“ಹೊರರಾಜ್ಯಗಳ ಮೀನಿನ ಲಾರಿಗಳಿಗೆ ಪ್ರತ್ಯೇಕ ಸ್ಥಳ’


Team Udayavani, Apr 18, 2020, 5:10 AM IST

“ಹೊರರಾಜ್ಯಗಳ ಮೀನಿನ ಲಾರಿಗಳಿಗೆ ಪ್ರತ್ಯೇಕ ಸ್ಥಳ’

ಮಂಗಳೂರು : ಹೊರ ರಾಜ್ಯಗಳಿಂದ ಮಂಗಳೂರಿಗೆ ಬೃಹತ್‌ ಲಾರಿಗಳ ಮೂಲಕ ಆಗಮಿಸುವ ಮೀನುಗಳನ್ನು ಚಿಲ್ಲರೆ ವ್ಯಾಪಾರಿಗಳಿಗೆ ಮಾರಾಟ ಮಾಡಲು ಹಳೆಬಂದರಿನ ಒಂದು ಪಾರ್ಶ್ವದಲ್ಲಿ ಶನಿವಾರದಿಂದ ಅವಕಾಶ ನೀಡಲಾಗುವುದು. ಆದರೆ ಇಲ್ಲಿಗೆ ಸಾರ್ವಜನಿಕ ಪ್ರವೇಶ ಇಲ್ಲ ಎಂದು ಶಾಸಕ ವೇದವ್ಯಾಸ ಕಾಮತ್‌ ಹೇಳಿದರು.

ಹಳೆಬಂದರು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭ ಸುದ್ದಿಗಾರರ ಜತೆಗೆ ಮಾತನಾಡಿದ ಅವರು ಹೊರರಾಜ್ಯಗಳ ಸುಮಾರು 25ರಷ್ಟು ಬೃಹತ್‌ ಲಾರಿಗಳು ಮೀನುಗಳ ಸಮೇತ ಮಂಗಳೂರಿಗೆ ಆಗಮಿಸುತ್ತಿವೆ. ಆದರೆ ಸದ್ಯ ಅವರಿಗೆ ಸೂಕ್ತ ಸ್ಥಳಾವಕಾಶವಿರಲಿಲ್ಲ. ಹೀಗಾಗಿ ಹಳೆ ಬಂದರಿನಲ್ಲಿ ಶನಿವಾರ ರಾತ್ರಿಯಿಂದ ಚಿಲ್ಲರೆ ಮಾರಾಟಗಾರರಿಗೆ ಮೀನು ಅನ್‌ಲೋಡ್‌ ಮಾಡಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮುಂಜಾವ 3 ಗಂಟೆಯಿಂದ ಬೆಳಗ್ಗೆ 8 ಗಂಟೆಯ ಒಳಗೆ ಈ ಪ್ರಕ್ರಿಯೆ ನಡೆಯಬೇಕು. ಟೆಂಪೋದಲ್ಲಿ ಬರುವ ಸಣ್ಣ ವ್ಯಾಪಾರಸ್ಥರಿಗೆ ಮಾತ್ರ ಇಲ್ಲಿಗೆ ಪ್ರವೇಶವಿದ್ದು, ಸಾರ್ವಜನಿಕರಿಗೆ ಪ್ರವೇಶವಿಲ್ಲ. ಸಾಮಾಜಿಕ ಅಂತರ ಪಾಲಿಸಿಕೊಂಡು ಮಾರಾಟಗಾರರು ಇಲ್ಲಿಂದ ಮೀನು ಖರೀದಿಸಿ ತೆರಳಬೇಕು ಎಂದರು. ಆ ಬಳಿಕ ಸೆಂಟ್ರಲ್‌ ಮಾರುಕಟ್ಟೆ, ಪುರಭವನದ ಬದಿ, ಹಳೆಯ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿದ ಶಾಸಕರ ತಂಡ ತರಕಾರಿ, ಹಣ್ಣು ಮಾರಾಟ ಮಾಡುವವರಿಗೆ ಆಗಬೇಕಾದ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿತು.

ಶಾಸಕರು ಮಾತನಾಡಿ, ಸೆಂಟ್ರಲ್‌ ಮಾರುಕಟ್ಟೆಯಲ್ಲಿದ್ದ ರಿಟೇಲ್‌ ವ್ಯಾಪಾರ ಸ್ಥರಿಗೆ ನಗರದ ನೆಹರೂ ಮೈದಾನದ ಬಳಿಯ ನಿಗದಿತ ಜಾಗದಲ್ಲಿ 3 ತಿಂಗಳು ಗಳ ಅವಧಿಗೆ ತಾತ್ಕಾಲಿಕ ಕಟ್ಟಡ ನಿರ್ಮಾಣವಾಗಲಿದೆ. ಅಲ್ಲಿಯವರೆಗೆ ಪುರಭವನದ ಬದಿಯಲ್ಲಿ ಅಥವಾ ಹಳೆ ಬಸ್‌ ನಿಲ್ದಾಣದಲ್ಲಿ ಶೀಟ್‌ ಹಾಕಿ ಮಾರಾಟಕ್ಕೆ ಅವಕಾಶ ಮಾಡಿಕೊಡುವ ಬಗ್ಗೆ ಶನಿವಾರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಶಾಸಕ ಯು.ಟಿ. ಖಾದರ್‌, ಮೇಯರ್‌ ದಿವಾಕರ್‌ ಪಾಂಡೇಶ್ವರ, ಸ್ಥಾಯೀ ಸಮಿತಿ ಅಧ್ಯಕ್ಷೆ ಪೂರ್ಣಿಮಾ, ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್‌ ನಜೀರ್‌, ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಹರೀಶ್‌ ಕುಮಾರ್‌, ಸಹಾಯಕ ಉಪನಿರ್ದೇಶಕ ದಿಲೀಪ್‌ ಕುಮಾರ್‌ ಮಾಜಿ ಮೇಯರ್‌ ಅಶ್ರಫ್‌, ಮುಸ್ತಫ, ಇಬ್ರಾಹಿಂ ಮೊದಲಾದವರಿದ್ದರು.

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.