![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 18, 2020, 9:22 AM IST
ಮಂಗಳೂರು: ಸೆಂಟ್ರಲ್ ಮಾರುಕಟ್ಟೆಯ ತರಕಾರಿ ಹಣ್ಣು ಸಗಟು ವ್ಯಾಪಾರ ಬೈಕಂಪಾಡಿಗೆ ಸ್ಥಳಾಂತರಗೊಂಡಿದ್ದು, ವ್ಯಾಪಾರಸ್ಥರಿಗೆ ಸ್ಥಳ ನಿಗದಿಪಡಿಸುವ ಕಾರ್ಯವನ್ನು ಎಪಿಎಂಸಿ ಒಂದೆರಡು ದಿನಗಳಲ್ಲಿ ಮಾಡಲಿದೆ. ಜತೆಗೆ ಸೆಂಟ್ರಲ್ ಮಾರುಕಟ್ಟೆಯಲ್ಲಿದ್ದ ರಿಟೇಲ್ ವ್ಯಾಪಾರಸ್ಥರಿಗೆ ನಗರದ ನೆಹರೂ ಮೈದಾನದ ಬಳಿಯ ನಿಗದಿತ ಜಾಗದಲ್ಲಿ ಮೂರು ತಿಂಗಳ ಅವಧಿಯಲ್ಲಿ ತಾತ್ಕಾಲಿಕ ಕಟ್ಟಡ ನಿರ್ಮಾಣವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 15 ದಿನಗಳಲ್ಲಿ ತಾತ್ಕಾಲಿಕ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಉಳಿದಂತೆ ಸೆಂಟ್ರಲ್ ಮಾರುಕಟ್ಟೆ ಜಾಗದಲ್ಲಿ ಸ್ಮಾರ್ಟ್ ಮಾರುಕಟ್ಟೆ 3 ವರ್ಷಗಳಲ್ಲಿ ತಲೆ ಎತ್ತಲಿದೆ. ಕೊರೊನಾ ನಿಯಂತ್ರಣಕ್ಕೆ ಬಂದು ಲಾಕ್‌ಡೌನ್ ತೆರವುಗೊಂಡಾಗ ಸೆಂಟ್ರಲ್ ಮಾರುಕಟ್ಟೆಯಲ್ಲಿದ್ದ ಇತರ ರಿಟೇಲ್ ವ್ಯಾಪಾರಸ್ಥರಿಗೂ ನೆಹರೂ ಮೈದಾನ ಬಳಿಯ ತಾತ್ಕಾಲಿಕ ಮಾರುಕಟ್ಟೆ ಕಟ್ಟಡದಲ್ಲಿ ವ್ಯವಸ್ಥೆ ಆಗಲಿದೆ ಎಂದರು.
ಶಾಸಕರಿಬ್ಬರ ಮಾತಿನ ಚಕಮಕಿ
ಸೆಂಟ್ರಲ್ ಮಾರುಕಟ್ಟೆಯ ತರಕಾರಿ ಹಾಗೂ ಹಣ್ಣುಹಂಪಲು ಸಗಟು ವ್ಯಾಪಾರ ಬೈಕಂಪಾಡಿಯ ಎಪಿಎಂಸಿಗೆ ಸ್ಥಳಾಂತರವಾಗಿದೆ. ಆದರೆ ಅಲ್ಲಿ ಸೂಕ್ತ ವ್ಯವಸ್ಥೆ ಇಲ್ಲವೆಂಬ ಆರೋಪ ವ್ಯಾಪಾರಿಗಳದ್ದಾಗಿದೆ. ಜತೆಗೆ ರಿಟೇಲ್ ವ್ಯಾಪಾರಸ್ಥರಿಗೆ ಸೂಕ್ತ ಸ್ಥಳ ನಿಗದಿಪಡಿಸಲಾಗಿಲ್ಲ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್ ಹಾಗೂ ಯು.ಟಿ. ಖಾದರ್ ನಡುವೆ ಮಾತಿನ ಚಕಮಕಿ ನಡೆಯಿತು.
ಆಳಸಮುದ್ರ ಮೀನುಗಾರಿಕೆ ಸದ್ಯ ಕಷ್ಟ : ಕೋಟ
ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಗತ್ಯ. ಹಾಗಾಗಿ ಬಂದರು ಪ್ರದೇಶದ ಮೂಲಕ ಪರ್ಸಿನ್ ಹಾಗೂ ಯಾಂತ್ರೀಕೃತ ದೋಣಿಗಳ ಮೂಲಕ ಆಳ ಸಮುದ್ರದ ಮೀನುಗಾರಿಕೆಗೆ ಅವಕಾಶ ಸದ್ಯ ನೀಡಿದರೆ ನಿಯಂತ್ರಣ ಕಷ್ಟ. ಹೊರ ರಾಜ್ಯಗಳಿಂದ ಈಗ ಮಂಗಳೂರಿಗೆ ಬರುವ 10ರಿಂದ 20ರಷ್ಟು ಮೀನಿನ ಲಾರಿಗಳಲ್ಲಿ ಬರುವ ಸಗಟು ಮೀನು ಮಾರಾಟವನ್ನು ಎಪಿಎಂಸಿ, ಸುರತ್ಕಲ್ ಹಾಗೂ ಜಪ್ಪಿನಮೊಗರು ಮೈದಾನದಲ್ಲಿ ಸ್ಥಳ ಹಾಗೂ ಸಮಯ ನಿಗದಿಪಡಿಸಿ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸಚಿವ ಶ್ರೀನಿವಾಸ ಪೂಜಾರಿ ಸೂಚಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.