ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ : ಸರಕಾರದ ಆದೇಶಕ್ಕೆ ಅಸ್ತು
Team Udayavani, Apr 16, 2020, 5:43 AM IST
ಬೆಂಗಳೂರು: ವಿವಿಧ ಬಗೆಯ 34 ಖಾಸಗಿ ವಲಯಗಳ ಉದ್ದಿಮೆಗಳ ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ ಮಾಡಿ ರಾಜ್ಯ ಸರಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಊರ್ಜಿತಗೊಳಿಸಿದೆ.
ಈ ಸಂಬಂಧ ಖಾಸಗಿ ಉದ್ದಿಮೆಗಳು, ಹೊಟೇಲ್ ಮತ್ತು ಆಸ್ಪತ್ರೆಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿ ಆದೇಶಿಸಿತು.
ಈ ಸಂಬಂಧ ಏಕಸದಸ್ಯ ನ್ಯಾಯಪೀಠ 2019ರ ಮಾ. 29ರಂದು ನೀಡಿದ್ದ ತೀರ್ಪನ್ನು ವಿಭಾಗೀಯ ನ್ಯಾಯಪೀಠ ಎತ್ತಿ ಹಿಡಿದಿದೆ. ಆದರೆ ಪ್ರಸ್ತುತ ಕೋವಿಡ್ 19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಲಾಕ್‌ಡೌನ್ ಇರುವುದರಿಂದ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಈ ಆದೇಶ ಪ್ರಶ್ನಿಸಲು ಅನುಕೂಲವಾಗುವಂತೆ ವಿಭಾಗೀಯ ನ್ಯಾಯಪೀಠ ತನ್ನ ಆದೇಶಕ್ಕೆ ತಾನೇ 12 ವಾರಗಳ ಕಾಲ ತಡೆಯಾಜ್ಞೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.