ದೇವಿಕೆರಾ ಹೊಲದಲ್ಲಿದ್ದ 180 ಅಕ್ಕಿ ಚೀಲ ವಶ
Team Udayavani, Apr 18, 2020, 11:56 AM IST
ಸುರಪುರ: ತಹಶೀಲ್ದಾರ್ ನಿಂಗಣ್ಣ ಬಿರಾದಾರ ನೇತೃತ್ವ ತಂಡ ಗೋದಾಮಿನ ಮೇಲೆ ದಾಳಿ ನಡೆಸಿತು.
ಸುರಪುರ: ತಾಲೂಕಿನ ದೇವಿಕೇರಾ ಗ್ರಾಮದ ಹತ್ತಿರದ ಹೊಲವೊಂದರ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅಕ್ಕಿ ಚೀಲಗಳನ್ನು ತಹಶೀಲ್ದಾರ್ ನೇತೃತ್ವದ ತಂಡ ಗುರುವಾರ ರಾತ್ರಿ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ತಹಶೀಲ್ದಾರ್ ಬಿರಾದಾರ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 35 ಕೆಜಿ ತೂಕದ 180 ಅಕ್ಕಿ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.
ಫಜಲ್ ಮತ್ತು ಮುಬಾರಕ್ ಎಂಬುವವರಿಗೆ ಗೋದಾಮು ಸೇರಿದ್ದಾಗಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಯಾರೊಬ್ಬ ಮಾಲೀಕನು ಭೇಟಿ ನೀಡಿಲ್ಲ ಎಂದು ಅಧಿ ಕಾರಿಗಳು ತಿಳಿಸಿದ್ದಾರೆ. ಅಕ್ರಮವಾಗಿ ದಾಸ್ತಾನು ಮಾಡಿದ್ದ ಅಕ್ಕಿ ಪಡಿತರ ಅಥವಾ ಶಿಶು ಅಭಿವೃದ್ಧಿ ಇಲಾಖೆಗೆ ವಿತರಿಸಿದ್ದೇ ಎಂಬುದನ್ನು ತಿಳಿಯಲು ಆಹಾರ ಪೂರೈಕೆ ಇಲಾಖೆಗೆ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ. ಆಹಾರ ನಿರೀಕ್ಷಕ ಅಪ್ಪಯ್ಯ ಹಿರೇಮಠ, ಶಿಶು ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ಲಾಲ್‌ಸಾಬ್ ಪೀರಾಪುರ ಅವರನ್ನು ಸ್ಥಳಕ್ಕೆ ಕರೆಸಿ ತಪಾಸಣೆ ನಡೆಸಲಾಗಿದೆ.
ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ತಹಶೀಲ್ದಾರ್ ಬಿರಾದಾರ ತಿಳಿಸಿದ್ದಾರೆ. ದಾಳಿಯಲ್ಲಿ ಪಿಎಸ್‌ಐ ಚಂದ್ರಶೇಖರ ನಾರಾಯಣಪುರ, ಕಂದಾಯ ನಿರೀಕ್ಷಕ ಗುರುಬಸಪ್ಪ ಪಾಟೀಲ, ಆಹಾರ ನಿರೀಕ್ಷಕ ಅಪ್ಪಯ್ಯ ಹಿರೇಮಠ, ಗ್ರಾಮ ಲೆಕ್ಕಿಗ ಪ್ರದೀಪಕುಮಾರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ
Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ
Parliament: ʼಪ್ಯಾಲೆಸ್ತೀನ್ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!
KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.