ಎಪಿಎಂಸಿಗೆ ಉಸ್ತುವಾರಿ ಕಾರ್ಯದರ್ಶಿ ಭೇಟಿ
Team Udayavani, Apr 17, 2020, 4:08 PM IST
ರಾಯಚೂರು: ಎಪಿಎಂಸಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪ್ರಸನ್ನಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ರಾಯಚೂರು: ಕೃಷಿ ಉತ್ಪನ್ನ ಮಾರುಕಟ್ಟೆಗೆ ರೈತರು ತರುವ ಉತ್ಪನ್ನಗಳ ಮಾರಾಟಕ್ಕೆ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ, ಪರಸ್ಪರ ಅಂತರ ಕಾಯ್ದುಕೊಂಡು ಖರೀದಿ ಪ್ರಕ್ರಿಯೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಎಸ್.ಪ್ರಸನ್ನಕುಮಾರ್ ಸೂಚಿಸಿದರು.
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಎಪಿಎಂಸಿ ಯಾರ್ಡ್ನಲ್ಲಿ ಖಾಲಿ ಇರುವ ಸ್ಥಳಗಳಲ್ಲಿ ಸ್ಯಾನಿಟೈಸರ್, ರಾಸಾಯನಿಕಗಳನ್ನು ಸಿಂಪಡಿಸಬೇಕು. ಆ ವೇಳೆ ಆಹಾರ ಪದಾರ್ಥಗಳ ಮೇಲೆ ಯಾವುದೇ ಪರಿಣಾಮ ಬೀರದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು.
ಪ್ರತಿದಿನ ಭತ್ತ, ಶೇಂಗಾ, ಈರುಳ್ಳಿ ಸೇರಿದಂತೆ ತರಕಾರಿ, ಹಣ್ಣುಗಳ ಮಾರಾಟ ನಡೆಯಬೇಕು. ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಖರೀದಿಸಬೇಕು. ಈಗಾಗಲೇ ಭತ್ತ, ತೊಗರಿ, ಕಡಲೆ, ಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತಿದೆ. ವರ್ತಕರು, ರೈತರ ಹೆಸರಿನಲ್ಲಿ ಮಾರುವುದಕ್ಕೆ ಕಡಿವಾಣ ಹಾಕಬೇಕು ಎಂದು ಸೂಚಿಸಿದರು.
ಈ ವೇಳೆ ಎಸ್‌ಪಿ ಡಾ| ಸಿ.ಬಿ. ವೇದಮುರ್ತಿ, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ಎಪಿಎಂಸಿ ಕಾರ್ಯದರ್ಶಿ ರಂಗನಾಥ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Sandalwood: ‘ಕುಲದಲ್ಲಿ ಕೀಳ್ಯಾವುದೋ’ ಆಡಿಯೋ ಮಾರಾಟ
Darshan: ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.