ಇನ್ನು ಮನೆಮನೆಗಳಿಗೆ ಬರಲಿದೆ ದಿನಸಿ ಸಾಮಗ್ರಿ

ಫೋನ್‌ನಿಂದ ಆರ್ಡರ್‌ ಮಾಡಿ ತರಿಸಬಹುದು

Team Udayavani, Apr 17, 2020, 2:20 PM IST

ಇನ್ನು ಮನೆಮನೆಗಳಿಗೆ ಬರಲಿದೆ ದಿನಸಿ ಸಾಮಗ್ರಿ

ಅಳ್ನಾವರ: ಲಾಕ್‌ಡೌನ್‌ ಇದ್ದರೂ ಸಾರ್ವಜನಿಕರು ಅನವಶ್ಯಕವಾಗಿ ಓಡಾಡುವುದನ್ನು ತಡೆಗಟ್ಟಲು ಸ್ಥಳಿಯ ಆಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದು, ದಿನಸಿ ಮತ್ತು ಇತರೆ ಅಗತ್ಯ ವಸ್ತುಗಳನ್ನು ಮನೆಗಳಿಗೆ ತಲುಪಿಸಲು ಕಾರ್ಯಕ್ರಮ ರೂಪಿಸಲಾಗಿದೆ.

ತಾಲೂಕು ಆಡಳಿತ ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಿಗಳು ವ್ಯಾಪಾರಸ್ಥರ ಸಭೆ ನಡೆಸಿ ಈ ನಿರ್ಣಯ ಕೈಕೊಂಡಿದ್ದಾರೆ ಜನರಿಗೆ ತೊಂದರೆ ಆಗಬಾರದೆಂದು ದಿನಸಿ ಅಂಗಡಿಗಳನ್ನು ನಿತ್ಯ ಬೆಳಗ್ಗೆ 11ಗಂಟೆಯವರೆಗೆ ತೆರೆದಿಡಲು ಅನುಮತಿ ನೀಡಲಾಗಿತ್ತು. ಇದನ್ನೇ ನೆಪವಾಗಿಸಿಕೊಂಡ ಜನರು ಗುಂಪು ಗುಂಪಾಗಿ ಸುತ್ತುವುದು, ದ್ವಿಚಕ್ರ ವಾಹನಗಳಲ್ಲಿ ಓಡಾಡುವುದು ಕಂಡು ಬಂತು. ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿರಲಿಲ್ಲ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಪಟ್ಟಣದಲ್ಲಿರುವ ಎಲ್ಲಾ ವ್ಯಾಪಾರಸ್ಥರ ದೂರವಾಣಿ ಸಂಖ್ಯೆಗಳನ್ನು ಕರಪತ್ರದ ಮೂಲಕ ಪ್ರಚಾರ ಮಾಡಲಾಗಿದ್ದು, ಜನರು ತಮಗೆ ಸಮೀಪದ ಅಂಗಡಿಕಾರರಿಗೆ ಫೋನ್‌ ಮೂಲಕ ಆರ್ಡರ್‌ ಮಾಡಿ ವಸ್ತುಗಳನ್ನು ತರಿಸಿಕೊಳ್ಳಬಹುದಾಗಿದೆ. ಅಂಗಡಿಗಳ ಬಾಗಿಲು ತೆರೆದು ಸ್ಥಳದಲ್ಲೇ ಮಾರಾಟ ಮಾಡುವುದು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದ್ದು, ಇದಕ್ಕೆ ಆಸ್ಪದ ನೀಡದೆ ಎಲ್ಲರೂ ಸಹಕಾರ ನೀಡಬೇಕೆಂದು ತಹಶೀಲ್ದಾರ್‌ ಅಮರೇಶ ಪಮ್ಮಾರ ತಿಳಿಸಿದ್ದಾರೆ.

ಅಳ್ನಾವರ ಪಟ್ಟಣ ಒಂದು ಕಡೆ ಬೆಳಗಾವಿ ಇನ್ನೊಂದು ಕಡೆ ಉತ್ತರ ಕನ್ನಡ ಜಿಲ್ಲೆಗಳ ಗಡಿಗೆ ಹೊಂದಿಕೊಂಡಿದ್ದು ಆ ಜಿಲ್ಲೆಗಳ ಜನರು ಅಳ್ನಾವರ ಪ್ರವೇಶಿಸುತ್ತಿದ್ದಾರೆ ಇದನ್ನು ತಡೆಯುವುದು ಅನಿವಾರ್ಯ ಎಂದು ಮನಗಂಡ ಆಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ ಹಾಲು ಮಾರಾಟಕ್ಕೂ ಸಮಯ ನಿಗದಿಪಡಿಸಿದ್ದು ಮನೆ ಮನೆಗೆ ತಲುಪಿಸಲು ಯಾವುದೆ ನಿರ್ಬಂಧ ವಿಧಿ ಸಿಲ್ಲ. ಅದೆ ರೀತಿ ಔಷಧ ಅಂಗಡಿಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ನಿಲ್ಲುವುದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಔಷಧ  ವ್ಯಾಪಾರಿಗಳಿಗೆ ಸೂಚಿಸಲಾಗಿದೆ. ನಾಳೆಯಿಂದ ಅನಗತ್ಯವಾಗಿ ಹೊರಗೆ ಓಡಾಡುವವರ ಮೇಲೆ ಕೇಸ್‌ ದಾಖಲಿಸುವುದಾಗಿ ತಿಳಿಸಿರುವ ಪಿಎಸ್‌ಐ ಕಣವಿ ಬೈಕ್‌ ಓಡಾಟಕ್ಕೂ ಬ್ರೇಕ್‌ ಹಾಕಲು ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗುವುದೆಂದು ಹೇಳಿದ್ದಾರೆ.

ಪಪಂ ಮುಖ್ಯಾಧಿಕಾರಿ ವಾಯ್‌.ಜಿ. ಗದ್ದಿಗೌಡರ ಮಾತನಾಡಿ,ತರಕಾರಿ ವ್ಯಾಪಾರಸ್ಥರು ತಮಗೆ ವಹಿಸಿಕೊಟ್ಟ ಬಡಾವಣೆಗಳಲ್ಲೇ ಮಾರಾಟ ಮಾಡಬೇಕು. ಯಾವುದೇ ಕಾರಣಕ್ಕೂ ಒಂದೇ ಸ್ಥಳದಲ್ಲಿ ಅಂಗಡಿ ಹಚ್ಚಿ ಮಾರಾಟ ಮಾಡುವಂತಿಲ್ಲವೆಂದು ತಿಳಿಸಿದರು. ಕಿರಾಣಿ ಮತ್ತು ತರಕಾರಿ ವ್ಯಾಪಾರಸ್ಥರು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-dr

Veerendra Heggade 77ನೇ ವರ್ಷಕ್ಕೆ ಪಾದಾರ್ಪಣೆ: ಗಣ್ಯರಿಂದ ಶುಭ ಹಾರೈಕೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.