ನೌಕರರನ್ನು ವಜಾ ಮಾಡದಿರಿ: ಚವ್ಹಾಣ
Team Udayavani, Apr 16, 2020, 4:26 PM IST
ಬೀದರ: ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಬಳಿ ಬ್ರಿಮ್ಸ್ ಡಿ ದರ್ಜೆ ನೌಕರರು ಅಳಲು ತೋಡಿಕೊಂಡರು
ಬೀದರ: ಲಾಕ್‌ಡೌನ್ ಅವಧಿಯಲ್ಲಿ ಯಾರನ್ನೂ ಕೆಲಸದಿಂದ ತೆಗೆಯಬಾರದು ಎಂದು ಪ್ರಧಾನಿ ಸ್ಪಷ್ಟವಾಗಿ ಹೇಳಿದ್ದು, ಹಾಗಾಗಿ ಬ್ರಿಮ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ ದರ್ಜೆ ನೌಕರರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾ ಮಾಡಬಾರದು. ಆಡಳಿತಾತ್ಮಕ ಸಮಸ್ಯೆಗಳಿದ್ದರೆ ಸಂಬಂಧಿತರೊಂದಿಗೆ ಸಮಾಲೋಚನೆ ನಡೆಸಿ ನಿವಾರಿಸಿಕೊಳ್ಳಬೇಕು ಎಂದು ಸಚಿವ ಪ್ರಭು ಚವ್ಹಾಣ ಬ್ರಿಮ್ಸ್ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಗುತ್ತಿಗೆದಾರರು ಬದಲಾದ ಮಾತ್ರಕ್ಕೆ ನಿರಂತರವಾಗಿ ಕೆಲಸ ಮಾಡಿಕೊಂಡು ಬಂದಿರುವ “ಡಿ’ ದರ್ಜೆ ನೌಕರರನ್ನು ಕೆಲಸದಿಂದ ತೆಗೆದು ಹಾಕುವುದು ನ್ಯಾಯವಲ್ಲ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಲ್ಲಿ ಮುಂದುವರಿಸಬೇಕು. ಬ್ರಿಮ್ಸ್ ನಿರ್ದೇಶಕರು ಪ್ರಧಾನಿಗಳ ಮನವಿಯನ್ನೂ ತಿರಸ್ಕರಿಸಿ ನಿರ್ಧಾರ ತೆಗೆದುಕೊಳ್ಳಲು ಮುಂದಾದರೆ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಆರೋಗ್ಯ ಸಚಿವರಿಗೆ ಪತ್ರ ಬರೆಯುವುದು ಅನಿವಾರ್ಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನ ಮೊದಲೇ ಸಂಕಷ್ಟದಲ್ಲಿದ್ದು, ಮಾನವೀಯತೆ ಮರೆತು ರಾಜಕಾರಣ ಮಾಡಲು ಹೊರಟರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಬ್ರಿಮ್ಸ್ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಕಾರ್ಮಿಕರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ದಿಸೆಯಲ್ಲಿ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.