![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Apr 17, 2020, 4:57 AM IST
ಬೆಂಗಳೂರು: ದೊಡ್ಡ ಸಂಖ್ಯೆಯಲ್ಲಿ ಕೋವಿಡ್-19 ಪಾಸಿಟಿವ್ ಕೇಸ್‌ಗಳು ವರದಿಯಾಗಿರುವ ಮೈಸೂರು ಜಿಲ್ಲೆ ನಂಜನಗೂಡಿನ ಜುಬಿಲಿಯಂಟ್ ಜೆನೆರಿಕ್ ಕಂಪೆನಿಯ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ.
ಈ ಕುರಿತು “ಸೇವ್ ನಂಜನ ಗೂಡು ಫೋರಂ’ ಸಂಚಾಲಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದಿದ್ದು, ಈ ಪತ್ರ ವನ್ನು ಅರ್ಜಿಯನ್ನಾಗಿ ಪರಿವರ್ತಿಸಿ ಕೊಂಡು ಎ. 21ರಂದು ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯ ಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ಹೇಳಿದೆ.
ನಂಜನಗೂಡಿನಲ್ಲಿ 25ಕ್ಕೂ ಹೆಚ್ಚು ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಚೀನದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದ್ದ ಸಂದರ್ಭ ಅಲ್ಲಿಂದ ಕಂಟೈನರ್ 2019ರ ಡಿಸೆಂಬರ್‌ನಲ್ಲಿ ಇಲ್ಲಿಗೆ ಬಂದು ಹೋಗಿದೆ. ಹಲವು ಬಹುರಾಷ್ಟ್ರೀಯ ಕಂಪೆನಿಗಳ ಪ್ರತಿನಿಧಿಗಳು ಇಲ್ಲಿಗೆ ಬಂದು ಹೋಗಿದ್ದಾರೆ. ಆದ್ದರಿಂದ ಇಡೀ ನಂಜನಗೂಡು ಪಟ್ಟಣವನ್ನು ತಪಾಸಣೆಗೊಳಪಡಿಸಬೇಕು ಎಂದು ಎಂದು ಪತ್ರದಲ್ಲಿ ವಿವರಿಸಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.