ಮಣಿಪುರದ ಗಮ್ಚಾಕ್ಕೆ ಪ್ರಸಿದ್ಧಿ ತಂದ ಮೋದಿ
Team Udayavani, Apr 16, 2020, 6:47 AM IST
ಹೊಸದಿಲ್ಲಿ: ಮಂಗಳವಾರ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುವಾಗ ಪ್ರಧಾನಿ ನರೇಂದ್ರ ಮೋದಿಯವರು ಕೆಂಪು ಅಂಚು ಇರುವ ಮಣಿಪುರದ ಕೈಟವೆಲ್ ಅನ್ನು ‘ಮುಖಗವಸಾ’ಗಿ ಬಳಸಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದೆ.
‘ಗಮ್ಚಾ’ ಎಂದು ಕರೆಯಲ್ಪಡುವ ಈ ವಸ್ತ್ರದಿಂದ ಅವರು ತಮ್ಮ ಮೂಗು, ಬಾಯಿಯನ್ನು ಮಾಸ್ಕ್ ಗಳ ರೀತಿ ಮುಚ್ಚಿಕೊಂಡಿದ್ದರು. ಭಾಷಣ ಮುಗಿದ ಬಳಿಕ ತಮ್ಮ ಟ್ವಿಟರ್ ಖಾತೆಯ ಪ್ರೊಫೈಲ್ ಚಿತ್ರವನ್ನು ಬದಲಿಸಿ, ತಾವು ಗಮ್ಚಾ ಧರಿಸಿದ್ದ ಫೋಟೋ ಹಾಕಿಕೊಂಡಿದ್ದರು.
ಈಗ ಅನೇಕರು ಮೋದಿಯವರನ್ನು ಅನುಸರಿಸಲು ಆರಂಭಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿನ ಪ್ರೊಫೈಲ್ ಫೋಟೋಗಳನ್ನು ಬದಲಾಯಿಸಿ, ಮಾಸ್ಕ್ ಗಳು ಅಥವಾ ಬೇರೆ ಬೇರೆ ರೀತಿಯ ಗಮ್ಚಾಗಳನ್ನು ಧರಿಸಿರುವ ಫೋಟೋಗಳನ್ನು ಹಾಕಿಕೊಳ್ಳಲಾರಂಭಿಸಿದ್ದಾರೆ.
ಇವರಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ಗಿರಿರಾಜ್ ಸಿಂಗ್, ಹರ್ಷವರ್ಧನ್, ದೆಹಲಿಯ ಬಿಜೆಪಿ ನಾಯಕ ಮನೋಜ್ ತಿವಾರಿ ಇನ್ನೂ ಮುಂತಾದವರು ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.