ಲಾಕ್‌ಡೌನ್‌ ಉಲ್ಲಂಘಿಸಿದವರಿಗೆ ಬಿಸಿ

ಅನಾವಶ್ಯಕವಾಗಿ ತಿರುಗಾಡುತ್ತಿದ್ದ 130ಕ್ಕೂ ಹೆಚ್ಚು ಮಂದಿ ವಶಕ್ಕೆ ವಾಗ್ವಾದಕ್ಕಿಳಿದವರಿಗೆ ಬುದ್ಧಿವಾದ

Team Udayavani, Apr 18, 2020, 11:13 AM IST

18-April-03

ದಾವಣಗೆರೆ: ನಗರದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ, ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ.

ದಾವಣಗೆರೆ: ಲಾಕ್‌ಡೌನ್‌ ಉಲ್ಲಂಘಿಸಿ ನಗರದಲ್ಲಿ ಶುಕ್ರವಾರ ರಸ್ತೆಗೆ ಇಳಿದಿದ್ದವರಿಗೆ ಪೊಲೀಸರು ಭರ್ಜರಿಯಾಗಿಯೇ ಬಿಸಿ ಮುಟ್ಟಿಸಿದ್ದಾರೆ.

ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ನೇತೃತ್ವದಲ್ಲಿ ನಿಜಲಿಂಗಪ್ಪ ಬಡಾವಣೆ ಮುಖ್ಯ ರಸ್ತೆ, ಶಾಮನೂರು ರಸ್ತೆ, ವಿನೋಬ ನಗರ 2ನೇ ಮುಖ್ಯ ರಸ್ತೆ, ಹಳೆ ಪಿಬಿ ರಸ್ತೆ, ಹೊಂಡದ ವೃತ್ತ, ಹಗೇದಿಬ್ಬ ವೃತ್ತ, ಆಜಾದ್‌ ನಗರ, ಬಾಷಾನಗರ ಮುಖ್ಯ ರಸ್ತೆ, ಮುಸ್ತಫಾ ನಗರ, ಆರ್‌ಎಂಸಿ ಯಾರ್ಡ್‌ ಇತರೆ ಭಾಗದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅನಾವಶ್ಯಕವಾಗಿ ತಿರುಗಾಡುತ್ತಿದ್ದ 130ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿರುವ ಸಮುದಾಯ ಭವನಕ್ಕೆ ರವಾನಿಸಲಾಯಿತು.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಯಾರೂ ಮನೆಯಿಂದ ಹೊರಬರಬಾರದು. ನಿಮಗಾಗಿ ನಾವು ಬೀದಿಯಲ್ಲಿದ್ದೇವೆ. ದಯಮಾಡಿ ನೀವು ಮನೆಯಲ್ಲಿಯೇ ಇರಿ…, ಕೊರೊನಾ ವೈರಸ್‌ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲಿದೆ. ಅಜಾಗರೂಕತೆ ಸರಿಯಲ್ಲ. ಮನೆಯಲ್ಲಿ ಇದ್ದರೆ ಮನೆತನ…. ಹೊರಗಡೆ ಬಂದರೆ ಡೆಡ್ಲಿ ಕೊರೊನಾ.. ಎಂಬುದಾಗಿ ಇದೇ ವೇಳೆ ಪ್ರಚುರಪಡಿಸಲಾಯಿತು. ಸಮುದಾಯ ಭವನದಲ್ಲಿದ್ದವರ ಕೈಗೆ.. ಕ್ಷಮಿಸಿ ನಾನು ಲಾಕ್‌ಡೌನ್‌ ಉಲ್ಲಂಘನೆ ಮಾಡಿದ್ದೇನೆ… ಎಂಬ ನಾಮಫಲಕ ನೀಡಿ ತಿಳಿವಳಿಕೆ ಹೇಳಲಾಯಿತು. ಎಲ್ಲರಿಗೂ ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿಗಳು ಥರ್ಮಲ್‌ ಸ್ಕ್ರೀನಿಂಗ್‌ ಒಳಗೊಂಡಂತೆ ಇತರೆ ತಪಾಸಣೆ ನಡೆಸಿದರು.

ವಿನೋಬ ನಗರ 2ನೇ ಮುಖ್ಯ ರಸ್ತೆಯಲ್ಲಿ ಓರ್ವ ಬೈಕ್‌ ಸವಾರನನ್ನ ಖುದ್ದು ತಡೆದ ಎಸ್ಪಿ ಹನುಮಂತರಾಯ, ಸರಿಯಾಗಿಯೇ ಬಿಸಿ ಮುಟ್ಟಿಸಿ ವಶಕ್ಕೆ ತೆಗೆದುಕೊಂಡರು. ಹಳೆ ಪಿಬಿ ರಸ್ತೆಯಲ್ಲಿ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ಬೈಕ್‌ ಸವಾರನನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಆಜಾದ್‌ನಗರ, ಬಾಷಾ ನಗರ ಮುಖ್ಯ ರಸ್ತೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ, ಎಸ್ಪಿ ಹನುಮಂತರಾಯ ಬೈಕ್‌ ಸವಾರರು, ದಾರಿಹೋಕರಿಗೆ ತಿಳಿ ಹೇಳಿದರು. ಕೆಲವರನ್ನು ವಶಕ್ಕೆ ಸಹ ಪಡೆದರು. ಪೊಲೀಸರನ್ನು ಕಂಡು ಓಡಿ ಹೋಗಲು ಯತ್ನಿಸಿದವರನ್ನು ಬೆನ್ನಟ್ಟಿ ಹಿಡಿಯಲಾಯಿತು.

ಟಾಪ್ ನ್ಯೂಸ್

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.