ದೇಶದ ಸಮಸ್ಯೆಗಳಿಗೆ ಸಂವಿಧಾನದಲ್ಲಿದೆ ಪರಿಹಾರ
Team Udayavani, Apr 15, 2020, 2:39 PM IST
ಚಿಕ್ಕಮಗಳೂರು: ಡಾ| ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಸಚಿವ ಸಿ.ಟಿ.ರವಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು
ಚಿಕ್ಕಮಗಳೂರು: ದೇಶ ಎದುರಿಸುತ್ತಿರುವ ಆರ್ಥಿಕ, ರಾಜಕೀಯ, ಸಾಮಾಜಿಕ ಸಮಸ್ಯೆಗಳಿಗೆ ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಯಲ್ಲಿ ಯೋಗ್ಯ ಮಾರ್ಗದರ್ಶನಗಳಿದ್ದು, ಅವುಗಳನ್ನು ಅಳವಡಿಸಿಕೊಳ್ಳಬೇಕೆಂದು ಸಚಿವ ಸಿ.ಟಿ.ರವಿ ತಿಳಿಸಿದರು.
ಮಂಗಳವಾರ ನಗರದ ಜಿಪಂ ಆವರಣದಲ್ಲಿ ಭಾರತರತ್ನ ಡಾ| ಬಿ.ಆರ್.ಅಂಬೇಡ್ಕರ್ ಅವರ 129ನೇ ಜನ್ಮ ದಿನಾಚರಣೆ ಅಂಗವಾಗಿ ಡಾ| ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಸಂವಿಧಾನವನ್ನು ಕೇವಲ ಶೋಷಿತ ವರ್ಗದವರ ಕಲ್ಯಾಣಕ್ಕೆ ಮಾತ್ರವಲ್ಲದೇ, ದೇಶದ ಸರ್ವಜನರ ಒಳಿತಿಗೂ ಮಾರ್ಗ ದರ್ಶನ ಮಾಡಿದ್ದಾರೆ. ಕೇವಲ ಸಂವಿಧಾನದಿಂದ ಮಾತ್ರ ಸಮಾಜದ ಹಾಗೂ ರಾಷ್ಟ್ರದ ಉದ್ಧಾರ ಆಗುವುದಿಲ್ಲ. ಆದರೆ, ಸಂವಿಧಾನ ಯಾರ ಕೈಯಲ್ಲಿ ಇರುತ್ತದೆ ಎನ್ನುವುದರ ಮೇಲೆ ಹಾಗೂ ಅದು ಹೇಗೆ ಅನುಷ್ಠಾನ ಆಗುತ್ತದೆ ಎನ್ನುವುದರ ಮೇಲೆ ನಿರ್ಧಾರವಾಗಿರುತ್ತದೆ ಎಂದರು.
ಮೇಲ್ಮನೆ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಸಂವಿಧಾನ ನಮ್ಮ ಶ್ರೇಷ್ಠ ಗ್ರಂಥ ವಾಗಿದ್ದು, ಅದರ ಆಶಯಕ್ಕೆ ತಕ್ಕಂತೆ ನಾವು ಕರ್ತವ್ಯ ನಿರ್ವಹಿಸಬೇಕು ಎಂದರು. ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ಉಪಾಧ್ಯಕ್ಷ ವಿಜಯಕುಮಾರ್, ಸದಸ್ಯರಾದ ಸೋಮ ಶೇಖರ್, ಜಸಂತಾ ಅನಿಲ್ ಕುಮಾರ್, ಕವಿತಾ ಲಿಂಗರಾಜು, ತಾಪಂ ಸದಸ್ಯರಾದ ಮಹೇಶ್, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಜಿಲ್ಲಾ ಧಿಕಾರಿ ಡಾ| ಬಗಾದಿ ಗೌತಮ್, ಸಿಇಒ ಎಸ್.ಪೂವಿತಾ, ಎಸ್ಪಿ ಹರೀಶ್ ಪಾಂಡೆ, ದಲಿತ ಮುಖಂಡ ಕೆ.ಟಿ.ರಾಧಾಕೃಷ್ಣ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.