ಅಧಿಕಾರಿಗಳು ಜಾಗೃತಿಯಿಂದ ಕಾರ್ಯ ನಿರ್ವಹಿಸಲಿ: ಪಾಟೀಲ
Team Udayavani, Apr 16, 2020, 5:57 PM IST
ಇಂಡಿ: ಅಧಿ ಕಾರಿಗಳ ಸಭೆಯಲ್ಲಿ ಶಾಸಕ ಯಶವಂತ್ರಾಯಗೌಡ ಪಾಟೀಲ ಮಾತನಾಡಿದರು.
ಇಂಡಿ: ವಿಜಯಪುರಕ್ಕೂ ವೈರಸ್ ಹರಡಿದ್ದು, ತಾಲೂಕಾಡಳಿತದ ಅಧಿಕಾರಿಗಳು ಅತೀ ಜಾಗ್ರತೆಯಿಂದ ಕಾರ್ಯ ನಿರ್ವಹಿಸಬೇಕಿದೆ ಎಂದು ಶಾಸಕ ಯಶವಂತ್ರಾಯಗೌಡ ಪಾಟೀಲ ಸೂಚನೆ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕೋವಿಡ್-19 ಕುರಿತು ನಡೆಸಿದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾವು ಮಹಾರಾಷ್ಟ್ರ ಮತ್ತು ಕರ್ನಾಟಕದ ಮಧ್ಯದಲ್ಲಿದ್ದೇವೆ. ಅತ್ತ ಮಹಾರಾಷ್ಟ್ರದ ಸೋಲ್ಲಾಪುರ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಕೋವಿಡ್ 19 ನಿಂದ ಸಾವನ್ನಪ್ಪಿದ್ದರೆ ಇತ್ತ ವಿಜಯಪುರದಲ್ಲೂ ಒಂದು ಸಾವು ಮತ್ತು 9 ಸೋಂಕಿತ ಪ್ರಕರಣಗಳು ಬೆಳಕಿಗೆ ಬಂದಿವೆ. ಜಿಲ್ಲೆಯಲ್ಲಿ ವೇಗವಾಗಿ ಈ ಕೋವಿಡ್-19 ಹರಡುತ್ತಿದ್ದು, ನಮ್ಮ ತಾಲೂಕಿನ ಜನತೆ ಇದರ ಬಗ್ಗೆ ಎಚ್ಚರವಹಿಸಬೇಕಿದೆ.
ತಾಲೂಕು ಮಟ್ಟದ ಅಧಿಕಾರಿಗಳು ಈ ವೈರಸ್ ತಡೆಗೆ ಏನು ಮಾಡಬೇಕು? ಏನು ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಎಲ್ಲ ಇಲಾಖಾ ಅಧಿಕಾರಿಗಳು ಚರ್ಚಿಸಿ ಕಟ್ಟು ನಿಟ್ಟಾಗಿ ವೈರಸ್ ಹರಡುವಿಕೆ ತಡೆಗಟ್ಟಲು ಮುಂದಾಗಬೇಕು ಎಂದರು. ಹೊರದೇಶ ಮತ್ತು ಹೊರರಾಜ್ಯಗಳಿಂದ ಒಟ್ಟು 11 ಸಾವಿರ ಜನರು ಬಂದಿದ್ದು, ಅವರನ್ನೆಲ್ಲ ಹೋಂ ಕ್ವಾರಂಟೈನ್ ಮಾಡಿದ್ದು ಶ್ಲಾಘನೀಯ. ತಾಲೂಕಾಡಳಿತ ಹಾಗೂ ಜಿಲ್ಲಾಡಳಿತ ಇಷ್ಟು ದಿನಗಳಿಂದ ಶ್ರಮವಹಿಸಿದ್ದಕ್ಕೆ ಅಭಿನಂದಿಸಿದರು. ಕಂದಾಯ ಉಪವಿಭಾಗಾಧಿ ಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಡಿವೈಎಸ್‌ಪಿ ಎಂ.ಬಿ. ಸಂಕದ್, ತಹಶೀಲ್ದಾರ್ ಚಿದಾನಂದ ಕುಲಕರ್ಣಿ, ತಾಪಂ ಇಒ ವಿಜಯಕುಮಾರ ಆಜೂರ, ಆರೋಗ್ಯ ಅಧಿಕಾರಿ ಡಾ| ಅರ್ಚನಾ ಕುಲಕರ್ಣಿ, ಕೃಷಿ ಇಲಾಖಾ ಅ ಧಿಕಾರಿ ಮಹಾದೇವಪ್ಪ ಏವೂರ, ತೋಟಗಾರಿಕೆ ಅ ಧಿಕಾರಿ ಹಿರೇಮಠ, ಉಮೇಶ ಲಮಾಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.