ಅಡಿಕೆಗಿದೆ ಬೇಡಿಕೆ; ಆತಂಕ ಬೇಡ: ಎಸ್.ಆರ್. ಸತೀಶ್ಚಂದ್ರ
Team Udayavani, Apr 18, 2020, 8:43 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಅಡಿಕೆಗೆ ಉತ್ತರ ಭಾರತದಲ್ಲಿ ಬೇಡಿಕೆ ಇದ್ದು, ಯಾವುದೇ ಕಾರಣಕ್ಕೂ ಧಾರಣೆ ಕುಸಿಯುವುದಿಲ್ಲ; ಬೆಳೆಗಾರರು ಆತಂಕಕ್ಕೆ ಒಳಗಾಗಬೇಕಾಗಿಲ್ಲ. ಲಾಕ್‌ಡೌನ್ ಮುಗಿದ ಬಳಿಕ ಕೆಲವೇ ದಿನಗಳಲ್ಲಿ ಮಾರುಕಟ್ಟೆ ಸಹಜ ಸ್ಥಿತಿಗೆ ಬರಲಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಅಡಿಕೆ ಹೇಳಿದ್ದಾರೆ.
ಕ್ಯಾಂಪ್ಕೋದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಬೆಳೆಗಾರರ ಸಭೆಯಲ್ಲಿ ಅವರು ಮಾತನಾಡಿದರು. ಅಡಿಕೆಗೆ ಬೇಡಿಕೆ ಇದ್ದರೂ ಅದರ ಅನಂತರದ ಸಂಸ್ಕರಣೆ ಈಗ ಸಾಧ್ಯವಾಗುತ್ತಿಲ್ಲ. ಉತ್ತರ ಭಾರತದಿಂದ ಸಾಕಷ್ಟು ಬೇಡಿಕೆ ಇದ್ದರೂ ಪೂರೈಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಧಾರಣೆ ಕುಸಿಯುವುದಿಲ್ಲ. ಈಗಾಗಲೇ ಶೇ. 30ರಷ್ಟು ಕಡಿಮೆ ದಾಸ್ತಾನು ಇದೆ. ಉತ್ತರ ಭಾರತದಲ್ಲೂ ಸಾಕಷ್ಟು ಅಡಿಕೆ ಕೊರತೆ ಇದೆ ಎಂದರು. ಈ ನಡುವೆ ಕ್ಯಾಂಪ್ಕೋದಲ್ಲಿ ಠೇವಣಿ ಇಡಲೂ ಅನೇಕರು ಮುಂದೆ ಬಂದಿರುವುದು ಆಶಾದಾಯಕ ಬೆಳವಣಿಗೆ ಎಂದರು.
ಗ್ರಾಮೀಣ ಭಾಗಗಳಲ್ಲೂ ಅಡಿಕೆ ಖರೀದಿಸುವಂತೆ ಬೆಳೆಗಾರರು ಬೇಡಿಕೆ ಮುಂದಿಟ್ಟರು. ಇದಕ್ಕೆ ಉತ್ತರಿಸಿದ ಅಧ್ಯಕ್ಷರು, ಮುಂದಿನ ದಿನಗಳಲ್ಲಿ ಖರೀದಿಸಲಾಗುವುದು. ಕೆಲವು ಸಹಕಾರಿ ಸಂಘಗಳು ಕ್ಯಾಂಪ್ಕೋ ಜತೆ ಕೈಜೋಡಿಸಲು ಮುಂದೆ ಬಂದಿವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.