡ್ 19 ವೈರಸ್‌ ಸೋಂಕು ನಿವಾರಣೆಗಾಗಿ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಹಾಗೂ ಕೃಷಿ ಇಲಾಖೆ ಸಂಬಂಧಿಸಿದಂತೆ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ವರದಿ ಸಲ್ಲಿಕೆ:ಕೃಷಿ ಚಟುವಟಿಕೆಗೆ ಯಾವುದೇ ನಿರ್ಬಂಧವಿಲ್ಲ. ಅದೇ ರೀತಿ ಪೂರಕ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ. ಮುಂಗಾರಿಗೆ ಬಿತ್ತನೆ ಬೀಜಗಳನ್ನು ರೈತರಿಗೆ ನಿಗದಿತ ಸಮಯದಲ್ಲಿ ನೀಡಬೇಕು. ರಾಜ್ಯದ 21 ಜಿಲ್ಲೆಯಲ್ಲಿ ಪ್ರವಾಸ ಮಾಡಿ ರೈತರ ಸಮಸ್ಯೆಗಳ ಬಗ್ಗೆ ಸಿಎಂ ಯಡಿಯೂರಪ್ಪ ಅವರಿಗೆ 19 ಜಿಲ್ಲೆಗಳ ವಸ್ತು ಸ್ಥಿತಿ ರೈತರ ಸಮಸ್ಯೆಗಳ ಸಂಬಂಧಿಸಿದಂತೆ ವರದಿ ಸಲ್ಲಿಸಿದ್ದೇನೆಂದರು. ರೈತರಿಗೆ ಹಸಿರು ಪಾಸ್‌ ನೀಡಲಾಗಿದೆ. ಕೇಂದ್ರದಿಂದ ಖರೀದಿಸಿರುವ ರಾಗಿಗೆ 1200 ಕೋಟಿ ರೂ. ಅನುದಾನ ಬಿಡುಗಡೆ ಆಗಿದ್ದು ಶೀಘ್ರ ರೈತರ ಖಾತೆಗೆ ಜಮೆ ಆಗಲಿದೆ ಎಂದರು.

ಶಾಸಕ ರಾದ ಎಲ್‌.ಎನ್‌.ನಾರಾಯಣ ಸ್ವಾಮಿ, ವೆಂಕಟ ರಮಣಯ್ಯ, ಶ್ರೀನಿ ವಾಸ ಮೂರ್ತಿ, ಶರತ್‌ ಬಚ್ಚೇಗೌಡ, ವಿಧಾನ ಪರಿಷತ್‌ ಸದಸ್ಯ ಆರ್‌.ದೇವೇಗೌಡ ಮಾತನಾಡಿದರು. ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀಶ್‌ ಮಾತನಾಡಿ, ಲಾಕ್‌ ಡೌನ್‌ನಿಂದಾಗಿ ಕೃಷಿ ಚಟುವಟಿಗೆ ಪೂರಕವಾಗಿರುವ ಟ್ರಾÂಕ್ಟರ್‌ ಗ್ಯಾರೇಜ್‌, ಬಿತ್ತನೆ ಬೀಜ, ಗೊಬ್ಬರದ ಅಂಗಡಿ, ಹಾರ್ಡ್‌ವೇರ್‌ ಅಂಗಡಿ ತೆರೆದರೆ ರೈತರಿಗೆ ಅನುಕೂಲವಾಗುವುದು ಎಂದು ತಿಳಿಸಿದರು. ತಾಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್‌, ರೈತರು ಬೆಳೆಗೆ ಪರಿಹಾರ ಒದಗಿಸಿ, ಹೆಚ್ಚು ಹೊತ್ತು ವಿದ್ಯುತ್‌ ನೀಡಬೇಕೆಂದರು.

ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಗಿರೀಶ್‌, ರಾಗಿ ಜೂನ್‌ 15 ರಿಂದ ಜುಲೈ ಅಂತ್ಯದವರೆಗೆ ಬಿತ್ತನೆ ಮಾಡಲಾಗುವುದು. ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಮೇ ಮೊದಲೇ ವಾರ ಬಿತ್ತನೆ ಬೀಜ ದಾಸ್ತಾನು ಮಾಡಿ ಮೇ 2ನೇ ವಾರದಲ್ಲಿ ಬಿತ್ತನೆ ಬೀಜ ವಿತರಿಸಲಾಗುವುದು. ರಸಗೊಬ್ಬರದ ಕೊರತೆ ಜಿಲ್ಲೆಯಲ್ಲಿ ಇಲ್ಲ ಎಂದರು.

ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ, ಜಿಪಂ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷೆ ಕನ್ಯಾಕುಮಾರಿ, ಜಿಪಂ ಸಿಇಒ ಎನ್‌. ಎಂ.ನಾಗರಾಜ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣ ನವರ್‌, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್‌ ಕೆ.ನಾಯಕ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.